Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : 15 ವರ್ಷಗಳ ಹಿಂದಿನ ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣ :ಆರೋಪಿಗೆ ಶಿಕ್ಷೆ..!!

Dhrishya News by Dhrishya News
11/11/2023
in ಕರಾವಳಿ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಉಡುಪಿ: ನವೆಂಬರ್ 11: 15 ವರ್ಷಗಳ ಹಿಂದಿನ ಪದ್ಮಪ್ರಿಯಾ ನಾಪತ್ತೆ, ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಕಲಿ ದಾಖಲೆ ಸೃಷ್ಟಿ, ಮೋಸ, ವಂಚನೆ ಆರೋಪದಲ್ಲಿ ಆರೋಪಿ ಅತುಲ್‌ ಭಟ್‌ಗೆ ಉಡುಪಿ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ನೀಡಿದೆ

ಮಾಜಿ ಶಾಸಕ ರಘುಪತಿ ಭಟ್‌ ಅವರ ಪತ್ನಿ ಪದ್ಮಪ್ರಿಯಾ ಅವರು 2008ರ ಜೂ. 10ರಂದು ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ರಘುಪತಿ ಭಟ್‌ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಅತುಲ್‌ ಭಟ್‌ ಮನೆಯಿಂದ ಪದ್ಮಪ್ರಿಯಾ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಕುಂಜಾರುಗಿರಿ ದಾರಿ ಮಧ್ಯೆ ಕಾರು ನಿಲ್ಲಿಸಿ ಮತ್ತು ಅದರ ಒಳಗೆ ಬಳೆ ಚೂರು, ರಕ್ತದ ಕಲೆ ಮಾಡಿ ಅಪಹರಣದ ನಾಟಕ
ಮಾಡಲಾಗಿತ್ತು ಎಂದು ದೂರಲಾಗಿದೆ.

ಕಾರನ್ನು ಅಲ್ಲೇ ಬಿಟ್ಟ ಅತುಲ್‌ ತನ್ನ ಕಾರಿನಲ್ಲಿ ಪದ್ಮಪ್ರಿಯಾ ಅವರನ್ನು ಕುಮಟಾದವರೆಗೆ ಕರೆದೊಯ್ದಿದ್ದ.ಕುಮಟಾಕ್ಕೆ ಬಾಡಿಗೆ ಚಾಲಕನನ್ನು ಕರೆಯಿಸಿ ತನ್ನ ಕಾರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದ. ಇತ್ತ ಪದ್ಮಪ್ರಿಯಾ ಅವರನ್ನು ಅತುಲ್‌ ಭಟ್‌ ಬಾಡಿಗೆ ಕಾರಿನಲ್ಲಿ ಕುಮಟಾದಿಂದ ಗೋವಾ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಿ ಅತುಲ್‌ ತನ್ನ ಪತ್ನಿ ಮೀರಾ ಅವರ ಡ್ರೈವಿಂಗ್‌ ಲೈಸನ್ಸ್‌ಗೆ ಪದ್ಮಪ್ರಿಯಾ ಅವರ ಫೋಟೋ ಅಂಟಿಸಿ, ಮೀರಾ ಹೆಸರಿನಲ್ಲಿ ಪದ್ಮಪ್ರಿಯಾ ಅವರನ್ನು ಗೋವಾ ವಿಮಾನ ನಿಲ್ದಾಣದ ಮೂಲಕ ದಿಲ್ಲಿಗೆ ಕರೆದುಕೊಂಡು ಹೋಗಿದ್ದ. ಈ ಘಟನೆ ನಡೆಯುವ ಮೊದಲು ದಿಲ್ಲಿಗೆ ಹೋಗಿದ್ದ ಅತುಲ್‌ ಅಲ್ಲೊಂದು ಬಾಡಿಗೆ ಮನೆ ಪಡೆದಿದ್ದ.

ಜೂ. 10ರಂದು ದಿಲ್ಲಿಗೆ ಹೋಗಿದ್ದ ಅತುಲ್‌, ಮರುದಿನ ಬೆಂಗಳೂರಿಗೆ ಬಂದು ಲಾಡ್ಜ್ ನಲ್ಲಿ ತಂಗಿದ್ದು, ಅಲ್ಲಿಂದ ಜೂ. 12ಕ್ಕೆ ಹೊರಟು ಮರುದಿನ ಉಡುಪಿಗೆ ತಲುಪಿ, ರಘುಪತಿ ಭಟ್‌ ಜತೆ ಪದ್ಮಪ್ರಿಯಾ ಅವರನ್ನು ಹುಡುಕುವ ನಾಟಕ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ರಘುಪತಿ ಭಟ್‌ ಅವರು 2008ರ ಜೂ. 19ರಂದು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಮಣಿಪಾಲ ಪೊಲೀಸರು ತನಿಖೆ ನಡೆಸಿ, ಬಳಿಕ ಸಿಒಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಆರೋಪಿ ವಿರುದ್ಧ ಸಿಒಡಿ ಪೊಲೀಸರು 2008ರ ಆ. 22ರಂದು ಪ್ರಾರಂಭಿಕ ಮತ್ತು 2009ರ ಜು. 29ರಂದು ಅಂತಿಮ ಚಾರ್ಜ್‌ಶೀಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರಲ್ಲಿ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಟಿ, ನಕಲಿ ದಾಖಲೆಯನ್ನು ನೈಜ ದಾಖಲೆ ಎಂಬುದಾಗಿ ಬಿಂಬಿಸಿ ಹಾಜರುಪಡಿಸಿ ದುರುಪಯೋಗಪಡಿಸಿರುವ ಬಗ್ಗೆ ಆರೋಪ ಮಾಡಲಾಗಿತ್ತು. ಇದರಲ್ಲಿ ರಘುಪತಿ ಭಟ್‌ ನೀಡಿರುವ ದೂರಿನಲ್ಲಿ ತಿಳಿಸಿರುವ ಪದ್ಮಪ್ರಿಯಾ ಅಪಹರಣ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪವನ್ನು ಸಾಕ್ಷ್ಯದ ಕೊರತೆ ಹಿನ್ನೆಲೆಯಲ್ಲಿ ಸಿಒಡಿ ಅಧಿಕಾರಿಗಳು ಕೈಬಿಟ್ಟಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್‌, ಆರೋಪಿ ಮೇಲಿನ ಆರೋಪಗಳು ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟು ಒಂದು ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ, ಐಪಿಸಿ 417, 465, 471 ಕಾಯಿದೆಯಡಿ ತಲಾ ಆರು ತಿಂಗಳು ಜೈಲು ಹಾಗೂ 5000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸಿಒಡಿ ಪರ ಪ್ರಕರಣದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯುಟರ್‌ ಶಿವಪ್ರಸಾದ್‌ ಆಳ್ವ ವಾದ ಮಂಡಿಸಿದ್ದರು.

Tags: #ಉಡುಪಿ#ಜೈಲು ಶಿಕ್ಷೆ#ನ್ಯೂಸ್
Previous Post

ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹುದಿನಗಳ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ…!!

Next Post

ಉಡುಪಿ : ನವೆಂಬರ್ 14ರಂದು ನಗರಸಭಾ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಇರುವುದಿಲ್ಲ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ನವೆಂಬರ್ 14ರಂದು ನಗರಸಭಾ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಇರುವುದಿಲ್ಲ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check