Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಯೋದ್ಯೆ ರಾಮನ ಪ್ರಾಣ ಪ್ರತಿಷ್ಠೆ : ಕರ್ನಾಟಕದಲ್ಲಿ ಜನವರಿ 22ರಂದು ರಜೆ ಇಲ್ಲ, ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮ ನೇರಪ್ರಸಾರ..!!

Dhrishya News by Dhrishya News
19/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಬೆಂಗಳೂರು : ಜನವರಿ 19:ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಈ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ಮಕ್ಕಳಿಗೆ ತೋರಿಸಲು ಖಾಸಗಿ ಶಾಲೆಗಳು ನಿರ್ಧರಿಸಿವೆ.

ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಸ್ಕೂಲ್ಸ್ ಇನ್ ಕರ್ನಾಟಕ (KAMS, ಖಾಸಗಿ ಶಾಲೆಗಳ ಒಕ್ಕೂಟ) ಸುತ್ತೋಲೆ ಹೊರಡಿಸಿದ್ದು “ಒಕ್ಕೂಟದ ಎಲ್ಲ ಸದಸ್ಯರು ಆಯಾ ಶಾಲೆಯಲ್ಲಿ ತಮ್ಮಲ್ಲಿರುವ ಲಭ್ಯ ವ್ಯವಸ್ಥೆಗೆ ಅನುಗುಣವಾಗಿ ಒಂದೂವರೆ ಗಂಟೆ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಬೇಕು ಎಂದು ಸೂಚಿಸಿದೆ.

ಕೆಎಎಂಎಸ್‌ನ ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ಮಾತನಾಡಿ, ಅಂದು ಶಾಲೆಗಳಿಗೆ ರಜೆ ಘೋಷಿಸದಂತೆ ತಿಳಿಸಿದ್ದೇವೆ. ಜನವರಿ 22ರ ಶ್ರೀರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವು ಇಡೀ ದೇಶದ ಗಮನವನ್ನು ಸೆಳೆದಿದೆ. ಈ ಹಿನ್ನೆಲೆಯಲ್ಲಿ ಒಕ್ಕೂಟದ ಎಲ್ಲ ಸದಸ್ಯರು ತಮ್ಮ ತಮ್ಮ ಶಾಲೆಗಳಲ್ಲಿ ಒಂದೂವರೆ ಗಂಟೆಗಳ ಕಾಲ ಕಾರ್ಯಕ್ರಮವನ್ನು ನೇರಪ್ರಸಾರ ಮಾಡುವಂತೆ ಸೂಚಿಸಲಾಗಿದೆ ಎಂದರು.

ಆಯಾ ಶಿಕ್ಷಣ ಸಂಸ್ಥೆಗಳು ರಾಜಕೀಯವನ್ನು ಹೊರಗಿಟ್ಟು ಈ ಕಾರ್ಯಕ್ರಮವನ್ನು ಮಕ್ಕಳಿಗೆ ತೋರಿಸಬೇಕು. ಈ ಮೂಲಕ ಮಕ್ಕಳಿಗೆ ರಾಮ ಜನ್ಮಭೂಮಿಯ ಮಹತ್ವವನ್ನು ತಿಳಿಸಬೇಕು. ರಜೆ ಘೋಷಿಸುವುದು ಸರಿಯಲ್ಲ. ಇದರಿಂದ ವಿದ್ಯಾರ್ಥಿಗಳು ಒಟ್ಟಿಗೆ ಐತಿಹಾಸಿಕ ಕ್ಷಣವನ್ನು ವೀಕ್ಷಿಸುವ ಅನುಭವವನ್ನು ಕಳೆದುಕೊಳ್ಳುತ್ತಾರೆ ಎಂಬುದು ನಮ್ಮ ಅಭಿಪ್ರಾಯವಾಗಿದೆ ಎಂದು ಹೇಳಿದರು.

ನಾವು ಜನವರಿ 22 ರಂದು ಶಾಲೆಗಳಿಗೆ ರಜೆಯನ್ನು ಘೋಷಿಸುತ್ತಿಲ್ಲ. ಅದು ಕೆಲಸದ ದಿನವಾಗಿರುತ್ತದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಉಂಟಾದರೆ, ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸಿಸುತ್ತಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

Previous Post

ಆನೇಕಲ್ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ,ಇಬ್ಬರು ಕಾರ್ಮಿಕರ ಸಾವು,16 ಮಂದಿಗೆ ಗಂಭೀರ ಗಾಯ…!!

Next Post

ಭ್ರೂಣ ಹತ್ಯೆ ತಡೆಗೆ ಕಾರ್ಯಪಡೆ ರಚನೆ :ಆರೋಗ್ಯ ಸಚಿವ ದಿನೇಶ್ ಗುಂಡೂರಾವ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭ್ರೂಣ ಹತ್ಯೆ ತಡೆಗೆ ಕಾರ್ಯಪಡೆ ರಚನೆ :ಆರೋಗ್ಯ ಸಚಿವ ದಿನೇಶ್ ಗುಂಡೂರಾವ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News