Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರ : ತಾವು ಓದಿದ್ದ ಕೆರಾಡಿ ಕನ್ನಡ ಮಾಧ್ಯಮ ಶಾಲೆಯನ್ನು ದತ್ತು ಪಡೆದ ನಟ ರಿಷಬ್‌ ಶೆಟ್ಟಿ..!!

Dhrishya News by Dhrishya News
18/12/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಕುಂದಾಪುರ : ಡಿಸೆಂಬರ್ 18:ಕುಂದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಭ್​ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ತಾವು ಓದಿದ್ದ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದುಕೊಂಡಿದ್ದಾರೆ.

ಭಾನುವಾರ ಶಾಲೆ ಆವರಣದಲ್ಲಿ ನಡೆದ ಪೋಷಕರ, ಶಿಕ್ಷಕರ, ಊರ ಪ್ರಮುಖರ, ಶಿಕ್ಷಣ ಇಲಾಖೆಯ ಅಧಿಕಾರಿಗಳ ಹಾಗೂ ಶಿಕ್ಷಕರ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಉಳಿಯಬೇಕು, ಬೆಳೆಯಬೇಕು ಎನ್ನುವುದು ನನ್ನ ದೊಡ್ಡ ಆಸೆ.ಎಲ್ಲವೂ ಸರ್ಕಾರದಿಂದಲೇ ಆಗಬೇಕು ಎಂದೇನಿಲ್ಲ. ಒಳ್ಳೆಯ ಮನಸ್ಸು, ಗುರಿ ಇದ್ದಾಗ ಉದ್ದೇಶ ಸಾರ್ಥಕವಾಗುತ್ತದೆ.

‘ರಿಷಬ್ ಫೌಂಡೇಶನ್’ ಮೂಲಕ ಕನ್ನಡ ಶಾಲೆಗಳ ಅಭಿವೃದ್ಧಿಗೆ ಒಂದಷ್ಟು ಸಹಾಯ ಮಾಡಬೇಕು ಎನ್ನುವ ಚಿಂತನೆ ಇದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡಿ ನನ್ನನ್ನು ಬೆಳೆಸಿದ ನನ್ನೂರಿನ ಕೆರಾಡಿ ಶಾಲೆಯನ್ನು ಮೊದಲ ಆದ್ಯತೆ ಯಲ್ಲಿ ಪರಿಗಣಿಸಬೇಕು ಎನ್ನುವುದಕ್ಕಾಗಿ ಶಿಕ್ಷಣ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದರು

ವಕೀಲ ಪ್ರಸನ್ನ ಕುಮಾರ್ ಶೆಟ್ಟಿ ಮಾತನಾಡಿ, ಮುಂದಿನ 5 ವರ್ಷಗಳ ಅವಧಿಯಲ್ಲಿ ಶಾಲೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಗೊಳಿಸುವ ಗುರಿ ಇರಿಸಿಕೊಳ್ಳಲಾಗಿದೆ. ಕಟ್ಟಡ, ಪೀಠೋಪಕರಣ, ಬೋಧನಾ ಸಾಮಾಗ್ರಿ, ಕ್ರೀಡಾಂಗಣ, ಗ್ರಂಥಾಲಯ, ಕಂಪ್ಯೂಟರ್, ಇಂಗ್ಲಿಷ್ ಭಾಷಾಭ್ಯಾಸ, ಯುಕೆಜಿ, ಎಲ್‌ಕೆಜಿ ಸೇರಿದಂತೆ ಹೊಸ ತಂತ್ರಜ್ಞಾನ ಸಹಾಯದಿಂದ ಶಿಕ್ಷಣ ವ್ಯವಸ್ಥೆಯ ಎಲ್ಲಾ ಆಯಾಮಗಳಲ್ಲಿಯೂ ಸುಧಾರಣೆ ತರಲಾಗುವುದು ಎಂದರು.

ವಿದ್ಯಾರ್ಥಿಗಳ, ಶಿಕ್ಷಕರ ಕೊರತೆ: ಕೆರಾಡಿ ಶಾಲೆ ತಾಲ್ಲೂಕಿನ ಹಿರಿಯ ಶಾಲೆಗಳಲ್ಲಿ ಒಂದು. ಸಾವಿರಾರು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ನೆರವಾಗಿದ್ದ ಈ ಶಾಲೆ ಈಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳ, ಶಿಕ್ಷಕರ ಕೊರತೆ ಎದುರಿಸುತ್ತಿದೆ. ಶಾಲೆಯಲ್ಲಿನ ಪ್ರಸ್ತುತ 71 ವಿದ್ಯಾರ್ಥಿ ಗಳಿಗೆ ಒಬ್ಬರೇ ಕಾಯಂ ಶಿಕ್ಷಕರಿದ್ದಾರೆ. ರಿಷಬ್ ಶೆಟ್ಟಿ ಅವರು ಸೇರಿದಂತೆ ದಾನಿಗಳ ನೆರವಿನಿಂದ 4 ಗೌರವ ಶಿಕ್ಷಕರು ಮಕ್ಕಳ ವಿದ್ಯಾರ್ಜನೆಗೆ ನೆರವಾಗುತ್ತಿದ್ದಾರೆ.

ಸಭೆಯಲ್ಲಿ ಬೈಂದೂರು ವಲಯ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ, ಉಪಾಧ್ಯಕ್ಷೆ ಕುಸುಮಾ ಪೂಜಾರಿ, ವಂಡ್ಸೆ ಸಿಎ ಬ್ಯಾಂಕ್ ನಿರ್ದೇಶಕ ಭುಜಂಗ ಶೆಟ್ಟಿ, ಕೆರಾಡಿಯ ಸಿದ್ದಿ ವಿನಾಯಕ ಪದವಿಪೂರ್ವ ಕಾಲೇಜು ನಿರ್ದೇಶಕ ಪ್ರದೀಪ್ ಕುಮಾರ್ ಶೆಟ್ಟಿ, ಉದ್ಯಮಿ ಸುರೇಶ್ ಶೆಟ್ಟಿ ಕಾಲ್ತೋಡು ಇದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ಕೊಠಾರಿ ಸ್ವಾಗತಿಸಿದರು. ಮುಖ್ಯಶಿಕ್ಷಕ ವಿಜಯ್ ಕುಮಾರ್ ಶೆಟ್ಟಿ ನಿರೂಪಿಸಿದರು.

Previous Post

ಉಡುಪಿ : ಅಪಘಾತ ವಲಯವಾಗಿ ಮಾರ್ಪಡಿಸಿದ ಸಿಗ್ನಲ್ ಕಂಬಗಳು..! ಪ್ರತಿಫಲನ ಪಟ್ಟಿ ಅಂಟಿಸಿದ ಸಾಮಾಜಿಕ ಕಾರ್ಯಕರ್ತರು..!!

Next Post

ಕೊರೊನಾ ಉಲ್ಭಣ: 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ- ಸಚಿವ ಗುಂಡೂರಾವ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೊರೊನಾ ಉಲ್ಭಣ: 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ- ಸಚಿವ ಗುಂಡೂರಾವ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News