Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿ’ಗಳಿಗೆ  ವಾರ್ಷಿಕ ಪರೀಕ್ಷೆಯಂದು KSRTC ಬಸ್ಸಿನಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ…!!

Dhrishya News by Dhrishya News
18/03/2024
in ರಾಜ್ಯ/ ರಾಷ್ಟ್ರೀಯ
0
0
SHARES
4
VIEWS
Share on FacebookShare on Twitter

ಬೆಂಗಳೂರು :ಮಾರ್ಚ್ 19: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಂದು ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಮೂಲಕ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಕೆಎಸ್‌ಆರ್ ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕು ದಿನಾಂಕ 14-03-2024ರಂದು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 25.03.2024 ರಿಂದ ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ.

ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Previous Post

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ : ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್..!!

Next Post

ಕೊಯಮತ್ತೂರಿನಲ್ಲಿ ಭಾರೀ ಭದ್ರತೆ ನಡುವೆ ಪ್ರಧಾನಿ ಮೋದಿ ರೋಡ್ ಶೋ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೊಯಮತ್ತೂರಿನಲ್ಲಿ ಭಾರೀ ಭದ್ರತೆ ನಡುವೆ ಪ್ರಧಾನಿ ಮೋದಿ ರೋಡ್ ಶೋ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved