Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಾಹೆಯಲ್ಲಿ ಕರ್ನಾಟಕ ರಾಜ್ಯೋತ್ಸವ..!!

Dhrishya News by Dhrishya News
07/11/2023
in ಕರಾವಳಿ, ಸುದ್ದಿಗಳು
0
0
SHARES
39
VIEWS
Share on FacebookShare on Twitter

ಮಣಿಪಾಲ: ನವೆಂಬರ್ 07:ದ್ರಶ್ಯ ನ್ಯೂಸ್ : ಜಗತ್ತಿನ ಅಳಿಯುತ್ತಿರುವ ಭಾಷೆಗಳ ಪಟ್ಟಿಯಲ್ಲಿ ನಮ್ಮ ಸುತ್ತಮುತ್ತಲಿರುವ ಎಷ್ಟೋ ಭಾಷೆಗಳು ಕೂಡ ಇವೆ. ಒಂದು ಭಾಷೆಯ ಅಳಿವು ಎಂದರೆ ಒಂದು ಸಂಸ್ಕೃತಿಯ ಅವಸಾನವೇ ಸರಿ. ನಮ್ಮ ಮಾತೃಭಾಷೆಯನ್ನು ಉಳಿಸಿಕೊಳ್ಳುವುದರ ಮೂಲಕ ನಮ್ಮ ಸಂವೇದನಾಶೀಲತೆಯನ್ನು ಉಳಿಸಿಕೊಳ್ಳಬೇಕು. ನಮ್ಮ ಕೀಳರಿಮೆಯನ್ನು ಬಿಟ್ಟು ಕನ್ನಡದಲ್ಲಿಯೇ ಮಾತನಾಡಬೇಕು. ಆ ಮೂಲಕ ನಮ್ಮ ಕನ್ನಡ ಸಂಸ್ಕೃತಿಯನ್ನು ಉಳಿಸಬೇಕು’ ಎಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಹೇಳಿದರು.

ಅವರು ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ನ ಭಾಷಾ ವಿಭಾಗದ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಕೇಂದ್ರದ ವತಿಯಿಂದ ಮಣಿಪಾಲ ಮಾಹೆ ಕಟ್ಟಡದ ಕೌನ್ಸಿಲಿಂಗ್‌ ಸಭಾಂಗಣದಲ್ಲಿ ನವೆಂಬರ್‌ 6ರಂದು ಜರಗಿದ ಕರ್ನಾಟಕ ರಾಜ್ಯೋತ್ಸವ ಮತ್ತು ಮಾಹೆಯ ಸಂಸ್ಥಾಪಕ ಡಾ. ಟಿ. ಎಂ. ಎ. ಪೈಯವರ 125ನೆಯ ಜನ್ಮವರ್ಷಾಚರಣೆಯನ್ನು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮುಖ್ಯ ಅತಿಥಿಯಾಗಿ ಆಗಮಿಸಿ ‘ಕನ್ನಡ ಶಾಲೆ ಮತ್ತು ನಾನು’ ಎಂಬ ವಿಷಯದ ಬಗ್ಗೆ ಮಾತನಾಡಿದ ಅಂತಾರಾಷ್ಟ್ರೀಯ ಖ್ಯಾತಿಯ ಉದ್ಯಮಿ ಡಾ. ಎಚ್‌. ಎಸ್‌. ಶೆಟ್ಟಿಯವರು, ‘ಕನ್ನಡ ಶಾಲೆಯಿಂದ ಕಲಿತು ಮೇಲೆ ಬಂದಿದ್ದರಿಂದಲೇ ನಾನು ಸೂಕ್ಷ್ಮ್ಸ ಸಂವೇದನೆಯನ್ನು ಅಳವಡಿಸಿಕೊಳ್ಳುವುದಕ್ಕೆ ಸಾಧ್ಯವಾಯಿತು. ಎಲ್ಲ ಭಾಷೆಗಳು ಭಾವವನ್ನು ಪ್ರತಿನಿಧಿಸಲಾರವು. ನಮ್ಮ ನೋವನ್ನು, ಬೇಸರವನ್ನು ಅಭಿವ್ಯಕ್ತಿಸಲು ಮಾತೃಭಾಷೆಯೇ ಬೇಕು. ಇಂಗ್ಲಿಷ್‌ ಸೇರಿದಂತೆ ಎಲ್ಲ ಭಾಷೆಗಳನ್ನು ಕಲಿಯಬೇಕು, ಆದರೆ, ಕನ್ನಡವನ್ನು ಯಾವತ್ತೂ ಮರೆಯಬಾರದು’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಾಹೆಯ ಪ್ರೊ-ವೈಸ್‌ಛಾನ್ಸಲರ್‌ ಡಾ. ಶರತ್‌ ರಾವ್‌ ಅವರು ಅಧ್ಯಕ್ಷೀಯ ಭಾಷಣದಲ್ಲಿ, ‘ಡಾ. ಟಿ. ಎಂ. ಎ. ಪೈಯವರು ಸ್ಥಳೀಯ ಭಾಷೆ ಮತ್ತು ಸಂಸ್ಕೃತಿಗೆ ನೀಡಿದ ಕೊಡುಗೆಯನ್ನು ನೆನಪಿಸಿಕೊಂಡರು. ಡಾ. ಟಿ. ಎಂ. ಎ. ಪೈಯವರು ಹಾಕಿಕೊಟ್ಟ ಹಾದಿಯಲ್ಲಿ ಮಾಹೆ ಮುಂದುವರಿಯುತ್ತಿದೆ. ಕನ್ನಡ ಭಾಷೆ ಮತ್ತು ಪ್ರಾದೇಶಿಕ ಭಾಷೆಗಳಿಗೆ ಸಂಬಂಧಿಸಿದ ವಿಭಾಗವನ್ನು ತೆರೆದು ಎಲ್ಲ ಜ್ಞಾನಶಿಸ್ತುಗಳ ವಿದ್ಯಾರ್ಥಿಗಳಿಗೆ ಪ್ರಾದೇಶಿಕ ಭಾಷೆಯನ್ನು ಕಲಿತುಕೊಳ್ಳುವ ಅವಕಾಶ ನೀಡಲಾಗುತ್ತದೆ.’ ಎಂದರು.

ಭಾಷಾ ವಿಭಾಗದ ಮುಖ್ಯಸ್ಥ ಪ್ರೊ ರಾಹುಲ್‌ ಪುಟ್ಟಿ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಡಾ. ಪೃಥ್ವೀರಾಜ ಕವತ್ತಾರು ಸ್ವಾಗತಿಸಿದರು. ಕನ್ನಡ ಶಾಲಾ ಅಧ್ಯಾಪಕ ಮುರಲಿ ಕಡೆಕಾರ್‌ ಡಾ. ಎಚ್‌. ಎಸ್‌. ಶೆಟ್ಟಿಯವರ ಪರಿಚಯ ಮಾಡಿದರು. ಇಂಗ್ಲಿಷ್‌ ಪ್ರಾಧ್ಯಾಪಕ ಡಾ. ಅರವಿಂದ್‌ ಭಟ್‌ ಧನ್ಯವಾದ ಸಮರ್ಪಿಸಿದರು. ತತ್ತ್ವಶಾಸ್ತ್ರ ವಿಭಾಗದ ಎಂ. ವಿಷ್ಣುವರ್ಧನ್‌ ಕಾರ್ಯಕ್ರಮ ನಿರ್ವಹಿಸಿದರು.

Tags: #ಮಣಿಪಾಲ#ಮಹೇ#ಕೆಎಂಸಿ#ಕರ್ನಾಟಕ ರಾಜ್ಯೋತ್ಸವ#ನ್ಯೂಸ್
Previous Post

ಉಡುಪಿ :ಅಕ್ಷರದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಮತ್ತು ನಾಳೆ ಪ್ರತಿಭಟನೆ..!!

Next Post

ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News