Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಚಿಕ್ಕಮಗಳೂರು; ಹೆಲ್ಮೆಟ್ ಹಾಕದ ಕಾರಣ ಲಾಯರ್ ಮೇಲೆ ಹಲ್ಲೆ, 6 ಪೊಲೀಸ್ ಸಿಬ್ಬಂದಿ ಅಮಾನತು..!!

Dhrishya News by Dhrishya News
01/12/2023
in ಕರಾವಳಿ, ಸುದ್ದಿಗಳು
0
0
SHARES
68
VIEWS
Share on FacebookShare on Twitter

ಡಿಸೆಂಬರ್ 01; ವಕೀಲನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಸಂಬಂಧ ಚಿಕ್ಕಮಗಳೂರು ಪೊಲೀಸರು ಮತ್ತು ವಕೀಲರ ನಡುವೆ ತಡರಾತ್ರಿ ಹೈಡ್ರಾಮ ನಡೆದಿದೆ. ಹೆಲ್ಮೆಟ್ ಹಾಕದ ಕಾರಣ ಲಾಯರ್ ಮೇಲೆ ಪೊಲೀಸರು ಹಲ್ಲೆ ಮಾಡಿದ್ದು, ಠಾಣೆಯ ಮುಂದೆ ವಕೀಲರು ಪ್ರತಿಭಟನೆ ಮಾಡಿದರು.

ಅಂತಿಮವಾಗಿ 6 ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ.

ಹೆಲ್ಮೆಟ್ ಹಾಕದ ಕಾರಣಕ್ಕೆ ವಕೀಲ ಪ್ರೀತಮ್ ಮೇಲೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ವಕೀಲ ಪ್ರೀತಮ್ ದಂಡ ಕಟ್ಟುತ್ತೇನೆ ಎಂದು ಹೇಳಿದರೂ ಸಹ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಠಾಣೆಗೆ ಕರೆದೊಯ್ದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರು ಹಲ್ಲೆ ಮಾಡಿದ್ದರಿಂದ ಪ್ರೀತಮ್ ಎದೆ, ಬೆನ್ನು, ಕೈಯಲ್ಲಿ ರಕ್ತದ ಕಲೆಯಾಗಿದೆ. ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಪ್ರೀತಮ್ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸರ್ಕಾರಿ ಆಸ್ಪತ್ರೆ ಬಳಿ ಮತ್ತು ಠಾಣೆಯ ಮುಂದೆ ನೂರಾರು ವಕೀಲರು ಪ್ರತಿಭಟನೆ ಮಾಡಿದರು. ಹಲ್ಲೆ ಮಾಡಿದ ಸಿಬ್ಭಂದಿ ಬಂಧಿಸಬೇಕು ಎಂದು ಒತ್ತಾಯಿಸಿದರು.

ವಕೀಲ ಪ್ರೀತಮ್ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿ ಬಂಧಿಸಿಲ್ಲ ಎಂದು ಆರೋಪಿಸಿ ತಡರಾತ್ರಿ 2 ಗಂಟೆಗೆ ಪೊಲೀಸ್ ಠಾಣೆ ಮುಂದೆ ವಕೀಲರು ಧರಣಿ ಕೂತರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕುಮಾರ್, ಗುರುಪ್ರಸಾದ್ ಎಂಬ ಪೊಲೀಸ್ ಸಿಬ್ಭಂದಿ ಮೇಲೆ ಐಪಿಸಿ ಸೆಕ್ಷನ್ 307ರಡಿ ಪ್ರಕರಣ ದಾಖಲು ಮಾಡಲಾಗಿದೆ.

ಶುಕ್ರವಾರ ವಕೀಲರು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ನಿರೀಕ್ಷೆ ಇದೆ. ಬೆಳಗ್ಗೆ10:30ಕ್ಕೆ ಚಿಕ್ಕಮಗಳೂರು ಜಿಲ್ಲಾ ವಕೀಲರ ಸಂಘ ತುರ್ತು ಸಭೆಯನ್ನು ಕರೆದಿದೆ. ಪೊಲೀಸ್ ಸಿಬ್ಬಂದಿಗಳನ್ನು ಬಂಧಿಸುವಂತೆ ವಕೀಲರು ಪಟ್ಟು ಹಿಡಿದಿದ್ದಾರೆ. ವಿವಿಧ ಜಿಲ್ಲೆಗಳಿಂದ ವಕೀಲರು ಸಭೆಗೆ ಆಗಮಿಸುತ್ತಿದ್ದಾರೆ

ತಡರಾತ್ರಿ ಘಟನೆ ಬಗ್ಗೆ ಕೈಗೊಳ್ಳಲಾದ ಕ್ರಮಗಳ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಹೇಳಿಕೆ ನೀಡಿದರು. “ಈ ಘಟನೆ ಸಂಬಂಧ 6 ಜನ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ,. ಪ್ರಕರಣ ಸಂಬಂಧ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಓರ್ವ ಪಿಎಸ್‌ಐ, ಓರ್ವ ಎಎಸ್‌ಐ, ಓರ್ವ ಹೆಡ್ ಕಾನ್ಸ್‌ಟೇಬಲ್, ಮೂವರು ಕಾನ್ಸ್‌ಟೇಬಲ್ ಅಮಾನತು ಮಾಡಲಾಗಿದೆ” ಎಂದರು.

ವಕೀಲ ಪ್ರೀತಮ್ ನಾನು ದಂಡ ಕಟ್ಟುತ್ತೇನೆ ಎಂದು ಹೇಳಿದರೂ ಸಹ ಪೊಲೀಸ್ ಠಾಣೆಗೆ ಕರೆದದುಕೊಂಡು ಹೋಗಿದ್ದಾರೆ. ಬೈಕ್ ಕೀ ಕಿತ್ತುಕೊಂಡ ಪೊಲೀಸರನ್ನು ಪ್ರೀತಮ್ ಪ್ರಶ್ನೆ ಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಹಲ್ಲೆ ಮಾಡಿದ್ದಾರೆ.

ಮುಂಜಾನೆ 3 ಗಂಟೆಯ ತನಕ ವಕೀಲರು ಪೊಲೀಸರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಕೀಲರ ಮೇಲೆ ಹಲ್ಲೆ ಮಾಡಿವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ವಕೀಲರು ಪ್ರತಿಭಟನೆ ನಡೆಸಿ ಎಸ್ಪಿ ವಿಕ್ರಂ ಅಮಟೆ ವಿರುದ್ಧವೂ ಧಿಕ್ಕಾರ ಕೂಗಿದರು.

ಶಶಿಕುಮಾರ್, ಗುರುಪ್ರಸಾದ್ ಎಂಬ ಪೊಲೀಸ್ ಸಿಬ್ಬಂದಿ ಮೇಲೆ ಐಪಿಸಿ ಸೆಕ್ಷನ್ 307ರಡಿ ಪ್ರಕರಣ ದಾಖಲಾಗಿದೆ. ಆರು ಜನರ ಮೇಲೆ ಪ್ರಕರಣ ದಾಖಲಿಸಿರುವ ವಕೀಲರು, ಇಬ್ಬರು ಪೊಲೀಸರು ಠಾಣೆಯಲ್ಲೇ ಇದ್ದರೂ ಅವರನ್ನು ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags: #ಚಿಕ್ಕಮಗಳೂರು#ಹಲ್ಲೆ#ಹೆಲ್ಮೆಟ್#ಸಿಬ್ಬಂದಿಅಮಾನತು#ನ್ಯೂಸ್
Previous Post

ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಇಮೇಲ್​ ಮೂಲಕ ಬಾಂಬ್ ಬೆದರಿಕೆ : ಆತಂಕಗೊಂಡ ಪೋಷಕರು..!!

Next Post

ಸಾರ್ವಜನಿಕ ಸಾರಿಗೆಯಲ್ಲಿ ಪ್ಯಾನಿಕ್ ಬಟನ್, ವಾಹನ ಟ್ರ್ಯಾಕಿಂಗ್ ಸಾಧನಗಳ ಅಳವಡಿಕೆ ಕಡ್ಡಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾರ್ವಜನಿಕ ಸಾರಿಗೆಯಲ್ಲಿ ಪ್ಯಾನಿಕ್ ಬಟನ್, ವಾಹನ ಟ್ರ್ಯಾಕಿಂಗ್ ಸಾಧನಗಳ ಅಳವಡಿಕೆ ಕಡ್ಡಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check