Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ:ಪಿ.ಎಂ ವಿಶ್ವಕರ್ಮ ಯೋಜನೆ : ಅರ್ಹ ಕುಶಲಕರ್ಮಿಗಳಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ ..!!

Dhrishya News by Dhrishya News
14/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
32
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 14: ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆಗಳನ್ನು ನೀಡಿದ್ದಾರೆ.

ಸರಕಾರ ಕುಶಲಕರ್ಮಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದರ ಜೊತೆಗೆ ಅವರುಗಳಿಗೆ ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸಿ, ಸ್ವಾವಲಂಭಿ ಜೀವನ ನಡೆಸುವುದರೊಂದಿಗೆ ಆರ್ಥಿಕರಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವು ದರೊಂದಿಗೆ ಅರ್ಹ ಫಲಾನುಭವಿಗಳು ಯೋಜನೆಯ ಲಾಭ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದವರು ನಿರ್ದೇಶನ ನೀಡಿದರು.

ಯೋಜನೆ ಕುಶಲಕರ್ಮಿಗಳಿಗೆ ಸಹಾಯ ಆಧಾರಿತ ಯೋಜನೆಯಾಗಿದ್ದು, ವಿವಿಧ ವೃತ್ತಿಗಳಲ್ಲಿ ತೊಡಗಿಕೊಂಡಿರುವ ಕುಶಲರ್ಕುಗಳಿಗೆ ಸೌಲಭ್ಯ ಕಲ್ಪಿಸುವ ಉದ್ದೇಶ ಹೊಂದಿದೆ. ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ನೋಂದಣಿ ಮತ್ತು ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕೃತ ಪಿ.ಎಂ ವಿಶ್ವಕರ್ಮ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದರು.

ಸ್ಥಳೀಯ ಗ್ರಾಮಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಸಾಂಪ್ರದಾಯಿಕವಾಗಿ ಕುಶಲ ಕರ್ಮಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಕುಟುಂಬದ ಸದಸ್ಯರು ಸರ್ಕಾರಿ ಸೇವೆಯಲ್ಲಿ ಇಲ್ಲದೇ ಇರುವ ಕುಟುಂಬದ ಏಕ ಮಾತ್ರ ಸದಸ್ಯರನ್ನು ಯೋಜನೆಗೆ ಶಿಫಾರಸ್ಸು ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಬಡಗಿ, ಮರಗೆಲಸ, ದೋಣಿ ತಯಾರಿಕೆ, ಸುತ್ತಿಗೆ ನತ್ತು ಉಪಕರಣಗಳನ್ನು ತಯಾರಿಸುವವರು, ಬೀಗ ತಯಾರಕರು, ನೇಕಾರರು, ಕುಂಬಾರಿಕೆ, ಪಾದರಕ್ಷೆ ತಯಾರಿಕೆ, ಚರ್ಮಗಾರಿಕೆ, ಅಕ್ಕಸಾಲಿಗರು, ಕಮ್ಮಾರರು, ಅಗಸರು, ಟೈಲರ್, ಶಿಲ್ಪ ರಚನಾಕಾರರು, ಚಮ್ಮಾರ, ಮೇಸ್ತ್ರಿ, ಗೊಂಬೆ, ಆಟಿಕೆ ತಯಾರಕರು, ಬುಟ್ಟಿ ತಯಾರಿಸುವವರು, ದೋಬಿಗಳು, ಕ್ಷೌರಿಕರು, ಮೀನುಗಾರಿಕೆ ಬಲೆ ಹೆಣೆಯುವವರು, ಹೂವಿನ ಮಾಲೆ ತಯಾರಕರು ಸೇರಿದಂತೆ ಇತರರು ಈ ಯೋಜನೆಯಡಿ ಲಾಭ ಪಡೆದುಕೊಳ್ಳಬಹುದಾಗಿದೆ ಎಂದರು.

ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾ ಗಿರುವ ಸಾಮಾನ್ಯ ಸೇವಾ ಕೇಂದ್ರದಲ್ಲಿ ತ್ವರಿತವಾಗಿ ಯೋಜನೆಗೆ ನೋಂದಣಿ ಮಾಡಬಹುದಾಗಿದೆ. ಆಯ್ಕೆಯಾದ ಫಲಾನುಭವಿಗಳಿಗೆ ಡಿಜಿಟಲ್ ಐ.ಡಿ ಕಾರ್ಡ್ ಹಾಗೂ ಪಿ.ಎಂ ವಿಶ್ವಕರ್ಮ ಪ್ರಮಾಣ ಪತ್ರವನ್ನು ನೀಡುವುದರ ಜೊತೆಗೆ ಮೂಲಭೂತ ಕೌಶಲ್ಯ ತರಬೇತಿ ಹಾಗೂ ಉಪಕರಣಗಳನ್ನು ನೀಡಲಾಗುವುದು. ಜೊತೆಗೆ ಶೇ.೫ರ ಬಡ್ಡಿ ದರದಲ್ಲಿ ಒಂದು ಲಕ್ಷ ರೂ. ವರೆಗೆ ಸಾಲ ಸೌಲಭ್ಯವನ್ನೂಒದಗಿಸಲಾಗುವುದು ಎಂದು ಡಾ.ವಿದ್ಯಾಕುಮಾರಿ ವಿವರಿಸಿದರು.

Previous Post

ಉದ್ಯಾವರ : ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

Next Post

ದತ್ತಜಯಂತಿ ಹಿನ್ನೆಲೆ ಡಿಸೆಂಬರ್ 22ರಿಂದ 27ರವರೆಗೆ ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದತ್ತಜಯಂತಿ ಹಿನ್ನೆಲೆ ಡಿಸೆಂಬರ್ 22ರಿಂದ 27ರವರೆಗೆ ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved