Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಳ್ತಂಗಡಿ : ವೇಣೂರಿನಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ: ಮೂವರು ಕಾರ್ಮಿಕರ ಸಾವು ಪ್ರಕರಣ ,ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು..!!

Dhrishya News by Dhrishya News
29/01/2024
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಬೆಳ್ತಂಗಡಿ: ಜನವರಿ 29:  ಬೆಳ್ತಂಗಡಿ ತಾಲೂಕು ವೇಣುರಿನಲ್ಲಿ ನಿನ್ನೆ ಪಟಾಕಿ ಗೋದಮಿನಲ್ಲಿ ಸ್ಫೋಟದಿಂದ ಮೂವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಂಕಿತ ವ್ಯಕ್ತಿ ಸಯ್ಯದ್ ಬಶೀರ್ ಎನ್ನುವವನ್ನು ಪೊಲೀಸರು ಬಂಧಿಸಿದ್ದಾರೆ.

ಪಟಾಕಿಗೋದಾಮಿನಲ್ಲಿ ಸ್ಪೋಟದಿಂದ ಮೂವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ್ಕೆ ಅಲ್ಲಿ ಅಕ್ರಮವಾಗಿ ಬಾಂಬ್ ತಯಾರಿಸಲಾಗುತ್ತಿತ್ತು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಯ್ಯದ್ ಬಶೀರ್ನನ್ನು ಇದೀಗ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬಶೀರ್ನನ್ನು ಸುಳ್ಯದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿಸಿದ ನಂತರ ಅಜ್ಞಾತ ಸ್ಥಳದಲ್ಲಿ ಬೆಳ್ತಂಗಡಿ ಪೊಲೀಸರು ಬಶೀರ್ನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನೆ ಹಿನ್ನೆಲೆ?

ನಿನ್ನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್‌ತ್ಯಾರು ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ತ್ರಿಶೂರಿನ ವರ್ಗೀಸ್, ಹಾಸನ ನಾಯಕನಹಳ್ಳಿ ಚೇತನ್, ಕೇರಳದ ಸ್ವಾಮಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಉಳಿದಂತೆ ಹಾಸನದ ದಿನೇಶ, ಕಿರಣ, ಕುಮಾರ, ಕಲ್ಲೇಶ, ಕೇರಳದ ಪ್ರೇಮ್, ಕೇಶವ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗುತ್ತಿದೆ.

ಕುಟ್ಟೋಡಿಯ ಸಾಲಿಡ್ ಫೈಯರ್‌ವರ್ಕ್‌ ಎಂಬ ಘಟಕದಲ್ಲಿ ಘಟನೆ ನಡೆದಿದ್ದು, ಅಲ್ಲಿನ ಪರಿಸ್ಥಿತಿ ಭಯಾನಕವಾಗಿದೆ. ಸುಮಾರು 5 ಬಾರಿ ಸ್ಫೋಟ ಸಂಭವಿಸಿದ್ದು, ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.ಮೃತಪಟ್ಟ ಮೂವರು,ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಇಬ್ಬರ ದೇಹ ಸ್ಪೋಟದ ಸುತ್ತ ನೂರು ಮೀಟ‌ರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ.

ಮೃತದೇಹ ಪತ್ತೆಹಚ್ಚಲು ಪರದಾಡುವಂತಾಯಿತು. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ಒಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಶೆಡ್ ಸಂಪೂರ್ಣ ಧ್ವಂಸವಾ ಗಿದ್ದು, ಇದರ ಸದ್ದು 4 ಕಿ.ಮೀ. ವ್ಯಾಪ್ತಿಯಷ್ಟು ದೂರಕ್ಕೆ ಕೇಳಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್‌ ಪಿ ವಿಜಯ ಪ್ರಸಾದ್ ಸಹಿತ ವೇಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಫೋಟಕ್ಕೆ ಕಾರಣವೇನು ಎನ್ನುವುದರ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ.

Previous Post

ಚಿಕ್ಕಮಗಳೂರು : ಶಾಲಾ ಆವರಣದಲ್ಲಿ  ಬೀಡು ಬಿಟ್ಟ 25ಕ್ಕೂ ಹೆಚ್ಚು ಕಾಡಾನೆಗಳು : ವಿದ್ಯಾರ್ಥಿಗಳಿಗೆ ಆಚೆ ಬರದಂತೆ ರಜೆ ಘೋಷಣೆ ..!!

Next Post

ಬಿಗ್ ಬಾಸ್​ ಸೀಸನ್ 10ರ ವಿನ್ನರ್ ಆಗಿ ಕಾರ್ತಿಕ್ ಮಹೇಶ್.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಗ್ ಬಾಸ್​ ಸೀಸನ್ 10ರ ವಿನ್ನರ್ ಆಗಿ ಕಾರ್ತಿಕ್ ಮಹೇಶ್.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಗಾಜಿನ ಬ್ಲಾಕ್‌ ಇಳಿಸುವ ವೇಳೆ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

ಉಡುಪಿ: ಗಾಜಿನ ಬ್ಲಾಕ್‌ ಇಳಿಸುವ ವೇಳೆ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

26/10/2026
ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

26/10/2026
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

26/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

26/10/2026

Recent News

imunify-bot-check