Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಂಗಳೂರು ಏರ್ಪೋರ್ಟ್ನಲ್ಲಿ ವಿಮಾನ ಹೊರಡುವುದಕ್ಕೂ ಕೆಲವೇ ಕ್ಷಣ ಮುನ್ನ ಬ್ಯಾಗ್​​ನಲ್ಲಿ ಬಾಂಬ್​ ಇದೆ ಎಂದ ವ್ಯಕ್ತಿ!

Dhrishya News by Dhrishya News
30/01/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಬೆಂಗಳೂರು, ಜನವರಿ 30: ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ವಿಮಾನ ಹೊರಡುವುದಕ್ಕೂ ಮುನ್ನ ಕೆಲವೇ ಕ್ಷಣಗಳ ಮುನ್ನ ಹೇಳಿದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ  ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಭಾನುವಾರ ಸಂಜೆ ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ಆರೋಪಿಯನ್ನು ಖಾಸಗಿ ಕಂಪನಿ ಉದ್ಯೋಗಿ ಸಜು ಕೆ ಕುಮಾರನ್ ಎಂದು ಗುರುತಿಸಲಾಗಿದೆ. ಕೇರಳದ ಕೊಚ್ಚಿಗೆ ತೆರಳಲು ಏರ್ ಇಂಡಿಯಾ ವಿಮಾನದಲ್ಲಿ ಕುಳಿತಿದ್ದಾಗ ಸಜು ಕುಮಾರ್ ವಿಕೃತಿ ಮೆರೆದಿದ್ದರು. ಇದರಿಂದಾಗಿ ಭದ್ರತಾ ಸಿಬ್ಬಂದಿ ಬೇಸ್ತು ಬೀಳುವಂತಾಗಿತ್ತು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಬೆಂಗಳೂರಿನಿಂದ ಕೊಚ್ಚಿಗೆ ತೆರಳುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿದ್ದ ಸಜು ಕುಮಾರ್ (48) ಇನ್ನೇನು ವಿಮಾನ ಟೇಕಾಫ್ ಆಗಬೇಕು ಎನ್ನುವಷ್ಟರಲ್ಲಿ ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದ.

ವಿಮಾನ ನಿಲ್ದಾಣ ಪೊಲೀಸರ ಪ್ರಕಾರ, ಈ ಘಟನೆಯು ಭಾನುವಾರ ಸಂಜೆ 5.25 ಕ್ಕೆ ಸಂಭವಿಸಿದೆ. ವಿಮಾನ ಸಂಖ್ಯೆ ‘I5 990’ ರ ನಿರ್ಗಮನಕ್ಕೆ ಕೇವಲ ಐದು ನಿಮಿಷಗಳ ಮೊದಲು ಆರೋಪಿಯು ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದಾನೆ. ಏರ್‌ಲೈನ್ ಸಿಬ್ಬಂದಿಗೆ ಬ್ಯಾಗ್ ಪರಿಶೀಲಿಸಲೂ ಅನುವು ಮಾಡಿಕೊಡಲಿಲ್ಲ. ಪರಿಣಾಮವಾಗಿ ತಕ್ಷಣವೇ ಆತನನ್ನು ವಿಮಾದಿಂದ ಇಳಿಸಲಾಯಿತು. ನಂತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದರು

ಆರೋಪಿ ವಿರುದ್ಧ ಎಫ್​​ಐಆರ್

ಬಳಿಕ ಆರೋಪಿಯನ್ನು ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ ಆತನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 505 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಹೇಳಿಕೆಗಳಿಗೆ ಸಂಬಂಧಿಸಿದ್ದಾಗಿದ್ದು, ಆರೋಪ ಸಾಬೀತಾದರೆ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ.

ಇದು ಅಕ್ಷಮ್ಯ ಅಪರಾಧವಾಗಿದೆ ಮತ್ತು ಇದೀಗ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯದಿಂದ ಅನುಮತಿ ಕೋರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಕುಮಾರನ್ ಕೇರಳದ ತ್ರಿಶೂರ್‌ಗೆ ಹೋಗಲು ಕೊಚ್ಚಿಗೆ ತೆರಳುವ ವಿಮಾನವೇರಿದ್ದ ಎಂದು ಮೂಲಗಳು ತಿಳಿಸಿವೆ.

ಅಸಲಿಗೆ ವಿಮಾನದಲ್ಲಿ ಆಗಿದ್ದೇನು?

ಆರೋಪಿಯ ಸಹೋದರಿಯ ತಂಗಿಯ ನವಜಾತ ಶಿಶು ಹೆರಿಗೆಯ ಸಮಯದಲ್ಲಿ ಸಾವನ್ನಪ್ಪಿತ್ತು. ಹೀಗಾಗಿ ತರಾತುರಿಯಲ್ಲಿ ಊರಿಗೆ ತೆರಳಲು ಆರೋಪಿ ವಿಮಾನ ಪ್ರಯಾಣ ಆಯ್ಕೆ ಮಾಡಿಕೊಂಡಿದ್ದ. ಭದ್ರತಾ ತಪಾಸಣೆ ಎಲ್ಲ ಮುಗಿದು ವಿಮಾನದಲ್ಲಿ ಕುಳಿತ ನಂತರವೂ ವಿಮಾನದೊಳಗಿನ ಹೆಚ್ಚುವರಿ ತಪಾಸಣೆಯಿಂದ ಆತ ಸಿಟ್ಟಾಗಿದ್ದ. ಹೀಗಾಗಿ ತಪಾಸಣೆ ನಡೆಸುತ್ತಿದ್ದ ಸಿಬ್ಬಂದಿ ಬಳಿ, ನಾನೇನು ಬಾಂಬ್ ಅಥವಾ ಚಾಕುವನ್ನು ಹೊತ್ತೊಯ್ಯುತ್ತಿದ್ದೇನೆ ಎಂದು ಶಂಕಿಸಿದ್ದೀರಾ ಎಂದು ಹೇಳಿದ್ದ ಎಂಬುದಾಗಿ ಮೂಲಗಳು ತಿಳಿಸಿವೆ. ನವಜಾತ ಶಿಶುವಿನ ಮರಣವನ್ನು ದೃಢಪಡಿಸಿದ ನಂತರ, ಕುಮಾರನ್ ಕ್ಷಮೆಯಾಚಿಸಿದರೆ ಕೇವಲ ದಂಡದೊಂದಿಗೆ ಆತನನ್ನು ಬಿಟ್ಟುಬಿಡುವ ಸಾಧ್ಯತೆಯೂ ಇದೆ ಎಂದು ಮಾಧ್ಯಮ ವರದಿಯೊಂದು ಉಲ್ಲೇಖಿಸಿದೆ.

Previous Post

ರಾಜ್ಯದಲ್ಲಿ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಜಿಲ್ಲಾವಾರು ಹುದ್ದೆಗಳ ಮಾಹಿತಿ..!!

Next Post

FASTAG’ ನವೀಕರಣಕ್ಕೆ ಜನವರಿ 31 ನಾಳೆ ಕೊನೆ ದಿನ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

FASTAG' ನವೀಕರಣಕ್ಕೆ ಜನವರಿ 31 ನಾಳೆ ಕೊನೆ ದಿನ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News