Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ ಬೀಚ್ ರಸ್ತೆಯಂಚಿನಲ್ಲಿರುವ ಹೋಟೆಲ್ ಗಳಿಗೆ  ಪೌರಾಯುಕ್ತರ ನೇತೃತ್ವದಲ್ಲಿ ದಾಳಿ :ಮೀನಿನ ಖಾದ್ಯಗಳಿಗೆ ಕೃತಕ ಬಣ್ಣ, ರುಚಿ ಬರುವ ರಾಸಾಯನಿಕ ಸೇರಿಸದಂತೆ ಖಡಕ್ ಎಚ್ಚರಿಕೆ.!!..!!

Dhrishya News by Dhrishya News
15/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
78
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 15:ಉಡುಪಿ ನಗರಸಭಾ ಪೌರಾಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಿನ್ನೆ ಮಲ್ಪೆ ಬೀಚ್ ಬಳಿ ಇರುವ ಹೊಟೇಲ್‌ ಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.

ಮಲ್ಪೆ ಬೀಚ್ ಹತ್ತಿರ , ರಸ್ತೆ ಬದಿಗಳಲ್ಲಿ ಮಾರಾಟ ಮಾಡುವ ಮೀನಿನ ಆಹಾರ ಖಾದ್ಯಗಳಿಗೆ ಕೃತಕ ಬಣ್ಣ ಹಾಗೂ ರುಚಿ ಬರುವ ರಾಸಾಯನಿಕ ಸೇರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಯಿತು .

ಮಲ್ಪೆ ಬೀಚ್ ಸುತ್ತಮುತ್ತಲು ಇಪ್ಪತ್ತಕ್ಕೂ ಅಧಿಕ ಮೀನಿನ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳಿದ್ದು, ಇಲ್ಲಿ ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸಿ ಇವುಗಳನ್ನು ತಿನ್ನುತ್ತಾರೆ. ರಸ್ತೆಯಂಚಿನಲ್ಲಿ ಮೀನಿನ ಫ್ರೈ, ಮಸಾಲ ಫ್ರೈ, ಚಿಕನ್ ಕಬಾಬ್, ಚೈನಿಸ್ ಆಹಾರಗಳ ಮಾರಾಟ ಮಾಡುವ ಹೊಟೇಲ್‌ಗಳಿವೆ. ಇಲ್ಲಿನ ಹೆಚ್ಚಿನ ಹೊಟೇಲ್‌ಗಳಲ್ಲಿ ಆಹಾರ ಪದಾರ್ಥಗಳಿಗೆ ಕೃತಕ ಬಣ್ಣ, ಅತೀಯಾದ ರುಚಿ ಬರುವ ರಾಸಾಯನಿಕ ಬೆರೆಸಿ ತಯಾರು ಮಾಡುತ್ತಾರೆ ಎಂದು ಬಹಳಷ್ಟು ಪ್ರವಾಸಿಗರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.

 

ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ, ತಕ್ಷಣ ಬೀಚ್ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭಾ ಪೌರಾಯುಕ್ತರಿಗೆ ದಾಳಿ ನಡೆಸಿ ಪರಿಶೀಲಿಸಲು ನಿರ್ದೇಶನ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೌರಾಯುಕ್ತ ರಾಯಪ್ಪ ಅವರ ನೇತೃತ್ವದಲ್ಲಿ ನಗರಸಭೆಯ ಅಧಿಕಾರಿಗಳು ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ್ದಾರೆ.

ದಾಳಿ ಸಂದರ್ಭದಲ್ಲಿ ಹೆಚ್ಚಿನ ಹೊಟೇಲ್‌ಗಳಲ್ಲಿ ಮಾನವನ ಜೀವಕ್ಕೆ ಹಾನಿಕಾರಕವಾಗುವ ಕೃತಕ ಬಣ್ಣ ಹಾಗೂ ಅಜಿನಮೊಟೊ ಬಳಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಹೊಟೇಲ್ ಮಾಲಕರಿಗೆ ಎಚ್ಚರಿಕೆ ನೀಡಿರುವ ಪೌರಾಯುಕ್ತರು ಇನ್ನು ಮುಂದಿನ ದಿನಗಳಲ್ಲಿ ಆಹಾರ ಪದಾರ್ಥಗಳಿಗೆ ವಿಷಯುಕ್ತ ಬಣ್ಣ, ಟೆಸ್ಟೀ ಪೌಡರ್ ಬಳಕೆ ಮಾಡದಂತೆ ನಿರ್ದೇಶನ ನೀಡಿದ್ದಾರೆ.

 

ಇನ್ನು ಮುಂದೆ ಪ್ರತಿನಿತ್ಯ ಇದರ ಬಗ್ಗೆ ನಿಗಾ ವಹಿಸುತ್ತೇವೆ. ಮತ್ತೊಮ್ಮೆ ಈ ರೀತಿ ಕಂಡುಬಂದರೆ ಹೊಟೇಲ್‌ಗಳನ್ನೇ ಮುಚ್ಚಿ ಕಾನೂನು ರೀತ್ಯಾ ಕ್ರಮಕೈಗೊಳ್ಳುವುದಾಗಿ ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ. ಅದೇ ರೀತಿ ಏಕಬಳಕೆಯ ಪ್ಲಾಸ್ಟಿಕ್ ಉಪಯೋಗಿಸದಂತೆ ಖಡಕ್ ವಾರ್ನಿಂಗ್ ಸಹ ನೀಡಿ ಬಂದಿದ್ದಾರೆ.

 

 

 

Previous Post

ಬೈಂದೂರು ವತ್ತಿನೆಣೆ ಬಳಿ ಗ್ಯಾಸ್ ಟ್ಯಾಂಕರ್ ಗೆ ತೂಫಾನ್ ಕ್ರೂಸ್‌ರ್ ಡಿಕ್ಕಿ..!!

Next Post

ಉಡುಪಿ : ಶ್ರೀ ಪುತ್ತಿಗೆ ಪರ್ಯಾಯ ಸಂಭ್ರಮ:ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಶ್ರೀ ಪುತ್ತಿಗೆ ಪರ್ಯಾಯ ಸಂಭ್ರಮ:ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
imunify-bot-check