Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಪಾಯಕಾರಿ ಮತ್ತು ಕ್ರೂರ ಶ್ವಾನಗಳ ಸಾಕಾಣಿಕೆ ನಿಷೇಧ ಹೇರಿದ್ದ ಕೇಂದ್ರದ ಆದೇಶಕ್ಕೆ  ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ..!

Dhrishya News by Dhrishya News
10/04/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಬೆಂಗಳೂರು:ಏಪ್ರಿಲ್ 10:ಮನುಷ್ಯರ ಮೇಲೆ ದಾಳಿ ಮಾಡುವಷ್ಟು ಅಪಾಯಕಾರಿಯಾಗಿರುವ 23 ತಳಿಗಳ ನಾಯಿಗಳ (Dog Breeds) ಸಾಕಣೆ, ಮಾರಾಟಕ್ಕೆ ನಿಷೇಧ ಹೇರಿದ್ದ ಕೇಂದ್ರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. 23 ಅಪಾಯಕಾರಿ ಶ್ವಾನ ತಳಿಗಳ ನಿಷೇಧ ಹೇರಿದ್ದ ಕೇಂದ್ರ ಸರ್ಕಾರದ ಆದೇಶಕ್ಕೆ ಈಗ ಕರ್ನಾಟಕ ಹೈಕೋರ್ಟ್‌  ತಡೆಯಾಜ್ಞೆ ನೀಡಿದೆ. ಕೇಂದ್ರದ ಆದೇಶವನ್ನು ರದ್ದುಗೊಳಿಸಿ ರಾಜ್ಯ ಹೈಕೋರ್ಟ್‌ ಆದೇಶ ಹೊರಡಿಸಿದೆ

ಕೇಂದ್ರ ಸರ್ಕಾರದ ಆದೇಶ ಪ್ರಶ್ನಿಸಿ ಶ್ವಾನಗಳ ಟ್ರೇನರ್‌ ಆಗಿರುವ ಕಿಂಗ್‌ ಸೋಲೊಮೊನ್‌ ಡೇವಿಡ್‌ ಹಾಗೂ ಇನ್ನೊಬ್ಬರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಕೇಂದ್ರ ಸರ್ಕಾರದ ಆದೇಶವನ್ನು ರದ್ದುಗೊಳಿಸಿತ್ತು. ಅದರಲ್ಲೂ ವಿಶೇಷವಾಗಿ, ಕೇಂದ್ರ ಸರ್ಕಾರದ ಆದೇಶವು ಕರ್ನಾಟಕದಲ್ಲಿ ಜಾರಿಯಾಗುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿತು. “ಈ ತಳಿಯ ಶ್ವಾನಗಳ ಸಾಕಣೆ ಮಾಡುವವರು, ತಜ್ಞರ ಜತೆ ಸಮಾಲೋಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಬೇಕಿತ್ತು” ಎಂದು ಕೂಡ ತಿಳಿಸಿತು.

ಕೇಂದ್ರದ ಆದೇಶ ಏನಾಗಿತ್ತು?

ಕೇಂದ್ರ ಸರ್ಕಾರವು 23 ತಳಿಗಳ ಶ್ವಾನಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳುವುದು, ಅವುಗಳನ್ನು ಸಾಕುವುದು, ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಪಶು ಸಂಗೋಪನೆ ಇಲಾಖೆಯ ತಜ್ಞರ ಸಮಿತಿಯ ವರದಿ ಮತ್ತು ಪ್ರಾಣಿ ದಯಾ ಸಂಘ ‘ಪೆಟಾ’ದ ಮನವಿ ಮೇರೆಗೆ ಕೇಂದ್ರ ಸರ್ಕಾರವು ಮಾರ್ಚ್‌ 13ರಂದು ಆದೇಶ ಹೊರಡಿಸಿತ್ತು. ಮನುಷ್ಯರ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡುವ, ಮನುಷ್ಯರಿಗೆ ತುಂಬ ಅಪಾಯಕಾರಿಯಾಗಿರುವ ಕಾರಣದಿಂದಾಗಿ ಈ ತಳಿಗಳ ಶ್ವಾನಗಳನ್ನು ನಿಷೇಧಿಸಿತ್ತು.

ಯಾವ ತಳಿಗಳಿಗೆ ನಿರ್ಬಂಧ ವಿಧಿಸಿತ್ತು?

ಪಿಟ್‌ಬುಲ್‌ ಟೆರಿಯರ್‌, ಟೋಸಾ ಇನು, ಅಮೆರಿಕನ್‌ ಸ್ಟೆಫರ್ಡ್‌ಶೈರ್‌ ಟೆರಿಯರ್‌, ಫಿಲಾ ಬ್ರೇಸಿಲೈರೋ, ಡೋಗೊ ಅರ್ಜೆಂಟಿನೋ, ಅಮೆರಿಕನ್‌ ಬುಲ್‌ಡಾಗ್‌, ಬೋರ್ಬೊಯೆಲ್‌, ಕಂಗಲ್‌, ಸೆಂಟ್ರಲ್‌ ಏಷ್ಯನ್‌ ಶೀಪ್‌ಡಾಗ್‌, ಕೌಕಾಸಿಯನ್‌ ಶೆಫರ್ಡ್‌ ಡಾಗ್‌, ಸೌತ್‌ ರಷ್ಯನ್‌ ಶೆಫರ್ಡ್‌ ಡಾಗ್‌, ಟಾರ್ನ್‌ಜಾಕ್‌, ಜಪಾನೀಸ್‌ ಟೋಸಾ, ಮಾಸ್ಟಿಫ್‌, ವೂಲ್ಫ್‌ ಡಾಗ್ಸ್‌, ಬ್ಯಾನ್‌ಡಾಗ್‌ ಸೇರಿ 23 ತಳಿಗಳ ಶ್ವಾನಗಳ ಸಾಕಣೆ, ಮಾರಾಟವನ್ನು ಕೇಂದ್ರ ಸರ್ಕಾರ ನಿಷೇಧಿಸಿತ್ತು. ಈ ಕುರಿತು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ಹೊರಡಿಸಿತ್ತು.

Previous Post

ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ವಜ್ರದೇಹಿ ಶ್ರೀಗಳಿಂದ ಉದ್ಘಾಟನೆ :ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸಂಸ್ಥೆಯ ವತಿಯಿಂದ ಸನ್ಮಾನ ..!!

Next Post

ದ್ವಿತೀಯ PUC ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸೋದು ಹೇಗೆ.? ಕೊನೆ ದಿನ ಯಾವಾಗ? ಇಲ್ಲಿದೆ ಡೀಟೇಲ್ಸ್…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದ್ವಿತೀಯ PUC ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸೋದು ಹೇಗೆ.? ಕೊನೆ ದಿನ ಯಾವಾಗ? ಇಲ್ಲಿದೆ ಡೀಟೇಲ್ಸ್...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News