Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಬಿಎಂಟಿಸಿ :2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಅಹ್ವಾನ..!!

Dhrishya News by Dhrishya News
01/03/2024
in ಉದ್ಯೋಗ/ಶಿಕ್ಷಣ, ರಾಜ್ಯ/ ರಾಷ್ಟ್ರೀಯ
0
0
SHARES
14
VIEWS
Share on FacebookShare on Twitter

ಬೆಂಗಳೂರು: ಮಾರ್ಚ್ 01: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯಲ್ಲಿ ಖಾಲಿ ಇರುವ  2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ

ದ್ವಿತೀಯ ಪಿಯುಸಿ ಪಾಸ್‌ ಆದರವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್‌ 10ರಿಂದ ಆನ್‌ಲೈನ್‌ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್‌ 10 ಆಗಿರುತ್ತದೆ 

ವಿದ್ಯಾರ್ಹತೆ ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್ ಆದರವರು ಅರ್ಜಿ ಸಲ್ಲಿಸಬಹುದು. ಜತೆಗೆ 3 ವರ್ಷಗಳ ಡಿಪ್ಲೊಮಾ ತೇರ್ಗಡೆಯಾದವರು ಕೂಡ ಅರ್ಹರು. ಜತೆಗೆ ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್‌ ಅನ್ನು ಹೊಂದಿರತಕ್ಕದ್ದು. ಪುರುಷರ ಎತ್ತರ 160 ಸೆಂಟಿ ಮೀಟರ್‌, ಮಹಿಳೆಯರ ಎತ್ತರ 150 ಸೆಂಟಿ ಮೀಟರ್‌ ಇರಬೇಕು. ಗಮನಿಸಿ: ಮುಕ್ತ ಶಾಲೆ ಅಥವಾ ಮುಕ್ತ ವಿವಿಯಿಂದ ಪಿಯುಸಿ/ 12ನೇ ತರಗತಿ ಪಾಸಾದವರು ಅಥವಾ ಜೆಒಸಿ / ಜೆಎಲ್‌ಸಿ ಕೋರ್ಸ್‌ಗಳನ್ನು ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಲ್ಲ.

  • ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

  • ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 750 ರೂ. ಮತ್ತುಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

  • ಆಯ್ಕೆ ವಿಧಾನ

ಸಾಮಾನ್ಯ ಸಾಮರ್ಥ್ಯ ಪರೀಕ್ಷೆ (Commong Aptitude Test), ದೇಹದಾರ್ಢ್ಯತೆ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಯಲಿದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪ್ರಶ್ನೆಗಳು ಇರಲಿದ್ದು, 200 ಅಂಕಗಳನ್ನು ಹೊಂದಿದೆ. ಗಮನಿಸಿ ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು, ಬರೆಯುವಾಗ ಎಚ್ಚರ ವಹಿಸಬೇಕು. ಈ ಪರೀಕ್ಷೆ ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೀದರ್‌, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಧಾಕಾರದ ವೆಬ್‌ಸೈಟ್‌ನಿಂದ ಡೌಲ್‌ಲೋಡ್‌ ಮಾಡಿಕೊಳ್ಳಬೇಕು. ಇದರ ದಿನಾಂಕವನ್ನು ಬಳಿಕ ತಿಳಿಸಲಾಗುವುದು. ಪರೀಕ್ಷೆ ಬರೆಯಲು ಪ್ರವೇಶ ಪತ್ರದೊಂದಿಗೆ ಪ್ಯಾನ್‌ ಕಾರ್ಡ್‌ / ಲೈಸನ್ಸ್‌ / ಆಧಾರ್‌ ಕಾರ್ಡ್‌ / ಪಾಸ್‌ಪೋರ್ಟ್‌ / ವೋಟರ್‌ ಐಡಿ / ಸರ್ಕಾರಿ ನೌಕರರ ಐಡಿ ಪೈಕಿ ಒಂದು ಮೂಲ ಗುರುತಿನ ಚೀಟಿ ಹಾಜರು ಪಡಿಸಬೇಕು.

ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ವೃತ್ತಿ ತರಬೇತಿ ನೀಡಲಾಗುವುದು. ಈ ತರಬೇತಿ ಅವಧಿಯಲ್ಲಿ ಮಾಸಿಕ ಸಮಗ್ರ ತರಬೇತಿ ಭತ್ಯೆಯಾಗಿ 9,100 ರೂ. ನೀಡಲಾಗುವುದು. ಈ ತರಬೇತಿಯನ್ನು ಸಮರ್ಪಕವಾಗಿ ಪೂರೈಸಿದವರುನ್ನು ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಗೆ ನೇಮಕಗೊಳಿಸಲಾಗುತ್ತದೆ. ಇದನ್ನು ತೃಪ್ತಿಕರವಾಗಿ ಪೂರೈಸಿದವರನ್ನು ನೇಮಕಾತಿ ಪ್ರಾಧಿಕಾರದಿಂದ ಖಾಯಂಗೊಳಿಸಲಾಗುವುದು.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಮೂಲಕ ಮಾರ್ಚ್‌ 10ರಿಂದ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Previous Post

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ..!!

Next Post

ಮಲ್ಪೆ ಮೀನುಗಾರರ ಅಪಹರಣ ಪ್ರಕರಣ: ಭಟ್ಕಳದ ಏಳು ಮಂದಿಯನ್ನು ಬಂಧಿಸಿದ ಪೊಲೀಸರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆ ಮೀನುಗಾರರ ಅಪಹರಣ ಪ್ರಕರಣ: ಭಟ್ಕಳದ ಏಳು ಮಂದಿಯನ್ನು ಬಂಧಿಸಿದ ಪೊಲೀಸರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved