Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು : ಲಂಚ ಸ್ವೀಕಾರ ಮಾಡುವಾಗ ಸರ್ವೆಯರ್ ಲೋಕಾಯುಕ್ತ ಬಲೆಗೆ..!!

Dhrishya News by Dhrishya News
08/03/2024
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಮಂಗಳೂರು : ಲಂಚ ಸ್ವೀಕಾರ ಮಾಡುವಾಗ ಸರ್ವೆಯರ್ ಲೋಕಾಯುಕ್ತ ಬಲೆಗೆ

ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ಒಬ್ಬರು ಲೋಕಾಯುಕ್ತದ ಬಲೆಗೆ ಬಿದ್ದಿದ್ದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಶೀತಲ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ

ಜಮೀನಿನ ಪಹಣಿಯಲ್ಲಿನ ಹೆಸರನ್ನು ತೆಗೆಯಲು ನಿಯಮದಂತೆ ಜಮೀನನ್ನು ಸರ್ವೆ ಮಾಡಿ ನಕ್ಷೆ ತಯಾರಿಸಿ ತತ್ಕಾಲ್ ಪೋಡಿ ಮುಖಾಂತರ ತೆಗೆಯುವ ಪ್ರಕ್ರೀಯೆ ಇರುತ್ತದೆ.ಗುರುಪುರ ಹೋಬಳಿಯಲ್ಲಿರುವ ನೀರುಮಾರ್ಗ ಗ್ರಾಮದ ಶ್ರೀಮತಿ ಲಿಲ್ಲಿ ಪೀಟರ್ ವಾಸ್ ಅವರಿಗೆ 72 ವರ್ಷ ವಾಗಿದ್ದು ಆರೋಗ್ಯ ಸರಿ ಇಲ್ಲದ ಕಾರಣ ಅವರ ಪರವಾಗಿ ದೂರುದಾರರು ಸ್ಟೆಲ್ಲಾ ಜನೆಟ್ ವಾಸ್ ಇವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್ ಲೈನ್ ಮುಖಾಂತರ ಜಮೀನಿನ ತಾತ್ಕಾಲ್ ಪೋಡಿಗಾಗಿ ಅರ್ಜಿ ಸಲ್ಲಿಸಿ ಇದಕ್ಕಾಗಿ 1500 ರೂ ಯನ್ನು ಪವಾತಿ ಮಾಡಿ ರಶೀದಿ ಪಡೆದಿದ್ದರು. ಅದರಂತೆ ಫೆಬ್ರವರಿ 29 ರಂದು ಮಂಗಳೂರಿನ ಸರ್ವೇ ಇಲಾಖೆಯಲ್ಲಿ ಕೆಲಸ ಮಾಡುವ ಶೀತಲ್ ರಾಜ್ ಎಂಬ ಸರ್ವೆಯರ್ ಜಮೀನಿನ ಸರ್ವೆ ನಡೆಸಿ ಸ್ಥಳ ಮಹಜರು ಮಾಡಿಕೊಂಡಿದ್ದರು. ಬಳಿಕ ಜಮೀನಿನ ನಕ್ಷೆ ನೀಡಲು ಸ್ವಲ್ಲ ಖರ್ಚಿದೆ ಎಂದು ಆರಂಭದಲ್ಲಿ 5 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಬಳಿಕ ಅದನ್ನು ನಾಲ್ಕು ಸಾವಿರ ರೂಪಾಯಿಗೆ ಇಳಿಸಿದ್ದ. ಈ ಬಗ್ಗೆ ದೂರು ದಾರರುಮಮಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಗುರುವಾರ ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿ ನಾಲ್ಕು ಸಾವಿರ ಲಂಚದ ಹಣ ಸ್ವೀಕಾರ ಮಾಡುವಾಗ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರು ಆರೋಪಿ ಶೀತಲ್ ರಾಜ್ ನನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿಎ ಸೈಮನ್ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಚೆಲುವರಾಜು, ಡಾ. ಗಾನ ಪಿ. ಕುಮಾರ್, ಪೊಲೀಸ್ ಇನ್ಸ್‌ಪೆಕ್ಟರ್ ಅಮಾನುಲ್ಲಾ ಎ, ಸುರೇಶ್ ಕುಮಾರ್ ಪಿ ಅವರು ಸಿಬಂದಿಗಳ ಜೊತೆ ಕಾರ್ಯಾಚರಣೆ ನಡೆಸಿದ್ದರು.

Previous Post

ಚಾರ್ಮಾಡಿ ಘಾಟ್ ನಲ್ಲಿ ಬಸ್ ‘ಬ್ರೇಕ್ ಫೇಲ್’ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!!

Next Post

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

17/08/2026
ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

17/08/2026
ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

17/08/2026
ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

17/08/2026

Recent News