Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಳೆದ 3ತಿಂಗಳಲ್ಲಿ 242 ಭ್ರೂಣ ಹತ್ಯೆ:ಬೆಂಗಳೂರುನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿಕೆ..!!

Dhrishya News by Dhrishya News
28/11/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಕಳೆದ 3 ತಿಂಗಳ ಅವಧಿಯಲ್ಲಿ ಸುಮಾರು 242 ಭ್ರೂಣ ಹತ್ಯೆ ಮಾಡಿದ್ದಾರೆ ಹಾಗೂ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆಸಿರುವುದು ತಿಳಿದು ಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ.

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ಆರೋಪಿಗಳು ಒಂದೂವರೆ ಸಾವಿರಕ್ಕೂ ಅಧಿಕ ಭ್ರೂಣ ಹತ್ಯೆ ಮಾಡಿಸಿರುವ ಸಂಚು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.

ಆರೋಪಿಗಳ ಪೈಕಿ ಭ್ರೂಣ ಲಿಂಗ ಪತ್ತೆಗೆ ಒಂದು ತಂಡ, ಹತ್ಯೆಗೆ ಮತ್ತೊಂದು ತಂಡ ಕೆಲಸ ಮಾಡಿದ್ದು, ಆರೋಪಿಗಳ ಕರೆ ವಿವರಗಳನ್ನು ಕಲೆಹಾಕಿದಾಗ ವೈದ್ಯರು ಸೇರಿದಂತೆ ಅನೇಕರ ಸಂಪರ್ಕ ಹೊಂದಿರುವುದು ಪತ್ತೆಯಾಗಿದೆ.

ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದವರನ್ನು ಸಂಪರ್ಕಿಸಲು ಪೊಲೀಸರು ಪ್ರಯತ್ನಿಸುತ್ತಿದ್ದು, ಪ್ರಕರಣ ಬಯಲಾಗುತ್ತಿದ್ದಂತೆ ಅನೇಕರು ಫೋನ್ ಕರೆ ಸ್ವೀಕರಿಸುತ್ತಿಲ್ಲ ಎಂಬುದು ತಿಳಿದು ಬಂದಿದೆ. ಆರೋಪಿಗಳು ವ್ಯವಸ್ಥಿತವಾಗಿ ಜಾಲ ರೂಪಿಸಿಕೊಂಡು ದುಷ್ಕೃತ್ಯ ಎಸಗುತ್ತಿದ್ದು, ಪ್ರಕರಣದಲ್ಲಿ ಇಲ್ಲಿಯವರೆಗೆ 9 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರೆಲ್ಲರೂ ಮೂಲತಃ ಮೈಸೂರು ಹಾಗೂ ಮಂಡ್ಯದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಡ್ಯದ ಆಲೆಮನೆ, ಮೈಸೂರು ಹಾಗೂ ಬೆಂಗಳೂರಿನ ಬೈಯಪ್ಪನಹಳ್ಳಿಯ ಆಸ್ಪತ್ರೆಗಳಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದರು. ಮಧ್ಯವರ್ತಿಗಳ ಮೂಲಕ ಮಹಿಳೆಯರನ್ನು ಕರೆ ತರಲಾಗುತ್ತಿತ್ತು. ಒಂದು ಭ್ರೂಣ ಹತ್ಯೆಗೆ 20 ಸಾವಿರ ರೂಪಾಯಿನಂತೆ ಪಡೆದು ಕೃತ್ಯ ಎಸಗುತ್ತಿದ್ದರು.

ಹೆಣ್ಣು ಭ್ರೂಣ ಪತ್ತೆ, ಹಾಗೂ ಗರ್ಭಪಾತ ಮಾಡಿಸುತ್ತಿದ್ದ ಜಾಲದ ಕುರಿತು ಮಾಹಿತಿ ಪಡೆದಿದ್ದ ಬೈಯಪ್ಪನಹಳ್ಳಿ ಪೊಲೀಸರು ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, ನವೀನ್ ಕುಮಾರ್ ಮತ್ತು ನಯನ್ ಕುಮಾರ್ ಎಂಬುರನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು ಗರ್ಭಿಣಿಯರನ್ನು ಗುರುತಿಸಿಕೊಂಡು ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನ್ ಮಾಡಿಸುತ್ತಿದ್ದರು. ಬಳಿಕ ಹೆಣ್ಣು ಭ್ರೂಣವಾದರೆ ಗರ್ಭಪಾತ ಮಾಡಿಸುತ್ತಿದ್ದರು ಅನ್ನೋದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿತ್ತು

Tags: #ಬೆಂಗಳೂರು#ಹತ್ಯೆ#ಬಿ.ದಯಾನಂದ#ನ್ಯೂಸ್
Previous Post

ನೇಜಾರು ಕೊಲೆ ಪ್ರಕರಣದ ಆರೋಪಿ ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್…!!

Next Post

ನಾಳೆ( ನ.29) ಮಂತ್ರ ಮಾಂಗಲ್ಯದ ಮೂಲಕ ನಟಿ ಪೂಜಾ ಗಾಂಧಿ ಮದುವೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ( ನ.29) ಮಂತ್ರ ಮಾಂಗಲ್ಯದ ಮೂಲಕ ನಟಿ ಪೂಜಾ ಗಾಂಧಿ ಮದುವೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check