Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಸಾಮಾಜಿಕ ನ್ಯಾಯ ಇಲ್ಲದೆ ನಿಜವಾದ ಅಭಿವೃದ್ಧಿ ಅಸಾಧ್ಯ: ಡಾ.ಎಕ್ಕಾರು..!!

ಉಡುಪಿ ಜಿಲ್ಲಾಮಟ್ಟದ ಜನಶಕ್ತಿ ಉತ್ಸವ

Dhrishya News by Dhrishya News
02/01/2024
in ಕರಾವಳಿ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ಉಡುಪಿ, ಜನವರಿ 02: ಸಾಮಾಜಿಕ ನ್ಯಾಯವನ್ನು ಕೇಂದ್ರವಾಗಿ ಇಟ್ಟುಕೊಂಡು ಅಭಿವೃದ್ದಿ ಪಥದ ಬಗ್ಗೆ ಯೋಚನೆ ಮಾಡಬೇಕಾಗಿದೆ. ಅದನ್ನು ಹೊರತು ಪಡಿಸಿದರೆ ನಿಜವಾದ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಅದು ಕೇವಲ ಅಂಕಿ ಅಂಶಗಳ ಸುಡೋ ಅಭಿವೃದ್ಧಿಯಾಗುತ್ತದೆಂದು ಹಿರಿಯ ಚಿಂತಕ ಡಾ.ಗಣನಾಥ ಎಕ್ಕಾರು ಹೇಳಿದ್ದಾರೆ.

ಜನಶಕ್ತಿ ವಾರ ಪತ್ರಿಕೆಯ ವತಿಯಿಂದ ಉಡುಪಿ ಬಡಗಬೆಟ್ಟು ಸೊಸೈಟಿ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ಜನ ಶಕ್ತಿ ಉತ್ಸವದಲ್ಲಿ ಅವರು ಉಡುಪಿ ಜಿಲ್ಲೆಯ ಅಭಿವೃದ್ಧಿಯ ಪಥ ಕುರಿತು ವಿಚಾರ ಮಂಡಿಸಿದರು.

ಅಭಿವೃದ್ಧಿಯನ್ನು ಶಿಕ್ಷಣ, ಆರೋಗ್ಯ ಹಾಗೂ ಬದುಕಿನ ಗುಣಮಟ್ಟದ ಆಧಾರದ ಮೇಲೆ ಅರ್ಥೈಸಬೇಕಾಗುತ್ತದೆ. ಆದರೆ ಉಡುಪಿ ಜಿಲ್ಲೆಯಲ್ಲಿ ಬದುಕಿನ ಗುಣಮಟ್ಟವು ಆಶಾದಾಯಕವಾಗಿಲ್ಲ. ಸಂಸ್ಕೃತಿ ಮತ್ತು ಪ್ರಕೃತಿಯನ್ನು ಬಿಟ್ಟು ನಾವು ಅಭಿವೃದ್ಧಿ ಬಗ್ಗೆ ಚರ್ಚಿಸಲು ಸಾಧ್ಯವಿಲ್ಲ. ಕೃಷಿಯಲ್ಲಿನ ಸ್ಥಿತ್ಯಂತರ ಎಲ್ಲರದ ಮೇಲೆ ಪ್ರಭಾವ ಬೀರುತ್ತಿದೆ. ಇಲ್ಲಿನ ಮಾತೃ ಪ್ರಧಾನ ಬದಲು ಪುರುಷ ಪ್ರಧಾನ ಕುಟುಂಬ ವ್ಯವಸ್ಥೆ ಜಾರಿಗೆ ಬರುತ್ತಿದೆ ಎಂದು ಅವರು ತಿಳಿಸಿದರು.

ಒಂದು ಪ್ರದೇಶದ ಅಭಿವೃದ್ಧಿಗೆ ಖಾಸಗಿಗಿಂತ ಸರಕಾರಿ ಶಿಕ್ಷಣ ಸಂಸ್ಥೆಗಳ ಪಾತ್ರ ಬಹಳ ಮಹತ್ವವಾಗಿದೆ. ಆದರೆ ಇಂದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಿಂದ ದೂರವಾಗಿ ಖಾಸಗಿಗೆ ಹೆಚ್ಚು ಪ್ರೋತ್ಸಾಹ ನೀಡುವ ಕಾರ್ಯ ನಡೆಯುತ್ತಿದೆ. ಇದರಿಂದ ಬಡ ಹಿಂದುಳಿದವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತ ರಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ನಾವು ಸರಕಾರಿ ವಲಯದ ಶಿಕ್ಷಣ ಸಂಸ್ಥೆ ಗಳನ್ನು ಗಟ್ಟಿಕೊಳ್ಳಿಸಬೇಕಾಗಿದೆ. ಈ ಬಗ್ಗೆ ಹಕ್ಕೋತ್ತಾಯವನ್ನು ಅಗತ್ಯವಾಗಿ ಮಾಡಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಉಡುಪಿ ಜಿಲ್ಲೆಯ ಪರಿಸರದ ಮೇಲೆ ವಿವಿಧ ಉದ್ಯಮಗಳು ಹಾನಿ ಉಂಟು ಮಾಡುತ್ತಿದೆ. ಇದು ಜಿಲ್ಲೆಯ ಸಮಾತೋಲನ ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ. ಪರಿಸರ ನಾಶವನ್ನು ತಡೆಗಟ್ಟದಿದ್ದರೆ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಆದುದರಿಂದ ನಾವು ಪರಿಸರ ರಕ್ಷಣೆ ಬಗ್ಗೆ ಪ್ರಾಮಾಣಿಕವಾಗಿ ಚಿಂತನೆ ಮಾಡ ಬೇಕು. ಸಮಾತೋಲನವ ಅಭಿವೃದ್ಧಿಗೆ ಉತ್ತಮ ಪರಿಸರ ಅತೀ ಮುಖ್ಯವಾಗಿದೆ ಎಂದರು.

ಕರಾವಳಿ ಜಿಲ್ಲೆಗಳ ಸೌಹಾರ್ದ ಪರಂಪರೆ ಕುರಿತು ಮಂಗಳೂರು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಇಸ್ಮಾಯಿಲ್ ಎನ್. ಮಾತ ನಾಡಿದರು. ಅಧ್ಯಕ್ಷತೆಯನ್ನು ವಿಮಾ ನೌಕರರ ಸಂಘದ ಅಧ್ಯಕ್ಷ ಕೆ.ವಿಶ್ವನಾಥ್ ವಹಿಸಿದ್ದರು. ಕಾರ್ಮಿಕ ಮುಖಂಡ ಬಾಲಕೃಷ್ಣ ಶೆಟ್ಟಿ, ಜನಶಕ್ತಿ ಸಂಪಾದಕ ಡಾ.ಕೆ.ಪ್ರಕಾಶ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೀಲಾವತಿ ಉಪಸ್ಥಿತರಿದ್ದರು.

ಎಚ್.ನರಸಿಂಹ ಸ್ವಾಗತಿಸಿದರು. ರಮೇಶ್ ಗುಲ್ವಾಡಿ ಕಾರ್ಯಕ್ರಮ ನಿರೂ ಪಿಸಿದರು. ಕವಿರಾಜ್ ಸಹಕರಿಸಿದರು. ಇದಕ್ಕೂ ಮುನ್ನಾ ಸಂತೋಷ್ ನಾಯಕ್ ಪಟ್ಲ ನಿರ್ದೇಶನದ ವೈಜ್ಞಾನಿಕ ಮನೋಭಾವದ ಕುರಿತ ಮಕ್ಕಳ ನಾಟಕ ‘ಜ್ಞಾನ-ವಿಜ್ಞಾನ- ಜಿಂದಾಬಾದ್’ ಪ್ರದರ್ಶನಗೊಂಡಿತು.

ಅವೈದಿಕ ಸಂಸ್ಕೃತಿಯ ಮೇಲೆ ವೈದಿಕ ಸಂಸ್ಕೃತಿ ಸಾಕಷ್ಟು ಪ್ರಭಾವ ಬೀರುತ್ತಿದ್ದು, ಈ ಮೂಲಕ ನಮ್ಮ ಮೇಲೆ ಏಕಸಂಸ್ಕೃತಿಯನ್ನು ತುರುಕುವ ಪ್ರಯತ್ನ ನಡೆಸ ಲಾಗುತ್ತಿದೆ. ಇದು ಅಭಿವೃದ್ಧಿ ಪಥದಲ್ಲಿ ಬಹುದೊಡ್ಡ ತೊಡಕು ಆಗಿದೆ ಎಂದು ಡಾ.ಗಣನಾಥ ಎಕ್ಕಾರು ಹೇಳಿದರು.

ಹಿಂದುಳಿದವರ್ಗದ ಯುವಕರು ಅಭಿವೃದ್ಧಿ ಬಗ್ಗೆ ಯೋಚನೆ ಮಾಡುವ ಬದಲು ಮಠ ಮಂದಿರ, ಸಂಘಟನೆ, ಒಂದು ಧರ್ಮವನ್ನು ಗುರಿಯಾಗಿಟ್ಟು ಕೊಂಡು ಮಾತನಾಡುತ್ತಿದ್ದಾರೆ. ಈ ತೊಡಕಿನಿಂದ ನಾವು ಹೊರ ಬರಬೇಕಾದ ಅಗತ್ಯವಿದೆ. ಇದಕ್ಕೆ ಪರ್ಯಾಯವಾಗಿ ನಮ್ಮ ಮೂಲಸಂಸ್ಕೃತಿಯನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕಾದ ಅವಶ್ಯಕತೆ ಇದೆ ಎಂದರು.

‘ಪರಿಸರದ ಅಸಮಾತೋಲನವು ಅಭಿವೃದ್ಧಿ ಪಛಥದಲ್ಲಿರುವ ಬಹು ದೊಡ್ಡ ಸವಾಲು ಆಗಿದೆ. ಈ ಬಗ್ಗೆ ಗಂಭೀರವಲಾಗಿ ಯೋಚನೆ ಮಾಡಿ ಪರಿಸರ ಉಳಿಸುವ ಚಳವಳಿ ಮಾಡಬೇಕು. ಕರಾವಳಿ ಸಂಸ್ಕೃತಿಯಲ್ಲಿ ಸೌಹಾರ್ದತೆಗೆ ಪ್ರಧಾನ ಸ್ಥಾನ ಇತ್ತು. ಆದರೆ ಇಂದು ಅದಕ್ಕೂ ಕುತ್ತು ಬರುತ್ತಿದೆ’

Previous Post

ರಾಜ್ಯ ಸರಕಾರ ದಿಂದ ಮದ್ಯದ ದರ ಏರಿಕೆ ಮಾಡಿಲ್ಲ-ಸಚಿವ ಆರ್​​.ಬಿ.ತಿಮ್ಮಾಪುರ ಸ್ಪಷ್ಟನೆ..!!

Next Post

ಕೊಳಲಗಿರಿ ಟು ಸರಳೇಬೆಟ್ಟು-ವಸತಿಕಾಲನಿಗೆ ನರ್ಮ್ ಬಸ್ಸ್ ಸೇವೆಗೆ ಮನವಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೊಳಲಗಿರಿ ಟು ಸರಳೇಬೆಟ್ಟು-ವಸತಿಕಾಲನಿಗೆ ನರ್ಮ್ ಬಸ್ಸ್ ಸೇವೆಗೆ ಮನವಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved