Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತೆಕ್ಕಟ್ಟೆ : ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ..!!

Dhrishya News by Dhrishya News
28/04/2024
in ಸುದ್ದಿಗಳು
0
0
SHARES
106
VIEWS
Share on FacebookShare on Twitter

ತೆಕ್ಕಟ್ಟೆ:ಏಪ್ರಿಲ್ 28: ತೆಕ್ಕಟ್ಟೆ ಸಮೀಪ ಗುಡ್ಡೆಅಂಗಡಿ ರಾ.ಹೆ. ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಎ. 27ರಂದು ಮಧ್ಯಾಹ್ನ 2.30ರ ಸುಮಾರಿಗೆ ಸಂಭವಿಸಿದೆ.

ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾದ ಪರಿಣಾಮ ಬೆಂಗಳೂರಿನ ಫೋನ್‌ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಇನ್ನೋವಾ ಕಾರಿನಲ್ಲಿ ಬೆಂಗಳೂರು ಮೂಲದ ಸ್ನೇಹಿತರಾದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ತೀವ್ರತೆಗೆ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಜಖಂಗೊಂಡಿತ್ತು. ಕಾರಿನ ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು

ಗಾಯಾಳುಗಳು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯತ್ತಿದ್ದಂತೆ ಕುಂದಾಪುರ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಅವರು ಆಸ್ಪತ್ರೆಗೆ ಧಾವಿಸಿ ಬಂದು ಗಾಯಾಳುಗಳ ಬಗ್ಗೆ ಮಾಹಿತಿ ಪಡೆದು ಸಮರ್ಪಕ ಚಿಕಿತ್ಸೆಯನ್ನು ಕೊಡುವಂತೆ ಆಸ್ಪತ್ರೆಯವರಿಗೆ ಸೂಚಿಸಿದ್ದಾರೆ.

ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್‌ ಹಾಗೂ ಕೋಟ ಪೊಲೀಸ್‌ ಠಾಣಾಧಿಕಾರಿ ತೇಜಸ್ವಿ, ಸಿಬಂದಿ ಪ್ರಸನ್ನ, ಕೃಷ್ಣ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತವಾದ ಸಂದರ್ಭ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್‌ ಸದಸ್ಯ ಜಯಪ್ರಕಾಶ್‌ ಶೆಟ್ಟಿ ಚಿಟ್ಟೆಬೈಲು, ಮೊಳಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಉದಯ ಕುಲಾಲ್‌, ಚಂದ್ರ, ಸುರೇಶ್‌ ಅವರು 5 ಮಂದಿಯನ್ನು ಆ್ಯಂಬುಲೆನ್ಸ್‌ ಹಾಗೂ ಎರಡು ಕಾರುಗಳ ಮೂಲಕ ತತ್‌ಕ್ಷಣವೇ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇನ್ನೋವಾ ಕಾರು ಚಾಲಕ ಮಿಥುನ್‌ (28) ಅವರ ಅತೀ ವೇಗ ಹಾಗೂ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಂದಾಗಿ ಮುಡೇìಶ್ವರ, ಗೋಕರ್ಣದ ಕಡೆಗೆ ವೀಕೆಂಡ್‌ ರಜೆಯಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದವರಾಗಿದ್ದಾರೆ

Previous Post

ಬೆಂಗಳೂರಲ್ಲಿ ಸರಣಿ ಅಪಘಾತ : ಬ್ರೇಕ್ ಬದಲು ಎಕ್ಸಿಲೇಟರ್ ತುಳಿದ ಆಂಬುಲೆನ್ಸ್ ಚಾಲಕ : ಕಾರುಗಳು ಜಖಂ..!!

Next Post

ಬೈಕಂಪಾಡಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತ : ಚಾಲಕನ ಸ್ಥಿತಿ ಗಂಭೀರ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಕಂಪಾಡಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತ : ಚಾಲಕನ ಸ್ಥಿತಿ ಗಂಭೀರ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News