Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಸರ್ಕಾರಿ ಶಾಲಾಮಕ್ಕಳಿಗೆ ‘ರಾಗಿ ಮಾಲ್ಟ್’ ವಿತರಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ!

Dhrishya News by Dhrishya News
22/02/2024
in ರಾಜ್ಯ/ ರಾಷ್ಟ್ರೀಯ
0
0
SHARES
6
VIEWS
Share on FacebookShare on Twitter

ಬೆಂಗಳೂರು ಫೆಬ್ರವರಿ 22: 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. KMF ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ KMF ಗೆ ನೀಡುತ್ತದೆ. ಆ ಮೂಲಕ KMF ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್ ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು ಎಂದು ವಿವರಿಸಿದರು.

ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಲೇಬಾರದು. ಪೌಷ್ಠಿಕಾಂಶ ಕೊರತೆ ಆಗಲೇ ಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಡವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎನ್ನುತ್ತಾ ಬುದ್ದ, ಬಸವ, ಅಂಬೇಡ್ಕರ್ ಮಾತುಗಳನ್ನು ಉಲ್ಲೇಖಿಸಿದರು.

ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಹೆಚ್ಚಾಗಲು ಸಾಧ್ಯ. ಜ್ಞಾನದ ಬೆಳವಣಿಗೆ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಅಂದರೆ ಕೇವಲ ಓದು, ಬರಹ ಕಲಿಸುವುದಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಅಗತ್ಯ. ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್ ಗಳೂ ಈಗ ಮೌಡ್ಯಕ್ಕೆ ಜೋತು ಬಿದ್ದಿದ್ದಾರೆ. ಬಸವಾದಿ ಶರಣರು ಮೌಡ್ಯಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವೈಚಾರಿಕ ಶಿಕ್ಷಣದಿಂದ ಮಾತ್ರ ಮೌಡ್ಯಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು.

2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮದಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಉಳ್ಳಾಲ: ಪಿಎಚ್‌ಡಿ ಸಂಶೋಧನ ಅಧ್ಯಯನ ನಡೆಸುತ್ತಿದ್ದ ಯುವತಿ ನಾಪತ್ತೆ..!!

Next Post

ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ʻಆಶಾಕಿರಣʼ ಯೋಜನೆ : 1 ಕೋಟಿಗೂ ಹೆಚ್ಚು ಜನರ ಕಣ್ಣಿನ ತಪಾಸಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ʻಆಶಾಕಿರಣʼ ಯೋಜನೆ : 1 ಕೋಟಿಗೂ ಹೆಚ್ಚು ಜನರ ಕಣ್ಣಿನ ತಪಾಸಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026

Recent News

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved