Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ನಕಲಿ ವೈದ್ಯರು, ಕ್ಲಿನಿಕ್ ಪತ್ತೆ : ಲ್ಯಾಬ್ ಸೀಜ್ ಮಾಡಿ ಪ್ರಕರಣ ದಾಖಲು..!!

Dhrishya News by Dhrishya News
17/12/2023
in ಕರಾವಳಿ, ಸುದ್ದಿಗಳು
0
0
SHARES
414
VIEWS
Share on FacebookShare on Twitter

ಉಡುಪಿ, ಡಿಸೆಂಬರ್ 17:ಮೈಸೂರು ಹಾಗೂ ಮಂಡ್ಯದಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಆರೋಗ್ಯ ಅಧಿಕಾರಿಗಳು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಿ ಕಾರ್ಯಚರಣೆ ನಡೆಸುತ್ತಿದ್ದಾರೆ.

ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಯುವ ಉದ್ದೇಶದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿವಿಧೆಡೆ ಧಿಡೀರ್ ದಾಳಿ ಹಾಗೂ ತಪಾಸಣೆ ಕೈಗೊಂಡು ಕ್ಲಿನಿಕ್ ಹಾಗೂ ಲ್ಯಾಬ್‌ಗಳ ನ್ಯೂನ್ಯತೆ ಕಂಡು ಬಂದ ಹಿನ್ನೆಲೆ, ನಕಲಿ ವೈದ್ಯ ತಡೆ ಹಾಗೂ ಕೆ.ಪಿ.ಎಂ.ಇ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಲ್ಯಾಬ್ ಹಾಗೂ ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದೆ.

ಉಡುಪಿ ತಾಲೂಕು ಪ್ರಾಧಿಕಾರ ಹಾಗೂ ಆರೋಗ್ಯ ಅಧಿಕಾರಿಗಳ ನೇತೃತ್ವದ ತಂಡವು ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್‌ನಲ್ಲಿ ಡಾ. ಎ.ಆರ್ ಆಚಾರ್ಯ ರವರು ಆಯುರ್ವೇದ ಕ್ಲಿನಿಕ್‌ನ ನೋಂದಣಿ ಹೊಂದಿ ಅಲೋಪತಿಕ್ ಪದ್ಧತಿಯ ಚಿಕಿತ್ಸೆ ನೀಡುತ್ತಿದ್ದ ಹಿನ್ನೆಲೆ ಪ್ರಕರಣ ದಾಖಲಾಗಿದೆ.

ಕುಂದಾಪುರ ತಾಲೂಕು ಪ್ರಾಧಿಕಾರ ಮತ್ತು ಆರೋಗ್ಯ ಅಧಿಕಾರಿಗಳ ತಂಡವು ನಾವುಂದದ ನಂಬಿಯಾರ್ ಕ್ಲಿನಿಕ್ ನಲ್ಲಿ ಡಾ. ಪ್ರಜೀತ್ ಎಸ್ ನಂಬಿಯಾರ್ ಅವರು, ಆಯುರ್ವೇದಿಕ್ ಪದ್ಧತಿಯಲ್ಲಿ ನೋಂದಾವಣೆ ಹೊಂದಿ ಅಲೋಪತಿಕ್ ಪದ್ಧತಿಯಲ್ಲಿ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದ ಹಿನ್ನೆಲೆ, ಪ್ರಕರಣ ದಾಖಲಿಸಲಾಗಿದೆ.

ಕುಂದಾಪುರ ತಾಲೂಕು ಪ್ರಾಧಿಕಾರ ಹಾಗೂ ಆರೋಗ್ಯ ಅಧಿಕಾರಿಗಳ ತಂಡವು ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಅನ್ನು ಲತಾ ಸುನೀಲ್ ಕೆ ಅವರು ಪರವಾನಿಗೆ ಇಲ್ಲದೇ ನಡೆಸುತ್ತಿರುವುದು ಕಂಡು ಬಂದ ಹಿನ್ನೆಲೆ, ಲ್ಯಾಬ್ ಅನ್ನು ಸೀಝ್ ಮಾಡಿ, ಪ್ರಕರಣ ದಾಖಲಿಸಲಾಗಿದೆ.

ಉಡುಪಿ ತಾಲೂಕು ಪ್ರಾಧಿಕಾರ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದ ತಂಡವು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಗಳೊಂದಿಗೆ ಜಂಟಿ ತಪಾಸಣೆ ನಡೆಸಿ, ಆರೂರಿನಲ್ಲಿ ಸಂದೇಶ್ ರಾವ್ ರವರು ತಜ್ಙತೆ ಹಾಗೂ ಪರವಾನಿಗೆ ಇಲ್ಲದೆ ಕ್ಲಿನಿಕ್‌ನ್ನು ನಡೆಸುತ್ತಿರುವುದು ಕಂಡು ಬಂದ ಹಿನ್ನೆಲೆ, ಕ್ಲಿನಿಕ್‌ನ್ನು ಸೀಜ್ ಮಾಡಿ, ಪ್ರಕರಣ ದಾಖಲಾಗಿದೆ.

ಕುಂದಾಪುರ ತಾಲೂಕು ಪ್ರಾಧಿಕೃತ ಹಾಗೂ ಆರೋಗ್ಯ ಅಧಿಕಾರಿಗಳ ತಂಡವು ಕುಂದಾಪುರದ ಬಯೋಲಿನ್ ಲ್ಯಾಬ್ ನಲ್ಲಿ ರಾಜ್ಯದ ನೋಂದಾವಣೆ ಪ್ರಮಾಣ ಪತ್ರವನ್ನು ಹೊಂದಿರದವರು ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆ, ಎಫ್.ಐ.ಆರ್ ಸಾರ್ವಜನಿಕರು ಜಾಗೃತೆ ವಹಿಸಿ ಕೆ.ಪಿ.ಎಂ.ಇ ಕಾಯ್ದೆ ಅಡಿಯಲ್ಲಿ ನೊಂದಾವಣೆಯಾಗಿರದ ಅಥವಾ ನಕಲಿ ವೈದ್ಯರುಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬಾರದು. ನಕಲಿ ವೈದ್ಯರ ಬಗ್ಗೆ ಮಾಹಿತಿ ಇದ್ದಲ್ಲಿ ಕುಂದಾಪುರ ಮೊ.ನಂ. 8277505911, ಕಾರ್ಕಳ ಮೊ.ನಂ. 8277505892 ಅಥವಾ ಉಡುಪಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ದೂ.ಸಂಖ್ಯೆ: 0820-2525566, 2536650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Previous Post

ವಿಶ್ವದ ಅತಿ ದೊಡ್ಡ ‘ಸೂರತ್ ಡೈಮಂಡ್ ಬೋರ್ಸ್’ ಕಟ್ಟಡ ಪ್ರಧಾನಿ ಮೋದಿಯವರಿಂದ ಉದ್ಘಾಟನೆ ..!!

Next Post

ಬಸ್, ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಸ್, ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News