Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ: ಸಿ.ಎಂ..!!

Dhrishya News by Dhrishya News
28/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಬೆಂಗಳೂರು ಡಿ 28: ನೆಹರೂ-ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತ್ ಜೋಡೋ ಸಭಾಂಗಣದಲ್ಲಿ ಆಯೋಜಿಸಿದ್ದ 139 ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಹೋರಾಟದ ಮಾರ್ಗದಲ್ಲೇ ಅಧಿಕಾರಕ್ಕೆ ಬರುತ್ತದೆ. ಭಾರತ್ ಜೋಡೋ ನಂತರ ರಾಹುಲ್ ಗಾಂಧಿ ಅವರು ಮತ್ತೊಂದು ಸುತ್ತು ಪಾದಯಾತ್ರೆ ಹೊರಟಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ನೇತೃತ್ವ ವಹಿಸುತ್ತಾರೆ. ಪ್ರಧಾನಿ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿ. ಬ್ರಿಟಿಷರನ್ನು ಅಹಿಂಸೆ ಮೂಲಕ ಮಣಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಹುತಾತ್ಮರಾದರು. ಲಕ್ಷಾಂತರ ಮಂದಿಯ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯ ಚಳವಳಿ ನಡೆಯಿತು ಎಂದು ವಿವರಿಸಿದರು.

ಬಿಜೆಪಿ, ಜನ ಸಂಘ, RSS ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಲಿಲ್ಲ. ಬ್ರಿಟಿಷರ ಅವಧಿಯಲ್ಲೇ RSS ಹುಟ್ಟಿತ್ತು‌. ಆದರೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ಆದ್ದರಿಂದ ಬಿಜೆಪಿಯ ಡೋಗೀತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು ಎಂದರು. ಹಿಂದೂ ಬೇರೆ-ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದು ಸಿಎಂ ವ್ಯಂಗ್ಯವಾಡಿದರು.

ಸ್ವಾತಂತ್ರ್ಯಾ ನಂತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ವ ರಂಗಗಳಲ್ಲೂ ಪ್ರಗತಿ ಸಾಧಿಸಿತು. ದೇಶದಲ್ಲಿರುವ ಎಲ್ಲಾ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿ ಯವರು ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಸತ್ಯದ ತಲೆ ಮೇಲೆ ಹೊಡೆದಂತೆ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ. ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅರಣ್ಯ ಸಚಿವ ಈಶ್ವರ್ ಖಂಡ್ರೆ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Previous Post

ಉಡುಪಿ : ಜಯಂಟ್ಸ್ ಗ್ರೂಪ್ ವತಿಯಿಂದ ಫೆಡ್ಕಾನ್ -2023 ಮತ್ತು ಮಾಜಿ ಅಧ್ಯಕ್ಷರುಗಳ ಸಮ್ಮಿಲನ ಕಾರ್ಯಕ್ರಮ..!!

Next Post

ನಾಳೆ (ಡಿ.30)ಮೀನು ಮಾರಾಟ ಫೆಡರೇಶನ್‌ನ ಕಾಪು ಶಾಖೆಯ ಬ್ಯಾಂಕಿಂಗ್‌ ವಿಭಾಗ ಮತ್ತು ಮತ್ಸ್ಯ ಕ್ಯಾಂಟೀನ್‌ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ (ಡಿ.30)ಮೀನು ಮಾರಾಟ ಫೆಡರೇಶನ್‌ನ ಕಾಪು ಶಾಖೆಯ ಬ್ಯಾಂಕಿಂಗ್‌ ವಿಭಾಗ ಮತ್ತು ಮತ್ಸ್ಯ ಕ್ಯಾಂಟೀನ್‌ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved