Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

​ಮಹಾ ಶಿವರಾತ್ರಿ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಯಿಂದ 1500 ವಿಶೇಷ ಬಸ್‌ಗಳ ಸೌಲಭ್ಯ ..!!

Dhrishya News by Dhrishya News
05/03/2024
in ರಾಜ್ಯ/ ರಾಷ್ಟ್ರೀಯ
0
0
SHARES
8
VIEWS
Share on FacebookShare on Twitter

ಬೆಂಗಳೂರು, ಮಾರ್ಚ್​ 5: ಮಹಾ ಶಿವರಾತ್ರಿ ಮತ್ತು ವಾರಾಂತ್ಯದ  ಪ್ರಯಾಣಿಕರ ದಟ್ಟಣೆ ಹಾಗೂ ಬೇಡಿಕೆಯನ್ನು ಪೂರೈಸಲು ಮಾರ್ಚ್ 7 ಮತ್ತು 10 ರ ನಡುವೆ ಬೆಂಗಳೂರಿನಿಂದ ವಿವಿಧ ನಗರಗಳಿಗೆ 1,500 ಹೆಚ್ಚುವರಿ ಬಸ್ ಸೇವೆ ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  ಸೋಮವಾರ ತಿಳಿಸಿದೆ. ಅದೇ ರೀತಿ ಮಾರ್ಚ್​ 10 ಮತ್ತು 11ರಂದು ವಾಪಸ್ ಬರುವವರಿಗಾಗಿ ವಿವಿಧ ನಗರಗಳಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದಲೂ ವಿಶೇಷ ಬಸ್​​ಗಳು ಕಾರ್ಯಾಚರಿಸಲಿವೆ.

ಈ ಹೆಚ್ಚುವರಿ ವಿಶೇಷ ಬಸ್ಸುಗಳು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ (ಮೆಜೆಸ್ಟಿಕ್) ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮತ್ತಿತರ ಕಡೆಗಳಿಗೆ ಸಂಚರಿಸಲಿವೆ.

ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಕಡೆಗೆ ವಿಶೇಷ ಬಸ್‌ಗಳು ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಕಾರ್ಯನಿರ್ವಹಿಸಲಿವೆ.

ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿರಾಪಳ್ಳಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಝಿಕ್ಕೋಡ್, ತಮಿಳುನಾಡು ಮತ್ತು ಕೇರಳದ ಇತರ ಸ್ಥಳಗಳಿಗೆ ಎಲ್ಲಾ ಪ್ರೀಮಿಯಂ ವಿಶೇಷ ಬಸ್‌ಗಳು ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿವೆ ಎಂದು ಕೆಎಸ್​ಆರ್​​​ಟಿಸಿ ತಿಳಿಸಿದೆ.

ನಂತರ, ಮಾರ್ಚ್ 10 ಮತ್ತು 11 ರಂದು ಕರ್ನಾಟಕದ ವಿವಿಧ ನಗರಗಳಿಂದ ಬೆಂಗಳೂರಿಗೆ ಮತ್ತು ಬೆಂಗಳೂರಿನಿಂದ ವಿಶೇಷ ಬಸ್‌ಗಳ ಸೇವೆ ಒದಗಿಸಲಾಗುವುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ. ಇದರಿಂದ ಹಬ್ಬ ಮುಗಿಸಿ ಊರುಗಳಿಂದ ಬೆಂಗಳೂರಿಗೆ ವಾಪಸಾಗುವವರಿಗೆ ಮತ್ತು ರಜೆಗೆಂದು ಬೆಂಗಳೂರಿಗೆ ಬಂದವರಿಗೆ ಊರುಗಳಿಗೆ ತೆರಳಲು ಅನುಕೂಲವಾಗಲಿದೆ.

Previous Post

ಮಣಿಪಾಲ :ಆ್ಯಪ್ ಡೌನ್‌ಲೋಡ್‌ ಮಾಡುವಂತೆ ತಿಳಿಸಿ ಲಕ್ಷಾಂತರ ರೂ.ವಂಚನೆ..!!

Next Post

ಮಕ್ಕಳಲ್ಲಿ ಪರಿಸರ ಪ್ರಜ್ಞೆಯ ಜಾಗೃತಿಗಾಗಿ ಮಾಹೆಯಿಂದ ಕಿಡಾಥಾನ್‌ 2024..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಕ್ಕಳಲ್ಲಿ ಪರಿಸರ ಪ್ರಜ್ಞೆಯ ಜಾಗೃತಿಗಾಗಿ ಮಾಹೆಯಿಂದ ಕಿಡಾಥಾನ್‌ 2024..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved