Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ರಾಜ್ಯಾದ್ಯಂತ ಮಾರ್ಚ್ 3 ರಿಂದ 6ರವರೆಗೆ “ಪಲ್ಸ್  ಪೋಲಿಯೊ” ಲಸಿಕಾ ಕಾರ್ಯಕ್ರಮ..!!

Dhrishya News by Dhrishya News
27/02/2024
in ಆರೋಗ್ಯ, ರಾಜ್ಯ/ ರಾಷ್ಟ್ರೀಯ
0
0
SHARES
23
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 27: ರಾಜ್ಯಾದ್ಯಂತ ಮಾರ್ಚ್ 3 ರಿಂದ 6ರವರೆಗೆ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಳೆದಬಾರಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಕಡಿಮೆ ಪ್ರಗತಿ ಹೊಂದಿರುವ ದುರ್ಬಲ ಪ್ರದೇಶಗಳ ಮೇಲೆ ಹೆಚ್ಚಿನ ನಿಗವಹಿಸುವ ಮೂಲಕ ಈ ಬಾರಿ ಯಾವುದೇ ಐದು ವರ್ಷದೊಳಗಿನ ಮಗು ಪಲ್ಸ್ ಪೋಲಿಯೊ ಲಸಿಕೆಯಿಂದ ವಂಚಿತವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ.ಶಾಲಿನಿ ರಜನೀಶ್ ತಿಳಿಸಿದರು.

ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಅನುಷ್ಠಾನ ಕುರಿತು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆದ ರಾಜ್ಯ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ಬಾರಿ ಯಾವ ಪ್ರದೇಶದಲ್ಲಿ ಯಾವ ಕಾರಣಕ್ಕೆ ಪಲ್ಸ್ ಪೋಲಿಯೊ ಲಸಿಕೆಯ ಅನುಷ್ಠಾನದಲ್ಲಿ ಕಡಿಮೆ ಪ್ರಗತಿ ಹೊಂದಲಾಗಿದೆಯೋ, ಅಂತಹ ಪ್ರದೇಶಗಳನ್ನು ಗುರುತಿಸಿ, ಕಾರಣ ಪತ್ತೆ ಹಚ್ಚಿ ಸೂಕ್ತ ಮೂಲಸೌಕರ್ಯ ಒದಗಿಸುವ ಜೊತೆಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.

ಆರೋಗ್ಯ ಇಲಾಖೆಯ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಬಂಧಿಸಿದ ಸರ್ಕಾರದ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಆರೋಗ್ಯ ಕ್ಷೇತ್ರ ಸೇರಿದಂತೆ ಇತರೆ ಪೂರಕ ಸಂಘಸಂಸ್ಥೆಗಳ ಸಹಕಾರ ಪಡೆದು, ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಸಮರ್ಪಕ ಮೂಲಭೂತ ಸೌಕರ್ಯಗಳ ಬಳಕೆಯಿಂದ ಸಿಬ್ಬಂದಿಗಳ ಕಾರ್ಯದೊತ್ತಡ ಕಡೆಮೆ ಮಾಡಿಮೆಯಾಗುತ್ತದೆ ಹಾಗೂ ಹೆಚ್ಚಿನ ಮಕ್ಕಳಿಗೆ ಲಸಿಕೆಯನ್ನು ನೀಡಬಹುದು ಎಂದು ತಿಳಿಸಿದರು.

ನಗರ ಅಥವಾ ಗ್ರಾಮೀಣ ಪ್ರದೇಶವಾಗಲಿ, ಪ್ರದೇಶಕ್ಕೆ ಅನುಕೂಲವಾಗುವ ಸೂಕ್ತ ಯೋಜನೆಯನ್ನು ರೂಪಿಸಿಕೊಂಡು, ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಅನುಷ್ಠಾನಗೊಂಡರೆ, ಎಲ್ಲಾ ಅರ್ಹ ಮಕ್ಕಳು ಲಸಿಕೆ ಪಡೆಯಬಹುದು. ಅಲ್ಲದೇ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮದ ಕುರಿತು ಮುಂಚಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಅಧಿಕಾರಿಗಳು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

ಪಲ್ಸ್ ಪೋಲಿಯೊ ಲಸಿಕೆಯ ಅನುಷ್ಠಾನ ಕಾರ್ಯದಲ್ಲಿ ಸೂಕ್ತ ಮೇಲುಸ್ತುವಾರಿ ಹಾಗೂ ನಿರ್ವಹಣೆಯಾಗಬೇಕು. ಇದರಿಂದ, ಲಸಿಕೆ ಪಡೆದ ಮಕ್ಕಳ ಮಾಹಿತಿ ಸಂಗ್ರಹಿಸಲು ಅನುಕೂಲವಾಗಲಿದೆ. ರಾಷ್ಟ್ರೀಯ ಹೆದ್ದಾರಿ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ಟೂಲ್‌ ಪ್ರದೇಶ ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಬೇಕು. ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಅಂಗವಾಗಿ ಮೊದಲ ದಿನ ಲಸಿಕಾ ಕೇಂದ್ರಗಳಲ್ಲಿ ಹಾಗೂ ಉಳಿದ ಮೂರು ದಿನ ಮನೆಗಳಿಗೆ ಭೇಟಿ ನೀಡಿ ಲಸಿಕೆಯನ್ನು ನೀಡಲಾಗುವುದು. ಲಸಿಕಾ ಕಾರ್ಯದಲ್ಲಿ ತೊಡಗುವ ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ಗೌರವ ಧನ ಸೂಕ್ತ ಸಮಯದಲ್ಲಿ ಸಿಗುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಯವರು ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. ಜಿಲ್ಲಾವಾರು ಲಸಿಕೆ ಪಡೆಯುವ ಮಕ್ಕಳ ಮಾಹಿತಿ ಸಂಗ್ರಹಣೆಗೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಲಸಿಕೆ ಕಾರ್ಯಕ್ರಮದ ಬಗ್ಗೆ ಎಲ್ಲಾ ಹಂತಗಳಲ್ಲಿ ಹೆಚ್ಚಿನ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

ಈ ಸಭೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮೊಹಸೀನ್, ರಾಷ್ಟ್ರೀಯ ಅರೋಗ್ಯ ಮಿಷನ್ ನ ಮಿಷನ್ ಡೈರೆಕ್ಟರ್ ಡಾ. ನವೀನ್ ಭಟ್ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಕರ್ನಾಟಕ ರಾಜ್ಯಸಭೆ ಚುನಾವಣೆ 2024 :ಇಂದು 4 ಸ್ಥಾನಗಳಿಗೆ ಮತದಾನ..!!

Next Post

ಕಾರ್ಕಳ :ಲಂಡನ್ ಫ್ಯಾಶನ್ ವೀಕ್ ನಲ್ಲಿ ಮಿಂಚಿದ ಮಂಗಳೂರಿನ ಬೆಡಗಿ ಶ್ರೀಮಾ ರೈ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಲಂಡನ್ ಫ್ಯಾಶನ್ ವೀಕ್ ನಲ್ಲಿ ಮಿಂಚಿದ ಮಂಗಳೂರಿನ ಬೆಡಗಿ ಶ್ರೀಮಾ ರೈ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved