Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News by Dhrishya News
21/10/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಬೆಂಗಳೂರು ಅ 21:ದ್ರಶ್ಯ ನ್ಯೂಸ್ :ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು.

ಪೊಲೀಸ್ ವ್ಯವಸ್ಥೆ ರಾಜ್ಯದ , ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ.

ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ‌ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು‌ ಕರೆ ನೀಡಿದರು.

ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎನ್ನುವ ಸೂಚನೆ ನೀಡಿದರು.

ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ ಎಂದರು.

ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದರು.

2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿ ದೇಶದಾದ್ಯಂತ ಹುತಾತ್ಮರಾದ ಎಲ್ಲಾ ರಕ್ಷಣಾ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸ್ಮರಿಸಿ ನಮನ ಸಲ್ಲಿಸಲಾಯಿತು.

Tags: #ಬೆಂಗಳೂರು#ಹುತಾತ್ಮ#ಸಿದ್ದರಾಮಯ್ಯ #ನ್ಯೂಸ್
Previous Post

ಹಿರಿಯಡ್ಕ: ಸವಾರನನ್ನು ದೂಡಿ ಪಲ್ಸರ್ ಬೈಕ್ ಸುಲಿಗೆ ; ಒಂದೇ ದಿನದಲ್ಲಿ ಬೈಕ್ ಸಹಿತ ಆರೋಪಿ ವಶಕ್ಕೆ..!!

Next Post

ಉಡುಪಿ : ಅ.25: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಅ.25: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check