Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೊರೊನಾ ಉಲ್ಭಣ: 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ- ಸಚಿವ ಗುಂಡೂರಾವ್..!!

Dhrishya News by Dhrishya News
18/12/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
30
VIEWS
Share on FacebookShare on Twitter

ಮಡಿಕೇರಿ :ಡಿಸೆಂಬರ್ 18:ದ್ರಶ್ಯ ನ್ಯೂಸ್ : ನೆರೆಯ ಕೇರಳಲ್ಲಿ ತಾಂಡವ ಆರಂಭಿಸಿದ್ದ ಕೊರೊನಾ ರೂಪಾಂತರಿ ವೈರಸ್  ಕರ್ನಾಟಕ ರಾಜ್ಯದಲ್ಲೂ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ

ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು. ಕೊರೋನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನಯೇ ಸಭೆ ನಡೆಸಿ ಕೆಲವು ಸಲಹೆಗಳನ್ನ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು

ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಆಸ್ಪತ್ರೆಗಳನ್ನ ಸನ್ನದ್ಧ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಗ್ನಿಜನ್ ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Previous Post

ಕುಂದಾಪುರ : ತಾವು ಓದಿದ್ದ ಕೆರಾಡಿ ಕನ್ನಡ ಮಾಧ್ಯಮ ಶಾಲೆಯನ್ನು ದತ್ತು ಪಡೆದ ನಟ ರಿಷಬ್‌ ಶೆಟ್ಟಿ..!!

Next Post

ಕಾರ್ಕಳ : ಪರಿಸರ ಜಾಗೃತಿಯ ಕಸದಿಂದ ರಸ ಸ್ಪರ್ಧೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಪರಿಸರ ಜಾಗೃತಿಯ ಕಸದಿಂದ ರಸ ಸ್ಪರ್ಧೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check