Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಒಂದು ವಾರದೊಳಗೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ :ಸುಪ್ರೀಂಕೋರ್ಟ್​ಗೆ ಕೇಂದ್ರ ಸರ್ಕಾರ ಭರವಸೆ..!!

Dhrishya News by Dhrishya News
22/04/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಬೆಂಗಳೂರು : ಏಪ್ರಿಲ್ 22 : ಸೋಮವಾರ (ಏ.29)ರ ಒಳಗೆ ಬರ ಪರಿಹಾರ  ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ  ಹೇಳಿದೆ.

ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್​ ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್​ನ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು (ಏ.22) ಅರ್ಜಿ ವಿಚಾರಣೆ ನಡೆಸಿತು. ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್​​​​ ವೆಂಕಟರಮಣಿ ವಾದ ಮಂಡಿಸಿದರು

ಬರ ಪರಿಹಾರ ಸಂಬಂಧ ಚುನಾವಣಾ ಆಯೋಗದ ಅನುಮತಿ ಕೇಳಿದ್ದೇವೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಬಹುದು. ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್​​​​ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು. ಇನ್ನು ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಸರಕಾರದ ಪರ ವಕೀಲರು ಕೇಳಿಕೊಂಡ‌ರು. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್​ 29ಕ್ಕೆ ಮುಂದೂಡಿತು.

ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿ ಏನಿತ್ತು?

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡ 2023ರ ಡಿಸೆಂಬರ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದ್ದರು.

ಹೀಗಾಗಿ ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಇದರಲ್ಲಿ 4663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ ನೀಡುವಂತೆ ಕೋರಿದ್ದರು. 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದರು.

ಜೊತೆಗೆ ಎನ್‌.ಡಿ.ಆರ್‌.ಎಫ್. ನಿಂದ 4663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಿದ್ದರು. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದರು.

Previous Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪ್ರಯೋಗಾಲಯ ವೃತ್ತಿಪರರ ಸಪ್ತಾಹ ಆಚರಣೆ..!!

Next Post

ಉಡುಪಿ : ಏಪ್ರಿಲ್ 24ರ ನಂತರ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಏಪ್ರಿಲ್ 24ರ ನಂತರ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved