Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದೇಸೀ ಕ್ರೀಡೆಗಳನ್ನು ಉಳಿಸಿ ಬೆಳೆಸಿ ಪ್ರೋತ್ಸಾಹಿಸಿ. ವಿ. ಸುನಿಲ್ ಕುಮಾರ್..!!

Dhrishya News by Dhrishya News
13/01/2024
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಾರ್ಕಳ : ಜನವರಿ 13: ದ್ರಶ್ಯ ನ್ಯೂಸ್ :ಕಾರ್ಕಳ ತಾಲೂಕು ಕ್ರೀಡಾ ಭಾರತಿ ವತಿಯಿಂದ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಾರ್ಕಳ ಘಟಕದ ಸಹಯೋಗದಿಂದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ ದೈಹಿಕ ಶಿಕ್ಷಕರಿಗಾಗಿ ಪುರುಷರಿಗೆ ವಾಲಿಬಾಲ್ ಮಹಿಳೆಯರಿಗೆ ತ್ರೋಬಾಲ್ ಹಾಗೂ ಪುರುಷ ಹಾಗೂ ಮಹಿಳೆಯರಿಗೆ ಹಗ್ಗ ಜಗ್ಗಾಟ ಪಂದ್ಯಾಟ ಕಾರ್ಕಳ ಕಾಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನವಾದ ಇಂದು (12-01-2024ಗುರುವಾರ) ಜರುಗಿತು.

ಕಾರ್ಯಕ್ರಮವನ್ನು ಕಾರ್ಕಳ ತಾಲೂಕಿನ ಮಾನ್ಯ ಶಾಸಕರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ಉದ್ಘಾಟಿಸಿ ಶಾಲೆಗಳಲ್ಲಿ ಮಕ್ಕಳಿಗೆ ಉಳಿದ ಕ್ರೀಡೆಯ ಜೊತೆ ಈಗ ನಶಿಸಿಹೋಗುತ್ತಿರುವ ದೇಸಿ ಕ್ರೀಡೆಗಳನ್ನು ಪರಿಚಯಿಸಿ ಪ್ರೋತ್ಸಾಹಿಸಬೇಕು ಎಂದರು. ಕ್ರೀಡಾ ಭಾರತಿಯ ವಿಭಾಗ ಸಂಯೋಜಕರಾದ ಶ್ರೀ ಪ್ರಸನ್ನ ಶೆಣೈ ಕಾರ್ಕಳ ಪ್ರಸ್ತಾವನೆಗೈದರು.

ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ರವಿಚಂದ್ರ ಕಾರಂತ್, ಪುರಸಭಾ ಸದಸ್ಯೆ ಶ್ರೀಮತಿ ರೆಹಮತ್ ಎನ್ ಶೇಖ್, ಶಾಲಾ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಅಬ್ದುಲ್ ಆರಿಸ್, ಶಾಲಾ ಮುಖ್ಯೋಪಾಧ್ಯಾಯ ಶ್ರೀ ಸುಧಾಕರ ಪೂಜಾರಿ, ಕ್ರೀಡಾ ಭಾರತಿ ಕಾರ್ಕಳ ತಾಲೂಕು ಅಧ್ಯಕ್ಷ ಶ್ರೀ ಶಿವಾನಂದ ಕಾಮತ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಬೈಲೂರು ಶ್ರೀ ಮಂಜುನಾಥ ಶೆಟ್ಟಿ, ಶ್ರೀ ನರೇಂದ್ರ ಕಾಮತ್ ಹಾಗೂ ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಶ್ರೀ ರಮಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕಿನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ವಾಲಿಬಾಲ್, ತ್ರೋಬಾಲ್, ಹಗ್ಗಜಗ್ಗಾಟ ತಂಡಗಳಲ್ಲಿ ಭಾಗವಹಿಸಿದರು.

ಕಾರ್ಕಳ ತಾಲೂಕು ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಪಾಂಡುರಂಗ ಆಚಾರ್ಯ ಇವರು ವಂದಿಸಿದರು. ಕ್ರೀಡಾ ಭಾರತಿಯ ಕಾರ್ಕಳ ತಾಲೂಕು ಕಾರ್ಯದರ್ಶಿ ಶ್ರೀ ಸಂಜಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Previous Post

ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ ‘ಡಾ.ಪ್ರಭಾ ಅತ್ರೆ’ ಹೃದಯಾಘಾತದಿಂದ ನಿಧನ..!!

Next Post

ಮಂಗಳೂರು – ಮಡಗಾವ್ ವಿಶೇಷ ರೈಲು ವೇಳಾಪಟ್ಟಿ ಬದಲಾವಣೆ: ಇಲ್ಲಿದೆ ಹೊಸ ವೇಳಾಪಟ್ಟಿ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು - ಮಡಗಾವ್ ವಿಶೇಷ ರೈಲು ವೇಳಾಪಟ್ಟಿ ಬದಲಾವಣೆ: ಇಲ್ಲಿದೆ ಹೊಸ ವೇಳಾಪಟ್ಟಿ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved