Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸಮಿತಿ ರಚನೆ..!!

Dhrishya News by Dhrishya News
28/01/2024
in ಸುದ್ದಿಗಳು
0
0
SHARES
3
VIEWS
Share on FacebookShare on Twitter

ಬೆಂಗಳೂರು : ಜನವರಿ 28: ದ್ರಶ್ಯ ನ್ಯೂಸ್ : ರಾಜ್ಯ ಸರಕಾರ ಯಶಸ್ವಿಯಾಗಿ ಜಾರಿಗೆ ತಂದಿರುವ ಐದು ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸರ್ಕಾರ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರ ಹಾಗೂ ತಾಲೂಕು ಮತ್ತು ಬಿಬಿಎಂಪಿ ಮಟ್ಟದಲ್ಲಿ ಅನುಷ್ಠಾನ ಸಮಿತಿ ರಚಿಸಲು ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಮೇಲ್ವಿಚಾರಣೆಗೆ ರಾಜ್ಯ ಮಟ್ಟದ ಕಾರ್ಯವ್ಯವಸ್ಥೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಅಗತ್ಯ ನೀತಿ, ಸುಧಾರಣೆಗಳು, ಅನುಷ್ಠಾನದ ವಿಧಾನಗಳಲ್ಲಿ ಸರಳೀಕರಣ ತರಲು ಹಾಗೂ ತಳಮಟ್ಟದಲ್ಲಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರಗಳನ್ನು ಮತ್ತು ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿಗಳನ್ನು ರಚಿಸಲು ಇದೇ ತಿಂಗಳು 17 ರಂದು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಮಟ್ಟದಲ್ಲಿ ‘ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’, ಜಿಲ್ಲಾ ಮಟ್ಟದಲ್ಲಿ ‘ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲ್ಲೂಕು ಮಟ್ಟದಲ್ಲಿ ‘ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ’ ಹಾಗೂ ಬಿಬಿಎಂಪಿ ಮಟ್ಟದಲ್ಲಿ ‘ಬಿಬಿಎಂಪಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ’ ರಚಿಸಲು ಸರ್ಕಾರವು ನಿರ್ಧರಿಸಿ ಆದೇಶಿಸಿದೆ

ಸದಸ್ಯ ಕಾರ್ಯದರ್ಶಿಯವರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಇತರೆ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ / ಕಾರ್ಯದರ್ಶಿಯವರನ್ನು ರಾಜ್ಯ ಮಟ್ಟದ ಅನುಷ್ಠಾನ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಕ ಮಾಡಬೇಕು. ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಸದಸ್ಯ ಕಾರ್ಯದರ್ಶಿರವರು ಸಕ್ಷಮ ಪ್ರಾಧಿಕಾರದ (ಸರ್ಕಾರದ) ಅನುಮೋದನೆ ಪಡೆದು ನೇಮಿಸಬೇಕು.

ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಗಳು ಹಾಗೂ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಕಾರ್ಯಗಳು, ಜವಾಬ್ದಾರಿಗಳು, ಅಧಿಕಾರಿ/ಸಿಬ್ಬಂದಿಗಳ ನೇಮಕಾತಿ, ರಾಜೀನಾಮೆ, ಕಛೇರಿ ನಿರ್ವಹಣೆ, ಸವಲತ್ತು, ಗೌರವಧನ, ಭತ್ಯೆಗಳು ಹಾಗೂ ಇತರೆ ಯಾವುದೇ ಸಂಬಂಧಪಟ್ಟ ವಿಷಯಗಳ ಕುರಿತು ಸಕ್ಷಮ ಪ್ರಾಧಿಕಾರದ (ಸರ್ಕಾರದ) ಅನುಮೋದನೆಯೊಂದಿಗೆ ರಾಜ್ಯ ಮಟ್ಟದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರು ಪ್ರತ್ಯೇಕವಾಗಿ ಆದೇಶ ಹೊರಡಿಸಬೇಕು.

ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಮುಖ ಜವಾಬ್ದಾರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಯಾಗಿರುತ್ತದೆ ಹಾಗೂ ಈ ಪ್ರಾಧಿಕಾರವು ನೀತಿ ರಚನೆ, ಸುಧಾರಣಾ ಕ್ರಮಗಳು, ಅನುಷ್ಠಾನದಲ್ಲಿ ಸರಳೀಕರಣ ಹಾಗೂ ಸಮನ್ವಯತೆ ತರುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ.

ರಾಜ್ಯ ಮಟ್ಟದ ಅನುಷ್ಠಾನ ಪ್ರಾಧಿಕಾರಕ್ಕೆ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿದವರು ಅಧ್ಯಕ್ಷರಾಗಿರುತ್ತಾರೆ. ಸಚಿವ ಸ್ಥಾನಮಾನ ಹೊಂದಿದ ಐವರು ಉಪಾಧ್ಯಕ್ಷರಾಗಿರುತ್ತಾರೆ. 31 ಜಿಲ್ಲೆಗಳಿಗೆ ಪ್ರತಿನಿಧಿಸುವ ಜಿಲ್ಲೆಗೆ ಒಬ್ಬರಂತೆ ಸದಸ್ಯರು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶಿಷ್ಟಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿ ಇರುತ್ತಾರೆ.

Previous Post

ಇನ್ಮುಂದೆ ಆಸ್ಪತ್ರೆಗಳಲ್ಲಿ ‘ನಗದು ರಹಿತ ಚಿಕಿತ್ಸೆ’ ಲಭ್ಯ..!!

Next Post

ಕು.ದಿವ್ಯಶ್ರೀ ಭಟ್ ಅವರಿಗೆ ಈ ಸಲದ ‘ರಾಗ ಧನ ಪಲ್ಲವಿ’ ಪ್ರಶಸ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕು.ದಿವ್ಯಶ್ರೀ ಭಟ್ ಅವರಿಗೆ ಈ ಸಲದ 'ರಾಗ ಧನ ಪಲ್ಲವಿ' ಪ್ರಶಸ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News