Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ಜಾರಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Dhrishya News by Dhrishya News
19/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಡಿಸೆಂಬರ್ 19: ದ್ರಶ್ಯ ನ್ಯೂಸ್ :ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಯಾವುದೇ ವ್ಯಕ್ತಿಯನ್ನು ತೊಡಗಿಸಿಕೊಳ್ಳುವುದು ನಿರ್ಬಂಧವಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ದೇಶದಲ್ಲಿಯೇ ನಿಷೇಧಿತ ಚಟುವಟಿಕೆಯಾಗಿದ್ದು, ಈ ಕೆಲಸಕ್ಕೆ ಯಾವುದೇ ವ್ಯಕ್ತಿಯನ್ನು ಬಳಸಿಕೊಂಡರೆ ಅವರ ಮೇಲೆ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಉದ್ಯೋಗದ ನಿಷೇಧ ಹಾಗೂ ಅವರ

ಪುನರ್ವಸತಿ ಕಾಯಿದೆ 2013 ರ ಸೆಕ್ಷನ್ 8 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು. ಅಪರಾಧ ಸಾಬೀತಾದಲ್ಲಿ 2 ವರ್ಷ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ಇದೆ. ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದಿರಬೇಕು ಎಂದರು. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಯಂತ್ರಗಳ ಮೂಲಕವೇ ಶೌಚಗುಂಡಿಗಳನ್ನು ಸ್ವಚ್ಛಗೊಳಿಸಿ, ಅದನ್ನು ಸೂಕ್ತ ರೀತಿಯಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದ ಅವರು, ಇತರೆ ಸ್ವಚ್ಛತಾ ಕಾರ್ಯಗಳನ್ನು ಸಾಧ್ಯವಾದಷ್ಟು ಯಂತ್ರಗಳ ಸಹಾಯದಿಂದ ಮಾಡಲು ಮುಂದಾಗಬೇಕು ಎಂದರು. ಸ್ವಚ್ಛತಾ ಕಾರ್ಮಿಕರು ಕಡ್ಡಾಯವಾಗಿ ಸುರಕ್ಷತಾ ಪರಿಕರಗಳನ್ನು ಬಳಸುವುದರೊಂದಿಗೆ ಸ್ವಚ್ಛತೆ ಕೈಗೊಳಳಬೇಕು. ಒಂದಿಮ್ಮೆ ಬರಿಗೈಲಿನಿಂದ ಸ್ವಚ್ಛತೆ ಮಾಡಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಪೌರ ಕಾರ್ಮಿಕರಿಗೆ ಅತ್ಯುತ್ತಮ ಗುಣಮಟ್ಟದ ಸುರಕ್ಷತಾ ಪರಿಕರಗಳನ್ನು ಒದಗಿಸಬೇಕು. ಕಾಲಕಾಲಕ್ಕೆ ಅವರುಗಳ ಸಾಮಾನ್ಯ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್‌ಅಪ್‌ಗಳನ್ನು ಮಾಡಿಸಬೇಕು ಹಾಗೂ ಅವರುಗಳಿಗೆ ಉತ್ತಮ ಗುಣಮಟ್ಟದ ಉಪಾಹಾರಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗಾಗಲೇ ಜಿಲ್ಲೆಯಲ್ಲಿ 154 ಜನ ಪೌರಕಾರ್ಮಿಕರನ್ನು ಹೊಸದಾಗಿ ನೇಮಿಸಿಕೊಳ್ಳಲಾಗಿದೆ. 10 ಜನ ಕಾರ್ಮಿಕರ ನೇಮಕಕ್ಕೆ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ಪರಿಶೀಲನೆಯನ್ನು ಶೀಘ್ರವಾಗಿ ಕೈಗೊಳ್ಳುವುದರೊಂದಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು. ಸರಕಾರ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪುನರ್ವಸತಿಗಾಗಿ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಅವರುಗಳನ್ನು ಅರ್ಹ ಫಲನಾಭವಿಗಳನ್ನಾಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Previous Post

ಶ್ರೀಪೇಜಾವರ ಗುರುವಂದನ ಸಮಿತಿ : ಕೃತಜ್ಞತಾ ಸಭೆ :ವೈಭವದ ಕಾರ್ಯಕ್ರಮದಿಂದ ಹೃದಯತುಂಬಿ ಬಂದಿದೆ : ಪೇಜಾವರ ಶ್ರೀ…!!

Next Post

ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check