Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಲೋಕಸಭೆ ಚುನಾವಣೆ 2024 ʻವೇಳಾಪಟ್ಟಿ ಪ್ರಕಟʼ : ಕರ್ನಾಟಕದಲ್ಲಿ 2 ಹಂತದ ಮತದಾನ.ಎಲ್ಲಿ ಯಾವಾಗ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ .!!

Dhrishya News by Dhrishya News
17/03/2024
in ರಾಜ್ಯ/ ರಾಷ್ಟ್ರೀಯ
0
0
SHARES
8
VIEWS
Share on FacebookShare on Twitter

ಉಡುಪಿ :ಮಾರ್ಚ್ 17: ಮುಖ್ಯ ಚುನಾವಣಾ ಆಯೋಗ 18ನೇ ಲೋಕಸಭಾ ಚುನಾವಣೆಗೆ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಅದೇ ರೀತಿಯಾಗಿ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲನೇ ಹಂತದ ಮತದಾನ ನಡೆಯಲಿದ್ದು ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ ಎಂದು ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನ ಪ್ರಕಟಿಸಿದ್ದಾರೆ.

ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹಾಗಾದರೆ ಮೊದಲ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಏಪ್ರಿಲ್ 26, ಮೇ 7ರಂದು ಮತದಾನ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 26ಕ್ಕೆ ಎಲ್ಲೆಲ್ಲಿ ಮತದಾನ?

1) ಚಿತ್ರದುರ್ಗ

2) ಉಡುಪಿ-ಚಿಕ್ಕಮಗಳೂರು

3) ದಕ್ಷಿಣ ಕನ್ನಡ

4) ಹಾಸನ

5) ತುಮಕೂರು

6) ಚಿಕ್ಕಬಳ್ಳಾಪುರ

7) ಕೋಲಾರ

8) ಮಂಡ್ಯ

9) ಮೈಸೂರು-ಕೊಡಗು

10) ಚಾಮರಾಜನಗರ

11) ಬೆಂಗಳೂರು ಗ್ರಾಮಾಂತರ

12) ಬೆಂಗಳೂರು ದಕ್ಷಿಣ

13) ಬೆಂಗಳೂರು ಉತ್ತರ

14) ಬೆಂಗಳೂರು ಕೇಂದ್ರ

ಮೇ 7ರಂದು ಎಲ್ಲೆಲ್ಲಿ ಮತದಾನ?

1) ಬೆಳಗಾವಿ

2) ಬಳ್ಳಾರಿ

3) ಚಿಕ್ಕೋಡಿ

4) ಹಾವೇರಿ-ಗದಗ

5) ಕಲಬುರಗಿ

6) ಬೀದರ್​

7) ಹುಬ್ಬಳಿ – ಧಾರವಾಡ

8) ಕೊಪ್ಪಳ

9) ರಾಯಚೂರು

10) ಉತ್ತರ ಕನ್ನಡ

11) ದಾವಣಗೆರೆ

12) ಶಿವಮೊಗ್ಗ

13) ಬಾಗಲಕೋಟೆ

14) ವಿಜಯಪುರ

ಕಾಸಿಗಾಗಿ ಸುದ್ದಿ ಮೇಲೆ ನಿಗಾ:

ಚುನಾವಣೆ ಸಂದರ್ಭದಲ್ಲಿ ಯಾವುದೇ ಅಭ್ಯರ್ಥಿ, ಪಕ್ಷದ ಪರವಾಗಿ ಮತದಾರರ ಮೇಲೆ ಪ್ರವ ಬೀರುವ ಸುದ್ದಿ ಪ್ರಕಟಣೆ, ಬಿತ್ತರಣೆ ಮಾಡುವ ಮಾಧ್ಯಮ ಸಂಸ್ಥೆಗಳ ಮೇಲೆ ನಿಗಾ ವಹಿಸಲು ಎಂ.ಸಿ.ಎಂ.ಸಿ. ಸಮಿತಿ ರಚಿಸಿಲಾಗಿದೆ. ವಿಶೇಷವಾಗಿ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಸೆಲ್ ಸಹ ರಚಿಸಲಾಗಿದೆ.

  • ಹೋರ್ಡಿಂಗ್ಸ್,ಬಂಟಿಂಗ್ಸ್ ತೆರವಿಗೆ ಸೂಚನೆ:

ಚುನಾವಣೆ ಘೋಷಣೆಯಾಗಿರುವುದರಿಂದ ಸರ್ಕಾರಿ ಮತ್ತು ಖಾಸಗಿ ಹೆದ್ದಾರಿ ಫಲಕಗಳು ಮೇಲಿನ ಸರ್ಕಾರಿ ಯೋಜನೆಗಳ ಪ್ರಚಾರದ ಬಂಟಿಂಗ್ಸ್, ಬ್ಯಾನರ್ಸ್, ಭಿತ್ತಿಪತ್ರ, ಕಟೌಟ್ಸ್‍ಗಳನ್ನು ಕೂಡಲೆ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದೆ.

  • 85+ ಮತ್ತು ವಿಶೇಷಚೇತನರಿಗೆ ಮನೆಯಿಂದಲೆ ಮತದಾನಕ್ಕೆ ಅವಕಾಶ:

85 ವರ್ಷ ಮೇಲ್ಪಟ್ಟ ವಯೋವೃದ್ಧರು, ವಿಶೇಷ ಚೇತನರಿಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗದಿದ್ದಲ್ಲಿ ಅಂತಹ ಮತದಾರರ ಮನೆಗೆ 12ಡಿ ನಮೂನೆ ನೀಡಿ ಮನೆಯಿಂದಲೆ ಮತದಾನಕ್ಕೆ ಅವಕಾಶ ನೀಡಲಾಗಿದೆ.

  • ಹೆಸರು ನೋಂದಣಿಗೆ ಇನ್ನು ಅವಕಾಶ:

ಇದೂವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿದವರು ನಾಮ ಪತ್ರ ಸಲ್ಲಿಕೆ ಕೊನೆ ದಿನಾಂಕದ 10 ದಿನಗಳ ಮುಂಚೆ ವರೆಗೂ ಆನ್‍ಲೈನ್ ಮೂಲಕ ಹೆಸರು ನೋಂದಾಯಿಸಬಹುದಾಗಿದೆ.

  • ಸಿ-ವಿಜಿಲ್‍ನಲ್ಲಿ ದೂರು ಕೊಡಿ:

ಚುನಾವಣಾ ಅಕ್ರಮ, ಎಂ.ಸಿ.ಸಿ. ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಏನೇ ದೂರುಗಳಿದಲ್ಲಿ ಸಿ-ವಿಜಿಲ್ ತಂತ್ರಾಂಶ ಮತ್ತು 1950 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ. ವಿವಿಧ ತಂಡಗಳು ತಪಾಸಣೆ ಸಂದರ್ಭದಲ್ಲಿ ವಶಕ್ಕೆ ಪಡೆಯಲಾದ ಹಣ, ಇತರೆ ಬೆಲೆ ಬಾಳುವ ವಸ್ತುಗಳ ಪರಿಶೀಲನೆಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ನೇತೃತ್ವದಲ್ಲಿ ಕ್ಯಾಶ್ ರಿಡ್ರೆಸಲ್ ಸಮಿತಿ ರಚಿಸಲಾಗಿದೆ.

Previous Post

ಒಳ ಪಂಗಡಗಳ ಅಂತರ್ಜಾತಿ ವಿವಾಹಕ್ಕೆ ಸಿಗಲಿದೆ 2 ಲಕ್ಷ ರೂ. ಪ್ರೋತ್ಸಾಹಧನ ..!!

Next Post

ಮಾರ್ಚ್ 22ರಿಂದ 3 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾರ್ಚ್ 22ರಿಂದ 3 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved