Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕೊರೋನ ಆತಂಕ : ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ .!!

Dhrishya News by Dhrishya News
19/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
64
VIEWS
Share on FacebookShare on Twitter

ಬೆಂಗಳೂರು : ಡಿಸೆಂಬರ್ 19: ದ್ರಶ್ಯ ನ್ಯೂಸ್ :ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದ್ದು, ರಾಜ್ಯದಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಸೋಂಕು ಹರಡುವಿಕೆ ತಡೆಗೆ ಹಲವು ಕ್ರಮಗಳನ್ನು ಆರೋಗ್ಯ ಇಲಾಖೆ ಕೈಗೊಂಡಿದ್ದು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಕೋವಿಡ್ ಮಾರ್ಗಸೂಚಿಯಲ್ಲಿ ಏನೇನಿದೆ?

  • ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ
  • ಕೊವಿಡ್‌ ನಿರ್ಬಂಧ ಅವಶ್ಯಕತೆ ಇಲ್ಲ
  • ಗಡಿ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ಹೆಚ್ಚಿಸಬೇಕು
  • ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ
  • ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು
  • ರೋಗ ಲಕ್ಷಣ ಇರುವವರನ್ನು ಕೊವಿಡ್‌ ಪರಿಶೀಲನೆಗೆ ಒಳಪಡಿಸಬೇಕು
  • ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆಗೆ ಸೂಚನೆ
  • ಡಿ.3, 4ನೇ ವಾರದಲ್ಲಿ ಮಾಕ್ ಡ್ರಿಲ್‌ ಮುಕ್ತಾಯಗೊಳಿಸಲು ಸೂಚನೆ
  • ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು.
  • ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತ.
  • ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.
  • ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ
  • ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ
  • ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು.
  • ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ
  • ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.

ಎರಡು ಪ್ರತ್ಯೇಕ ಮಾರ್ಗಸೂಚಿ

ಕೋವಿಡ್ ಬಗ್ಗೆ ಎರಡು ಪ್ರತ್ಯೇಕ ಮಾರ್ಗಸೂಚಿಗಳನ್ನು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಒಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆಗಿದ್ದರೆ ಮತ್ತೊಂದು ಸಾರ್ವಜನಿಕ ಸಲಹಾ ಮಾರ್ಗಸೂಚಿಯಾಗಿದೆ. ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕೋವಿಡ್ ಸರ್ವೇಕ್ಷಣೆ ಹಾಗೂ ಮೇಲುಸ್ತುವಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಮತ್ತೊಂದಡೆ, ಕೋವಿಡ್ ಹೆಚ್ಚಳ ಆಗುತ್ತಿರುವ ಕಾರಣ ಸಾರ್ವಜನಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ

ಕಡ್ಡಾಯ ಕೋವಿಡ್ ಟೆಸ್ಟ್​ ಇಲ್ಲ: ಗುಂಡೂರಾವ್

ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗಿರುವುದು ಮತ್ತು ಶಬರಿಮಲೆ ಅಯ್ಯಪ್ಪ ಭಕ್ತರ ಓಡಾಟದ ಬಗ್ಗೆ ಆತಂಕ ವ್ಯಕ್ತವಾಗಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ನಾವು ಕೇರಳ ಗಡಿ ಭಾಗದಲ್ಲಿ ನಿಗಾ ವಹಿಸಿದ್ದೇವೆ. ಹಾಗೆಂದು ಅಲ್ಲಿಗೆ ಹೋಗಿ ಬರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸುತ್ತಿಲ್ಲ. ಬದಲಾಗಿ ಶಬರಿಮಲೆಗೆ ಹೋಗಿಬಂದವರಲ್ಲಿ ರೋಗ ಲಕ್ಷಣಗಳು ಇದ್ದರೆ ದಯವಿಟ್ಟು ನಿರ್ಲಕ್ಷ್ಯ ವಹಿಸಬಾರದು ಎಂದು ಮನವಿ ಮಾಡುತ್ತಿದ್ದೇವೆ. ಕಡ್ಡಾಯ ಕೋವಿಡ್ ಟೆಸ್ಟ್ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Previous Post

ಕಾರವಾರ : ಡೊನೇಶನ್ ಶುಲ್ಕ ಪಾವತಿಸದ ಕಾರಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಣೆ..!!

Next Post

ಶ್ರೀಪೇಜಾವರ ಗುರುವಂದನ ಸಮಿತಿ : ಕೃತಜ್ಞತಾ ಸಭೆ :ವೈಭವದ ಕಾರ್ಯಕ್ರಮದಿಂದ ಹೃದಯತುಂಬಿ ಬಂದಿದೆ : ಪೇಜಾವರ ಶ್ರೀ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀಪೇಜಾವರ ಗುರುವಂದನ ಸಮಿತಿ : ಕೃತಜ್ಞತಾ ಸಭೆ :ವೈಭವದ ಕಾರ್ಯಕ್ರಮದಿಂದ ಹೃದಯತುಂಬಿ ಬಂದಿದೆ : ಪೇಜಾವರ ಶ್ರೀ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check