Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಾಲೆಗಳಿಗೆ ಬಾಂಬ್ ಬೆದರಿಕೆ:ಸರಿಯಾದ ತನಿಖೆ ಮಾಡಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ : ಸಚಿವ ಪರಮೇಶ್ವರ್…!!

Dhrishya News by Dhrishya News
01/12/2023
in ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಬೆಂಗಳೂರು : ಡಿಸೆಂಬರ್ 01 : ದ್ರಶ್ಯ ನ್ಯೂಸ್ :ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಮಾಡಿರುವ ಕೃತ್ಯದ ಹಿಂದೆ ಯಾರೇ ತಪ್ಪು ಮಾಡಿದರೂ ಸರಿಯಾದ ತನಿಖೆ ಮಾಡಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಕರೆ ಬಂದಿರುವ ಘಟನೆ ಬಗ್ಗೆ ತನಿಖೆ ಮಾಡಿಸುತ್ತೇವೆ, ಮಕ್ಕಳ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ, ಅವರು ಆತಂಕದಲ್ಲಿ ಶಾಲೆಗೆ ಹೋಗುವಂತಾಗಬಾರದು, ಇಂತಹ ಸಮಾಜಘಾತುಕ ಕುಕೃತ್ಯದಲ್ಲಿ ತೊಡಗಿರುವವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ, ಈ ವಿಷಯದಲ್ಲಿ ರಾಜಿ ಮಾಡುವುದಿಲ್ಲ. ನಾವು ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದರು.

ನಗರ ಪೊಲೀಸ್ ಆಯುಕ್ತ ಬಿ ದಯಾನಂದ್, ಈ ಬಗ್ಗೆ ನಮಗೆ ಮಾಹಿತಿ ಬಂದ ಕೂಡಲೇ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಶಾಲೆಗಳಿಗೆ ನಮ್ಮ ಬಾಂಬ್ ನಿಷ್ಕ್ರಿಯ ದಳ ಹೋಗಿ ತಪಾಸಣೆ ನಡೆಸಿದೆ. ಈ ಹಿಂದೆಯೂ ಸಹ ಈ ರೀತಿ ಬೆದರಿಕೆ ಕರೆ ಬಂದಿತ್ತು. ಬಹುಶಃ ಇದು ಸುಳ್ಳು ಬಾಂಬ್ ಬೆದರಿಕೆ ಅನ್ನಿಸುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಾಂಬ್ ಬೆದರಿಕೆ
ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ನಗರದ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 7 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಸದಾಶಿವನಗರದ ನೀವ್ ಅಕಾಡೆಮಿ, ಯಲಹಂಕದ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ತೆರಳಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ.

ಇಮೇಲ್ ನಲ್ಲಿ ಏನಿದೆ?

ಶಾಲೆ ಮೈದಾನದಲ್ಲಿ ಸ್ಫೋಟಕಗಳನ್ನು ಇರಿಸಿದ್ದೇವೆ. ನವೆಂಬರ್ 26ರಂದು ಅಲ್ಲಾಹನ ಮಾರ್ಗದಲ್ಲಿ ನಮ್ಮ ಹುತಾತ್ಮರು ನೂರಾರು ಮೂರ್ತಿ ಪೂಜಕರನ್ನು ಹತ್ಯೆ ಮಾಡಿದ್ದಾರೆ. ಲಕ್ಷಾಂತರ ಕಾಫಿರರ ಕುತ್ತಿಗೆಗೆ ಕತ್ತಿ ಹಿಡಿಯೋದರಲ್ಲಿ ಅವರು ಶಕ್ತಿಶಾಲಿಗಳಾಗಿದ್ದಾರೆ. ಅವನು ವಿಫಲನಾಗಿ ಬೀಳುತ್ತಾನೆ. ನೂರಾರು ಮುಜಾಹಿದ್​ಗಳು ಅಲ್ಲಾಹನ ಮಾರ್ಗದಲ್ಲಿ ಹೋರಾಡಲು ಸಜ್ಜಾಗಿದ್ದೇವೆ. ನೀವೆಲ್ಲರೂ ಅಲ್ಲಾಹನ ಶತ್ರುಗಳು. ನಾವು ನಿಮ್ಮನ್ನು ಹಾಗೂ ನಿಮ್ಮ ಮಕ್ಕಳನ್ನು ಹತ್ಯೆ ಮಾಡುತ್ತೇವೆ. ನೀವು ನಮ್ಮ ಗುಲಾಮರಾಗದೆ ಬೇರೆ ಆಯ್ಕೆಗಳಿಲ್ಲ. ಅಲ್ಲಾಹನ ನೈಜ ಧರ್ಮವನ್ನು ಸ್ವೀಕರಿಸಿ. ದೇಗುಲಗಳು, ನಿಮ್ಮ ಮೂರ್ತಿಗಳು, ಬುದ್ಧನಿಂದ ಇನ್ಫಿನಿಟಿವರೆಗೆ ಸ್ಫೋಟಕಗಳೊಂದಿಗೆ ಅವರು ಬರುತ್ತಿದ್ದಾರೆ. ಬಿಸ್ಮಿಲ್ಲಾಹ್, ನಾವು ಇಡೀ ಭಾರತದಲ್ಲಿ ಅಲ್ಲಾಹನ ನೈಜ ಧರ್ಮವನ್ನು ಎಲ್ಲೆಡೆ ಹರಡಲಿದ್ದೇವೆ. ನಾವು ನಿಮ್ಮ ಮೇಲೆ ದಾಳಿಕೋರರನ್ನು ಕಳಿಸಿದ್ದೇವೆ

ಮುಜಾಹಿದ್ದಿನ್ ಯಾರು?

ಈ ಮುಜಾಹಿದ್ದಿನ್ ಯಾರು? ಎಲ್ಲಿಂದ ಈ ಇ-ಮೇಲ್ ಬಂದಿದೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಿಲ್ಲ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಹಿಂದೆ ಅನೇಕ ಬಾರಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದರೂ ಈ ಬಾರಿ ಮತಾಂತರಗೊಳ್ಳುವಂತೆ ಬೆದರಿಕೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಇದನ್ನು ಪೊಲಿಸರು ಗಂಭೀರವಾಗಿ ಪರಿಗಣಿಸಿದ್ದು, ಶಾಲೆಯ ಮೂಲೆ ಮೂಲೆಯಲ್ಲಿ ತಪಾಸಣೆ ಮಾಡುತ್ತಿದ್ದಾರೆ.

Tags: #ಬೆಂಗಳೂರು#ಶಾಲೆಗಳಿಗೆ ಬಾಂಬ್#ಪರಮೇಶ್ವರ್ #ನ್ಯೂಸ್
Previous Post

ಉಡುಪಿ : ಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ತರಬೇತಿ ಒದಗಿಸುವ ಯೋಜನೆಯ ಉದ್ಘಾಟನಾ ಸಮಾರಂಭ ಮತ್ತು ಆರೋಗ್ಯ ತಪಾಸಣಾ ಶಿಬಿರ…!!

Next Post

ಬೆಂಗಳೂರು ಶಾಲೆಗಳಿಗೆ ಬಾಂಬ್‌ ಬೆದರಿಕೆ: ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸಿಎಂ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು ಶಾಲೆಗಳಿಗೆ ಬಾಂಬ್‌ ಬೆದರಿಕೆ: ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸಿಎಂ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026

Recent News

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved