Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಲೋಕಸಭಾ ಚುನಾವಣೆ : ರಾಜ್ಯದ ಮೊದಲ ಹಂತದ 14 ಕ್ಷೇತ್ರಕ್ಕೆ 358 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯ..!!

Dhrishya News by Dhrishya News
05/04/2024
in ರಾಜ್ಯ/ ರಾಷ್ಟ್ರೀಯ
0
0
SHARES
10
VIEWS
Share on FacebookShare on Twitter

ಬೆಂಗಳೂರು:ಏಪ್ರಿಲ್ 05: ಲೋಕಸಭಾ ಸಾರ್ವತ್ರಿಕ ಚುನಾವಣೆ ಯಡಿ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಇನ್ನೇನಿದ್ದರೂ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಶುರುವಾಗಲಿದೆ.

ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಗುರುವಾರ ಘಟಾನುಘಟಿಗಳು ಸೇರಿದಂತೆ 183 ಅಭ್ಯರ್ಥಿಗಳಿಂದ 224 ನಾಮ ಪತ್ರಗಳು ಸಲ್ಲಿಕೆಯಾಗಿವೆ. ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಸಂಜೆ ಬಳಿಕ ಕ್ರಮಬದ್ಧವಾದ ಹಾಗೂ ತಿರಸ್ಕೃತಗೊಂಡ ನಾಮಪತ್ರಗಳ ಮಾಹಿತಿಯನ್ನು ಪ್ರಕಟಿಸಲಾಗುತ್ತದೆ.

ಅಧಿಸೂಚನೆ ಪ್ರಕಟಗೊಂಡ ಬಳಿಕ ಈವರೆಗೆ ಒಟ್ಟು 358 ಅಭ್ಯರ್ಥಿಗಳಿಂದ 492 ಉಮೇದುವಾರಿಕೆ ಸಲ್ಲಿಕೆಯಾಗಿವೆ. ರೋಡ್ ಶೋ, ಬಹಿರಂಗ ಸಮಾವೇಶಗಳ ಮೂಲಕ ಚುನಾವಣೆಯ ಕಣ ರಂಗೇರಿದೆ. ಗುರುವಾರ ಕೊನೆ ದಿನವಾದ್ದರಿಂದ ನಾಮಪತ್ರಗಳ ಸಲ್ಲಿಕೆಗಳ ಭರಾಟೆಯೂ ಜೋರಾಗಿತ್ತು.

ಮಂಡ್ಯ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಡಾ.ಸಿ.ಎನ್.ಮಂಜುನಾಥ್, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕ ಚಳವಳಿ ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್, ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್.ಪಿ.ಮುದ್ದಹನುಮೇಗೌಡ, ಹಾಸನ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ, ಚಿತ್ರದುರ್ಗದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಮಾಜಿ ಸಚಿವ ಗೋವಿಂದ ಕಾರಜೋಳ, ಕೋಲಾರದಲ್ಲಿ ಎನ್‌ಡಿಎ ಅಭ್ಯರ್ಥಿ ಮಲ್ಲೇಶ್ ಬಾಬು ಸೇರಿ ಹಲವು ಅಭ್ಯರ್ಥಿ ಗಳು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಕೆಲವು ಅಭ್ಯರ್ಥಿಗಳು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮತ್ತೆ ಕೆಲವರು ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನಮಾಡಿದರು.ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಸೇರಿದಂತೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಆಯಾ ಪಕ್ಷಗಳ ಪ್ರಮುಖ ಉಪಸ್ಥಿತರಿದ್ದರು. 

171 ಪುರುಷರು, 12 ಮಹಿಳೆಯರು ಸೇರಿ 183 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.ಸಲ್ಲಿಕೆಯಾದ224 ನಾಮಪತ್ರಗಳ ಪೈಕಿ 210 ಪುರುಷರ ಮತ್ತು 14 ಮಹಿಳೆಯರ ನಾಮಪತ್ರಗಳಾಗಿವೆ. ಕಾಂಗ್ರೆಸ್ 21, ಬಿಜೆಪಿ 17, ಬಿಎಸ್‌ಪಿ 5, ಜೆಡಿಎಸ್ 8, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷಗಳು 71, ಪಕ್ಷೇತರು 102 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಈವರೆಗೆ 358 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಪೈಕಿ 333 ಪುರುಷರು, 25 ಮಹಿಳೆಯರಾಗಿದ್ದಾರೆ. ಸಲ್ಲಿಕೆ ಯಾಗಿರುವ 492 ಉಮೇದು ವಾರಿಕೆಯಲ್ಲಿ 453 ಪುರುಷರು, 39 ಮಹಿಳೆಯರ ನಾಮಪತ್ರ ಗಳಾಗಿವೆ. ಒಟ್ಟು ಕಾಂಗ್ರೆಸ್ 50, ಬಿಜೆಪಿ 41, ಜೆಡಿಎಸ್ 10, ಬಿಎಸ್‌ಪಿ 18, ಸಿಪಿಐಎಂ 1, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷಗಳಿಂದ 161 ಮತ್ತು ಪಕ್ಷೇತರರಿಂದ 211 ನಾಮಪತ್ರಗಳು ಸಲ್ಲಿಕೆಯಾಗಿವೆ.

Previous Post

ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್​​ಆರ್​ಟಿಸಿ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ..!!

Next Post

ಲೋಕಸಭೆ ಚುನಾವಣೆ 2024: ಇಂದು ಸುಮಲತಾ ಅಂಬರೀಶ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲೋಕಸಭೆ ಚುನಾವಣೆ 2024: ಇಂದು ಸುಮಲತಾ ಅಂಬರೀಶ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved