Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿಶ್ವ ಬಂಟರ ಸಮ್ಮೇಳನ‌ ಉದ್ಘಾಟನೆ : ನಾಳೆ ಸಿಎಂ ಸಿದ್ಧರಾಮಯ್ಯ ಉಡುಪಿಗೆ..!!!

Dhrishya News by Dhrishya News
27/10/2023
in ಕರಾವಳಿ, ಸುದ್ದಿಗಳು
0
0
SHARES
88
VIEWS
Share on FacebookShare on Twitter

💥ನಿತಿನ್ ಗಡ್ಕರಿ, ಜಿ ಪರಮೇಶ್ವರ್, ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ

ಉಡುಪಿ: ಅಕ್ಟೋಬರ್: 27: ದೃಶ್ಯ ನ್ಯೂಸ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಕ್ಟೋಬರ್ 28 ಹಾಗೂ 29ರಂದು ವಿಶ್ವ ಬಂಟರ ಸಮ್ಮೇಳನ-2023 ( ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ) ಉಡುಪಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ. ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ವಿಶ್ವ ಬಂಟರ ಸಮ್ಮೇಳನ ಉದ್ಘಾಟನೆಗಾಗಿ ಉಡುಪಿಗೆ ಆಗಮಿಸಲಿದ್ದಾರೆ.

ಅಕ್ಟೋಬರ್ 28ರಂದು ಬೆಳಿಗ್ಗೆ 9 ಗಂಟೆಗೆ ಉಡುಪಿ‌ ನಗರದ ಬೋರ್ಡ್ ಹೈಸ್ಕೂಲ್ ನಲ್ಲಿ ಬೃಹತ್ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಮೆರವಣಿಗೆಯು ನಗರಸಭೆ, ಹಳೆ ಡಯಾನ , ಬಿಗ್ ಬಜಾರ್ ಮೂಲಕ ಅಜ್ಜರಕಾಡು ಭುಜಂಗ ಪಾರ್ಕ್ ಮಾರ್ಗವಾಗಿ ಅಜ್ಜರಕಾಡು ಮೈದಾನವನ್ನು ಪ್ರವೇಶಿಸಲಿದೆ. ಈ ಅದ್ದೂರಿ ಮೆರವಣಿಗೆಯಲ್ಲಿ ವಿವಿಧ ಭಾಗಗಳ ಸುಮಾರು 62 ಕ್ಕೂ ಅಧಿಕ ಬಂಟರ ಸಂಘಗಳ 6,000-7,000 ಕ್ಕೂ ಅಧಿಕ‌ ಮಂದಿ‌ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.
ಹಾಗೂ ವಿವಿಧ ಕಲಾ ತಂಡಗಳು, ಉಡುಪಿ ಕಡೆಗೋಲು ಕೃಷ್ಣ, ಕಟೀಲು ದುರ್ಗಾಪರಮೇಶ್ವರಿ ಹೀಗೆ ವಿವಿಧ ಸ್ತಬ್ಧ ಚಿತ್ರಗಳು, ಕಂಬಳದ ಕೋಣಗಳು, ಕೇರಳದ ತೈಯ್ಯಂ, ಹುಲಿ ವೇಷ, ಕೀಲುಕುದುರೆ ಗೊಂಬೆಗಳು, ಹೊನ್ನಾವರ ಬ್ಯಾಂಡ್ ಸೆಟ್, ಅಗೋಳಿ ಮಂಜಣ್ಣನ ವೇಷಧಾರಿ, ಚೆಂಡೆ, ವಾದ್ಯ, ಡೋಲು, ನಾಗಸ್ವರ, ಬಣ್ಣದ ಕೊಡೆಗಳು ಹಾಗೂ ವಿವಿಧ ವಿನೋದಾವಳಿಗಳು ಮೆರವಣಿಗಯೆ ಮೆರುಗು ಹೆಚ್ಚಿಸಲಿವೆ.

ಆ ಬಳಿಕ ಅಜ್ಜರಕಾಡು ಮೈದಾನದಲ್ಲಿ ಎಲ್ಲ ಬಂಟರ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಲಿದ್ದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ, ಇದೇ ಸಂದರ್ಭ ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಈ‌ ಸಂದರ್ಭದಲ್ಲಿ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಪಲಿಮಾರು ಮಠದ ಶ್ರೀ ವಿದ್ಯಾದೀಶ ತೀರ್ಥ ಶ್ರೀಪಾದರು, ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಬಾರ್ಕೂರು ಬಾರ್ಗವ ಮಹಾಸಂಸ್ಥಾನದ ಶ್ರೀ ಡಾ. ವಿಶ್ವ ಸಂತೋಷ್ ಭಾರತಿ ಶ್ರೀಪಾದರು, ಕೇಮಾರು ಸಾಂದೀಪನಿ ಆಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕಟೀಲು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಲಕ್ಷ್ಮಿ ನಾರಾಯಣ ಅಸ್ರಣ್ಣರು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ ಮತ್ತು ನೈನಿತಾ ಪ್ರವೀಣ್ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿರುವರು.

Tags: #ಉಡುಪಿ#ಸಿದ್ದರಾಮಯ್ಯ#ಉದ್ಘಾಟನೆ#ನ್ಯೂಸ್
Previous Post

ನ.4ರಿಂದ 6ರವರೆಗೆ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿಷೇಧ: ಚಿಕ್ಕಮಗಳೂರು ಜಿಲ್ಲಾಡಳಿತ..!!

Next Post

“ಇಂಡಿಯಾ ಮೊಬೈಲ್ ಕಾಂಗ್ರೆಸ್” ಪ್ರಧಾನಿ ಮೋದಿ ಅವರಿಂದ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

"ಇಂಡಿಯಾ ಮೊಬೈಲ್ ಕಾಂಗ್ರೆಸ್" ಪ್ರಧಾನಿ ಮೋದಿ ಅವರಿಂದ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check