Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಆಕಾಶ್ ಬೈಜೂಸ್ ವಿದ್ಯಾರ್ಥಿಗಳಿಂದ ಉಡುಪಿಯ ಮಲ್ಪೆ ಬೀಚ್ ಸ್ವಚ್ಛತಾ ಅಭಿಯಾನ..!!!

Dhrishya News by Dhrishya News
20/10/2023
in ಕರಾವಳಿ, ಸುದ್ದಿಗಳು
0
0
SHARES
34
VIEWS
Share on FacebookShare on Twitter

ಉಡುಪಿ :ಆಕಾಶ್ ಬೈಜೂಸ್ ಉಡುಪಿಯ ಮಲ್ಪೆ ಬೀಚ್ ನಲ್ಲಿ ತನ್ನ “ಜಂಕ್ ದಿ ಪ್ಲಾಸ್ಟಿಕ್” ಅಭಿಯಾನಕ್ಕೆ ಚಾಲನೆ ನೀಡಿದೆ.
ಮಲ್ಪೆಯ ಕಡಲ ಕಿನಾರೆಯಲ್ಲಿ ಪ್ರವಾಸಿಗರು, ವೀಕ್ಷಕರು ಎಲ್ಲೆಂದರಲ್ಲಿ ಎಸೆದು ಹೋಗಿ ಪರಿಸರಕ್ಕೆ ಹಾನಿಯನ್ನುಂಟು ಮಾಡುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆಗೆದುಹಾಕುವುದಾಗಿದೆ. ಪ್ರತಿದಿನ ಆಗಮಿಸುವ ನೂರಾರು ಪ್ರವಾಸಿಗರು ತಾವು ಬಳಸಿದ ಪ್ಲಾಸ್ಟಿಕ್ ಅನ್ನು ಬಿಸಾಡುತ್ತಿರುವುದು ಹೆಚ್ಚಾಗಿದ್ದು, ಇದರಿಂದ ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂತಹ ತ್ಯಾಜ್ಯವನ್ನು ವಿಲೇವಾರಿ ಮಾಡುವುದರ ಜೊತೆಗೆ ಪ್ರವಾಸಿಗರಿಗೆ ಪರಿಸರ ಕಾಳಜಿಯ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಧ್ಯೇಯವಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಪರಿಸರಕ್ಕೆ ಹಾನಿಯಾಗುವ ರೀತಿಯಲ್ಲಿ ನಡೆದುಕೊಳ್ಳುವುದನ್ನು ಬದಲಾಯಿಸಿಕೊಳ್ಳುವಂತೆ ಅರಿವು ಮೂಡಿಸುವುದು ಪ್ರಮುಖ ಗುರಿಯಾಗಿದೆ. ಅಲ್ಲದೇ, ಸಾಮೂಹಿಕವಾಗಿ ಪಾಲ್ಗೊಳ್ಳುವ ಮೂಲಕ ಕಡಲತೀರಗಳನ್ನು ಸ್ವಚ್ಛವಾಗಿಡುಗ ಮಹತ್ವವನ್ನು ಗುರುತಿಸುವ ನಿಟ್ಟಿನಲ್ಲಿ ಯುವ ಸಮುದಾಯಕ್ಕೆ ಪ್ರೇರಣೆ ನೀಡುವ ಉದ್ದೇಶವನ್ನು ಈ ಉಪಕ್ರಮ ಹೊಂದಿದೆ.

ಉಡುಪಿಯ ಆಕಾಶ್ ಬೈಜೂಸ್ ನ ಬೋಧಕ ಸಿಬ್ಬಂದಿ ಮತ್ತು ಶಾಖೆಯ ಸಿಬ್ಬಂದಿ ಹಾಗೂ ೫೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಆಕಾಶ್ ಎಜುಕೇಶನಲ್ ಸರ್ವೀಸಸ್ ಲಿಮಿಟೆಡ್ ನ ಪ್ರಾದೇಶಿಕ ನಿರ್ದೇಶಕ ಧೀರಜ್ ಕುಮಾರ್ ಮಿಶ್ರಾ ಅವರು ಮಾತನಾಡಿ, “ಆಕಾಶ್ ಬೈಜೂಸ್ ನಲ್ಲಿ ವಿದ್ಯಾರ್ಥಿಗಳಿಗೆ ಪ್ರಕೃತಿಯ ಬಗ್ಗೆ ಪ್ರೀತಿಯನ್ನು ಬೆಳೆಸಲು ನೆರವಾಗುವ ವಿಚಾರದಲ್ಲಿ ಉಡುಪಿಯನ್ನು ಸ್ವಚ್ಛಗೊಳಿಸಲು ಹಾಗೂ ನಮ್ಮ ಅದ್ಭುತ ನಗರ ನಿರ್ವಹಣೆಗೆ ಕೊಡುಗೆಯನ್ನು ನೀಡುವ ಭಾಗವಾಗಿರಲು ನಾವು ಸಂತೋಷಪಡುತ್ತೇವೆ ಎಂದರು.

ಮುಂಬರುವ ದಿನಗಳಲ್ಲಿ ದೇಶದ ಇತರ ಕರಾವಳಿ ನಗರಗಳಿಗೂ ಈ ಅಭಿಯಾನವನ್ನು ವಿಸ್ತರಣೆ ಮಾಡಲು ಆಕಾಶ್ ಬೈಜೂಸ್ ಉದ್ದೇಶಿಸಿದೆ. ಈಗಾಗಲೇ ಕಣ್ಣೂರು, ಕೋಝಿಕೋಡ್, ಚೆನ್ನೈ, ವಿಶಾಖಪಟ್ಟಣ, ಮುಂಬೈ ಮತ್ತು ಪಣಜಿಯ ಕಡಲ ಕಿನಾರೆಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಆಕಾಶ್ ಬೈಜೂಸ್ ನ ಹಿರಿಯ ಸಹಾಯಕ ನಿರ್ದೇಶಕ ಅನಿಲ್ ಕುಮಾರ್, ಸಹಾಯಕ ನಿರ್ದೇಶಕ ಶ್ಯಾಮ್ ಪ್ರಸಾದ್ ಮತ್ತು ಮುನ್ಸಿಪಲ್ ಆಯುಕ್ತರಾದ ರಾಯಪ್ಪ ಉಪಸ್ಥಿತರಿದ್ದರು.

Tags: #ಉಡುಪಿ#ಆಕಾಶ್ ಬೈಜೂಸ್#ಬೀಚ್ ಸ್ವಚ್ಛ#ನ್ಯೂಸ್
Previous Post

ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರೋತ್ಸಾಹಧನ : ಅರ್ಜಿ ಆಹ್ವಾನ..!!

Next Post

ಉಡುಪಿ ದೊಡ್ಡಣ್ಣ ಗುಡ್ಡೆ ಶ್ರೀಚಕ್ರ ಪೀಠ ಸುರಪೂಜಿತೆಯ ಸನ್ನಿಧಾನದಲ್ಲಿ ಜೋಡಿ ಲಲಿತ ಸಹಸ್ರ ಕದಳಿಯಾಗ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ದೊಡ್ಡಣ್ಣ ಗುಡ್ಡೆ ಶ್ರೀಚಕ್ರ ಪೀಠ ಸುರಪೂಜಿತೆಯ ಸನ್ನಿಧಾನದಲ್ಲಿ ಜೋಡಿ ಲಲಿತ ಸಹಸ್ರ ಕದಳಿಯಾಗ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check