Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಆಂಧ್ರ ರೈಲು ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ,18 ರೈಲು ರದ್ದು, 22 ಮಾರ್ಗ ಬದಲಾವಣೆ…!!

Dhrishya News by Dhrishya News
30/10/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
31
VIEWS
Share on FacebookShare on Twitter

ವಿಶಾಖಪಟ್ಟಣಂ:ಅಕ್ಟೋಬರ್ 30:ದ್ರಶ್ಯ ನ್ಯೂಸ್ :ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ 13 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ 7 ಜನರನ್ನು ಈಗಾಗಲೇ ಗುರುತಿಸಲಾಗಿದೆ ಮತ್ತು ಶವಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿಜಯನಗರಂ ಪೊಲೀಸ್ ವರಿಷ್ಠಾಧಿಕಾರಿ ಎಂ ದೀಪಿಕಾ ತಿಳಿಸಿದ್ದಾರೆ

ರಕ್ಷಣಾ ಕಾರ್ಯಾಚರಣೆ ಈಗ ಮುಗಿದಿದೆ. ಸಿಕ್ಕಿಬಿದ್ದ ಪ್ರಯಾಣಿಕರಿಗೆ ನಾವು ಬಸ್ಸುಗಳು ಮತ್ತು ರೈಲುಗಳನ್ನು ವ್ಯವಸ್ಥೆ ಮಾಡಿದ್ದೇವೆ. ಒಟ್ಟು 18 ರೈಲುಗಳನ್ನು ರದ್ದುಪಡಿಸಲಾಗಿದೆ ಮತ್ತು 22 ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ನಾವು ಇಂದು ಸಂಜೆ 4 ಗಂಟೆಯ ವೇಳೆಗೆ ಟ್ರ್ಯಾಕ್ ಅನ್ನು ತೆರವುಗೊಳಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಬಿಸ್ವಜಿತ್ ಸಾಹು ಹೇಳಿದ್ದಾರೆ

ಸಿಗ್ನಲಿಂಗ್ ಅನ್ನು ಲೋಕೋ ಪೈಲಟ್ ಗಮನಿಸಲಿಲ್ಲ. ಮಾನವ ದೋಷದಿಂದಲೇ ಈ ದುರಂತ ಸಂಭವಿಸಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಹಾನಿಗೊಳಗಾದ ಹಾಗೂ ಹಳಿ ತಪ್ಪಿದ ಕೋಚ್‌ಗಳನ್ನು ಹೊರತುಪಡಿಸಿ ಉಳಿದ ಕೋಚ್‌ಗಳನ್ನು ಸ್ಥಳದಿಂದ ತೆರವು ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹೇಳಿದ್ದಾರೆ. ನಿನ್ನೆ ಸಂಜೆ ಘಟನಾ ಸ್ಥಳದಿಂದ ಸೆರೆಯಾದ ಚಿತ್ರಗಳಲ್ಲಿ ಕೋಚ್‌ಗಳು ಉರುಳಿ ಬಿದ್ದಿರುವುದು ಹಾಗೂ ಜನರು ಸುತ್ತಲೂ ನಿಂತಿರುವುದನ್ನು ತೋರಿಸಿವೆ. 40 ಜನರು ಗಾಯಗೊಂಡಿದ್ದು, ಗಾಯಾಳುಗಳೆಲ್ಲರೂ ಆಂಧ್ರಪ್ರದೇಶದವರೇ ಆಗಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವಿಜಿನಗರಮ್‌ ಜಿಲ್ಲಾಡಳಿತ ಮಾಹಿತಿ ನೀಡಿದೆ.

ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ 10 ಲಕ್ಷ ರೂ ಪರಿಹಾರವನ್ನು ಘೋಷಿಸಲಾಗಿದೆ. ಹಾಗೆಯೇ ಘಟನೆಯಲ್ಲಿ ಗಂಬೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಹಾಗೆಯೇ ಸಣ್ಣಪುಟ್ಟ ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರ ಘೋಷಿಸಲಾಗಿದೆ ಎಂದು ರೈಲ್ವೆ ಸಚಿವರು ಹೇಳಿದ್ದಾರೆ.

ಈ ರೈಲು ಅಪಘಾತದಿಂದಾಗಿ 18 ರೈಲುಗಳ ಪ್ರಯಾಣವನ್ನು ರದ್ದು ಮಾಡಲಾಗಿದ್ದು, 22ಕ್ಕೂ ಹೆಚ್ಚು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ವಿಶಾಖಪಟ್ಟಣಂ ಮತ್ತು ಪಲಾಸ ನಡುವಿನ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ಹಳಿಗಳ ಮೇಲೆ ನಿಂತಿದ್ದಾಗ ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿ ದುರಂತ ಸಂಭವಿಸಿದೆ.

Tags: #ವಿಶಾಖಪಟ್ಟಣ#ರೈಲು ಅಪಘಾತ#ನ್ಯೂಸ್
Previous Post

“ಪುನೀತ್ ರಾಜ್ ಕುಮಾರ್ ” ಅಗಲಿ ಇಂದಿಗೆ ಎರಡು ವರ್ಷ : ಎಲ್ಲೆಡೆ “ಅಪ್ಪು” ಪುಣ್ಯಸ್ಮರಣೆ .!!

Next Post

ಕೇರಳ : ಕನ್ವೆನ್ಷನ್ ಹಾಲ್ನಲ್ಲಿ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೇರಳ : ಕನ್ವೆನ್ಷನ್ ಹಾಲ್ನಲ್ಲಿ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved