Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ..!!

Dhrishya News by Dhrishya News
06/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
6
VIEWS
Share on FacebookShare on Twitter

ಬೆಂಗಳೂರು, ಜನವರಿ 6:ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೆ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ.

ಅವರು ಇಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಅವರ ಬೇಡಿಕೆಗಳ ಕುರಿತು ಚರ್ಚಿಸಿದರು.

ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ.

ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು.

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಇದರೊಂದಿಗೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಡು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.

ಇದರೊಂದಿಗೆ ನೇಮಕಾತಿಯಲ್ಲಿ ಅವರ ಸೇವಾನುಭವ ಆಧರಿಸಿ, ವೈಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸಹ ಸಮ್ಮತಿಸಿ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗಯವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಿಗೆ ಮನವಿ ಮಾಡಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮಾಜಿ ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ , ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಎಂ.ಎಸ್. ಶ್ರೀಕರ್‌, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ. ಜಗದೀಶ್‌ ಮತ್ತು ಇತರ ಹಿರಿಯ ಅಧಿಕಾರಿಗಳು, ಅತಿಥಿ ಉಪನ್ಯಾಸಕರ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Previous Post

ಶಕ್ತಿ ಯೋಜನೆ:ಖಾಸಗಿ ಬಸ್​​ಗಳಿಗೂ ವಿಸ್ತರಿಸುವಂತೆ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ..!!

Next Post

ಮಣಿಪಾಲದಲ್ಲಿ 3ನೇ ಆವೃತ್ತಿಯ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) 2024 ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದಲ್ಲಿ 3ನೇ ಆವೃತ್ತಿಯ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) 2024 ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News