Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಾರ್ಚ್ 9ರಂದು ರಾಜ್ಯಾದ್ಯಂತ ʻರಾಷ್ಟ್ರೀಯ ಲೋಕ್ ಅದಾಲತ್’..!!

Dhrishya News by Dhrishya News
08/02/2024
in मौसम
0
0
SHARES
10
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 08: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್.09 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ.

  • ವ್ಯಾಜ್ಯ ಪೂರ್ವ ಪ್ರಕರಣಗಳು,

ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು ( ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು(ಆರ್‍ಇಆರ್‍ಎ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.

  • ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು

ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾಮಿರ್ವಕ ವಿವಾದಗಳು, ವಿದ್ಯುತ್ ಮತ್ತು ನೀರಿನ ಶುಲ್ಕಗಳು, ವೈವಾಹಿಕ, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಹಾಗೂ ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು.

ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‍ಒಪಿ ನಿಯಮಗಳಂತೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-222373, ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ತಿಳಿಸಿದ್ದಾರೆ.

Previous Post

ಕಾರ್-ಟಿ ಸೆಲ್ ಸ್ವದೇಶಿ ಕ್ಯಾನ್ಸರ್ ಚಿಕಿತ್ಸಾ ಪದ್ಧತಿ:ಮೂವರು ಗುಣಮುಖ..!!

Next Post

ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ:ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ:ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved