Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಜನವರಿ ಕೊನೆಯ ವಾರದಲ್ಲಿ ಉದ್ಯೋಗ ಮೇಳ: ಆಯೋಜನೆಗೆ ಸಿದ್ಧತೆಗೆ ಸಚಿವರ ತಂಡ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News by Dhrishya News
29/12/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಬೆಂಗಳೂರು, ಡಿಸೆಂಬರ್‌ 29-ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದರು.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡ ರಚಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಸಚಿವರ ಈ ತಂಡವು ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸುಗಳನ್ನು ಮಾಡುವಂತೆ ಸಚಿವರ ತಂಡಕ್ಕೆ ಸೂಚಿಸಿದರು.

ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಸಹ ಪರಿಶೀಲಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಡಾ. ಜಿ. ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಬಂಟ್ವಾಳ : ಕಾರು ಡಿಕ್ಕಿಯಾಗಿ ತಾಯಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಯುವತಿ ಸಾವು..!!

Next Post

ಕೋವಿಡ್ JN1 ರೂಪಾಂತರಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ : ರಾಜ್ಯದಲ್ಲಿ ಜ.2 ರಿಂದ ಮತ್ತೆ ಲಸಿಕೆ ಅಭಿಯಾನ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋವಿಡ್ JN1 ರೂಪಾಂತರಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ : ರಾಜ್ಯದಲ್ಲಿ ಜ.2 ರಿಂದ ಮತ್ತೆ ಲಸಿಕೆ ಅಭಿಯಾನ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved