Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಳ್ತಂಗಡಿ : ವಿದ್ಯಾರ್ಥಿನಿ ಬಗ್ಗೆ ಮಾನಹಾನಿ ಮೆಸೇಜ್ ರವಾನಿಸಿ ಅವಮಾನಿಸಿದ ಶಿಕ್ಷಕ ;  ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ವಿದ್ಯಾರ್ಥಿನಿ ಸಾವು..!!

Dhrishya News by Dhrishya News
13/02/2024
in ಕರಾವಳಿ
0
0
SHARES
67
VIEWS
Share on FacebookShare on Twitter

ಬೆಳ್ತಂಗಡಿ, ಫೆಬ್ರವರಿ 13: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ.

ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ವಿವರ..

ತನ್ನ ಬಗ್ಗೆ ಶಿಕ್ಷಕ ಮಾನಹಾನಿ ಮೆಸೇಜ್ ರವಾನಿಸಿದ ಹಿನ್ನೆಲೆ ಮನನೊಂದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಖಾಸಗಿ ಶಾಲೆಯ  10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪ್ರಕರಣ ಸಂಬಂಧ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ತನ್ನ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿನಿಗೆ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಮಾನಹಾನಿ ಮೆಸೇಜ್ ಮಾಡಿ ವಿಚಾರ ತಿಳಿದ 10ನೇ ತರಗತಿ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದಳು. ಅದರಂತೆ ಶಾಲೆಗೆ ತೆರಳಿ ವಿಚಾರಿಸಲಾಗಿತ್ತು. ಫೆಬ್ರವರಿ 7 ರಂದು ಎಂದಿನಂತೆ ಶಾಲೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿ ಬಿಸ್ಕೆಟ್ ಪ್ಯಾಕೇಟ್ ಜೊತೆಗೆ ಇಲಿ ಪಾಷಾಣ ಕೂಡ ಖರೀದಿಸಿ ಕೊಂಡು ಹೋಗಿದ್ದಳು.

ಬಳಿಕ, ಶಾಲೆಯಲ್ಲಿ ಬಿಸ್ಕೇಟ್​ಗೆ ಇಲಿ ಪಾಷಾಣ ಲೇಪಿಸಿ ಸೇವನೆ ಮಾಡಿದ್ದಾಳೆ. ಇದರಿಂದ ಆಕೆ ಅಸ್ವಸ್ಥಗೊಂಡಿದ್ದು, ಕೂಡಲೇ ಶಿಕ್ಷಕರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಕಿಡ್ನಿ, ಲಿವರ್ ನಿಷ್ಕ್ರಿಯಗೊಂಡ ಹಿನ್ನೆಲೆ ಇಂದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

ಪ್ರಕರಣ ಸಂಬಂಧ ಮೃತ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಅನ್ವಯ ಧರ್ಮಸ್ಥಳ ಠಾಣಾ ಪೊಲೀಸರು ಆರೋಪಿ ರೂಪೇಶ್ ಪೂಜಾರಿ ವಿರುದ್ಧ ಐಪಿಸಿ 354D, 509, POSO Act 12, 75JJ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Previous Post

ಉಡುಪಿ :ನೀರಿನ ಟ್ಯಾಂಕರ್ – ಸ್ಕೂಟರ್ ನಡುವೆ ಡಿಕ್ಕಿ – ಅಪಘಾತದ ತೀವ್ರತೆಗೆ ಖಾಸಗಿ ಬಸ್‌ ಚಾಲಕ ಸಾವು..!!

Next Post

ಮಂಗಳೂರು: ‘ಧರ್ಮ ನಿಂದನೆ’ ಆರೋಪ: ಶಿಕ್ಷಕಿ ವಜಾ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು: 'ಧರ್ಮ ನಿಂದನೆ' ಆರೋಪ: ಶಿಕ್ಷಕಿ ವಜಾ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved