Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ನಿವೃತ IAS ಅಧಿಕಾರಿ, ‘ನಟ ಕೆ.ಶಿವರಾಮ್’ ನಿಧನ…!!

Dhrishya News by Dhrishya News
29/02/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
72
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 29:ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಈ ಕುರಿತಂತೆ ಅವರ ಬಹುಕಾಲದ ಗೆಳೆಯ ನಾಗೇಶ್ ಕಾಳೇನಹಳ್ಳಿ ಅವರು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡು, ಮಾಹಿತಿ ಹಂಚಿಕೊಂಡಿದ್ದಾರೆ.

ನಿನ್ನೆ ಸಂಜೆ ನನ್ನ ಅನುಗಾಲದ ಗೆಳೆಯ ಅರದೇಶಹಳ್ಳಿ ವೆಂಕಟೇಶ್ ಕೆ. ಶಿವರಾಂ ಅವರು ಸೀರಿಯಸ್ಸಾಗಿದ್ದಾರೆ. ಹೆ಼ಚ್. ಸಿ. ಜಿ ಆಸ್ಪತ್ರೆಯಲ್ಲಿದ್ದಾರೆ ಎಂದರು. ಕೂಡಲೇ ನನ್ನ ಹಿರಿಯಣ್ಣ ಡಾ. ಸ್ವಾಮಿ ಅವರಿಗೆ ಫೋನ್ ಮಾಡಿದೆ. ಅವರ ವೈಧ್ಯಕೀಯ ಭಾಷೆ ನನಗೆ ಅರ್ಥವಾಯಿತು. ವೆಂಕಟೇಶ್ ಅವರಿಗೆ ಹೋಪ್ಸ್ ಇಲ್ಲವೆಂದು ಹೇಳಿದೆ. ಇಂದು ಬೆಳಿಗ್ಗೆ ಅವರು ಇನ್ನಿಲ್ಲವೆಂಬ ಸುದ್ಧಿ ಹೊರಬಿದ್ದಿದೆ. ಕೇವಲ ಹತ್ತನ್ನೆರಡು ಗಂಟೆಗಳ ಹಿಂದಿನ ಸೀರಿಯಸ್ ಎಂಬ ಸುದ್ದಿ ಮಲಗಿ ಏಳುವಷ್ಟರಲ್ಲಿ ‘ಇನ್ನಿಲ್ಲ’ ಎಂದಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.

ಅಂದಹಾಗೇ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 

ನಟ ಕೆ.ಶಿವರಾಮ್ ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯೊಂದರಲ್ಲಿ ಬಡ ಕುಟುಂಬದಲ್ಲಿ ಏಪ್ರಿಲ್ 6, 1953 ರಂದು ಜನಸಿದ ಕೆ. ಶಿವರಾಮು 1985 ರಲ್ಲಿ ಕೆಎಎಸ್‌ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದರು. ಆ ಬಳಿಕ ಕನ್ನಡ ಭಾಷೆಯಲ್ಲಿ ಐಎಎಸ್‌ ಪರೀಕ್ಷೆ ಬರೆದು, ತೇರ್ಗಡೆಯಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

1993 ರಲ್ಲಿ ತೆರೆಗೆ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕೆ.ಶಿವರಾಮ್ ಪ್ರವೇಶಿಸಿದ್ದರು. ‘ವಸಂತ ಕಾವ್ಯ’, ‘ಸಾಂಗ್ಲಿಯಾನಾ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಕೆ.ಶಿವರಾಮ್ ಅಭಿನಯಿಸಿದ್ದಾರೆ.

2013 ರಲ್ಲಿ ಐಎಎಸ್ ನಿಂದ ಸ್ವಯಂ ನಿವೃತ್ತಿ ಪಡೆದ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. ಕೆ.ಶಿವರಾಮ್, 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ಛಲವಾದಿ ಮಹಸಭಾ ಅಧ್ಯಕ್ಷರಾಗಿದ್ದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದರು.  

Previous Post

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ..!!

Next Post

ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ನಟ ಸಾಧು ಕೋಕಿಲ ಆಯ್ಕೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ನಟ ಸಾಧು ಕೋಕಿಲ ಆಯ್ಕೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026

Recent News

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved