Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಮೃತ್ಯು : ಆಸ್ಪತ್ರೆ ಎದುರು ಸಾರ್ವಜನಿಕರ ಪ್ರತಿಭಟನೆ..!

Dhrishya News by Dhrishya News
23/11/2023
in ಕರಾವಳಿ, ಸುದ್ದಿಗಳು
0
0
SHARES
58
VIEWS
Share on FacebookShare on Twitter

ಸುರತ್ಕಲ್ : ನವೆಂಬರ್ 23: ದ್ರಶ್ಯ ನ್ಯೂಸ್ :ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿಯ ನಿವಾಸಿ ಅರ್ಫಾನ್(16 ವ) ಎಂಬಾತ ಸುರತ್ಕಲ್ ನ ಖಾಸಗಿ ಅಥರ್ವ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ

ಮುಕ್ಕದಲ್ಲಿ ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಅಪಘಾತ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ಮೊಯ್ದಿನ್‌ ಫರ್ಹಾನ್‌ ನನ್ನು ಸುರತ್ಕಲ್‌ ನಲ್ಲಿರುವ ಅಥರ್ವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತ ನಡೆದ ಬಳಿಕ ಬಾಲಕ ಮನೆಯವರು ಹಾಗು ಸ್ನೇಹಿತರೊಂದಿಗೆ ಮಾತನಾಡಿದ್ದಾನೆ ಎಂದು ತಿಳಿದುಬಂದಿದ್ದು, ತುರ್ತು ಶಸ್ತ್ರಚಿಕಿತ್ಸೆ ನಡೆಸಲು ಹೇಳಿದ್ದ ವೈದ್ಯಾಧಿಕಾರಿ ಶಸ್ತ್ರ ಚಿಕಿತ್ಸೆಯ ವೇಳೆ ನೀಡಿದ್ದ ಅನಸ್ತೇಶಿಯಾ ಓವರ್ ಡೋಸ್ ನೀಡಿದ ಪರಿಣಾಮ ಬಾಲಕ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ 9ಕ್ಕೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಮಧ್ಯಾಹ್ನವಾದರೂ ಎಚ್ಚರಗೊಳ್ಳದ ಬಾಲಕ ನಂತರ ಮೃತಪಟ್ಟಿರುವುದಾಗಿ ಹೇಳಲಾಗಿದ್ದು, ಶಸ್ತ್ರ ಚಿಕಿತ್ಸೆಯ ನೆಪದಲ್ಲಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ. ಈ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ

ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು. ಸ್ಥಳಕ್ಕೆ ಸಿಪಿಐಎಂ ಮುಖಂಡರಾದ ಮುನೀರ್ ಕಾಟಿಪಳ್ಳ, ಕಾಂಗ್ರೆಸ್ ಮುಖಂಡರಾದ ಇನಾಯತ್ ಅಲಿ, ಡಿವೈಎಫ್‌ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ಕಾಂಗ್ರೆಸ್ ಮುಖಂಡ ಪುರುಷೋತ್ತಮ ಚಿತ್ರಾಪುರ ಆಗಮಿಸಿ ಆಕ್ರೋಶಿತರನ್ನು ಸಮಾಧಾನಿಸಿದರು. ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ನ್ಯಾಯ ಒದಗಿಸಲು ಆಗ್ರಹಿಸಿದರು. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆಯ ಹಿನ್ನಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ಡಾ.ತಿಮ್ಮಯ್ಯ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ಮುಖಂಡರು, ಮೃತರ ಕುಟುಂಬಸ್ಥರು, ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು. ಮುಖಂಡರ ಬೇಡಿಕೆಯಂತೆ ಪ್ರಕರಣದ ತನಿಖೆಗಾಗಿ ಖಾಸಗಿ ವೈದ್ಯರನ್ನು ಒಳಗೊಂಡ ಎಂಟು ಜನ ತಜ್ಞ ವೈದ್ಯರ ತಂಡವನ್ನು ರಚಿಸುವುದಾಗಿ ಘೋಷಿಸಿದರು. ಕಾಲಮಿತಿಯ ಒಳಗಡೆ ವರದಿ ಪಡೆದು ಕ್ರಮ ಕೈಗೊಳ್ಳುವುದು, ತಪ್ಪಿತಸ್ಥ ವೈದ್ಯರ ಮೇಲೆ ಕ್ರಮ ಜರುಗಿಸುವುದಾಗಿ ತಿಳಿಸಿದರು.

Tags: #ಸುರತ್ಕಲ್ #ಬಾಲಕ#ಸಾವು#ನ್ಯೂಸ್
Previous Post

“ಎಲಿವೇಟ್– 2023″ನವೋದ್ಯಮಗಳಿಗೆ ₹50 ಲಕ್ಷದವರೆಗೆ ಅನುದಾನ : ಇಂದಿನಿಂದ ನೋಂದಣಿ ಆರಂಭ..!!

Next Post

ಜಮ್ಮು ಕಾಶ್ಮೀರದಲ್ಲಿ ಉಗ್ರರ ನಡುವೆ ಗುಂಡಿನ ಚಕಮಕಿ: ಮಂಗಳೂರಿನ ಯೋಧ ಹುತಾತ್ಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜಮ್ಮು ಕಾಶ್ಮೀರದಲ್ಲಿ ಉಗ್ರರ ನಡುವೆ ಗುಂಡಿನ ಚಕಮಕಿ: ಮಂಗಳೂರಿನ ಯೋಧ ಹುತಾತ್ಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check