Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

‘ಕ್ರಿಸ್ ಮಸ್’ ಪ್ರಯುಕ್ತ KSRTCಯಿಂದ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಜೊತೆಗೆ ಶೇ.10ರಷ್ಟು ರಿಯಾಯಿತಿ…!!

Dhrishya News by Dhrishya News
20/12/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
8
VIEWS
Share on FacebookShare on Twitter

ಬೆಂಗಳೂರು:ಡಿಸೆಂಬರ್ 20: ಕ್ರಿಸ್‌ ಮಸ್ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 1000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ

ಡಿಸೆಂಬರ್ 22 ಮತ್ತು 23 ಹಾಗೂ ವಾರಾಂತ್ಯ ದಿನಗಳು ಹಾಗೂ ದಿನಾಂಕ ಡಿಸೆಂಬರ್ 25ರಂದು ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:22.12.2023 ರಿಂದ 24.12.2023 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ.

ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 25.12.2023ಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ,ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ. ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

Previous Post

ಮುನ್ನೆಚ್ಚರಿಕೆಯ ಮೂಲಕ ಕೊರೋನಾವನ್ನು ಹಿಮ್ಮೆಟ್ಟಿಸೋಣ – ಮುಖ್ಯಮಂತ್ರಿ ಸಿದ್ಧರಾಮಯ್ಯ’ ಸೂಚನೆ ..!!

Next Post

ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ ಆಸ್ಪತ್ರೆಗೆ ದಾಖಲು:ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ ಆಸ್ಪತ್ರೆಗೆ ದಾಖಲು:ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check