Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಪ್ಪಿನಂಗಡಿ : ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಮೋದಿ ಯವರನ್ನು ಪ್ರಧಾನಿ ಮಾಡುವುದೇ ನೀಡುವ ಉಡುಗೊರೆ”ಉಲ್ಲೇಖ:ಪ್ರಕರಣ ದಾಖಲು..!!

Dhrishya News by Dhrishya News
28/04/2024
in ಸುದ್ದಿಗಳು
0
0
SHARES
202
VIEWS
Share on FacebookShare on Twitter

ಉಪ್ಪಿನಂಗಡಿ:ಏಪ್ರಿಲ್ 28:ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧೂವರರಿಗೆ ನೀಡುವ ಉಡುಗೊರೆ’ ಎಂದು ದಾಖಲಿಸಿರುವುದಕ್ಕೆ ವರನ ವಿರುದ್ದ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ

ಕಡಬ ತಾಲೂಕು ಆಲಂತಾಯ ಗ್ರಾಮದ ಶಿವಾರು ಶಿವಪ್ಪ ಗೌಡ ಅವರ ಮಗ ಶಿವಪ್ರಸಾದ್‌ ಯಾನೆ ರವಿ ಅವರ ವಿವಾಹವು ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಕೊಳಂಬೆ ಬಾಬು ಗೌಡರ ಮಗಳು ಪ್ರಮೀಳಾ ಕೆ ಅವರೊಂದಿಗೆ ಎ. 18ರಂದು ಗೋಳಿತೊಟ್ಟು ಸಿದ್ದಿವಿನಾಯಕ ಕಲಾ ಮಂದಿರದಲ್ಲಿ ಜರಗಿತ್ತು. ವಿವಾಹದ ಅಂಗವಾಗಿ ಸಿದ್ದಪಡಿಸಲಾದ ಆಮಂತ್ರಣ ಪತ್ರವನ್ನು ಮಾರ್ಚ್‌ 1ರಂದು ಮುದ್ರಿಸಲಾಗಿದ್ದು, ಈ ಆಮಂತ್ರಣ ಪತ್ರದಲ್ಲಿ “ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವುದೇ ನೀವು ನಮಗೆ ನೀಡುವ ಉಡುಗೊರೆ’ ಎಂದು ಶಿವಪ್ರಸಾದ್‌ ಅವರು ಉಲ್ಲೇಖಿಸಿದ್ದರು.

ಈ ಬಗ್ಗೆ ಮಾಹಿತಿ ಪಡೆದುಕೊಂಡ ಚುನಾವಣ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ಎಪ್ರಿಲ್‌ 14ರಂದು ವರನ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ, ತಾನು ಮಾರ್ಚ್‌ 1ರಂದೇ 800 ಆಮಂತ್ರಣ ಪತ್ರವನ್ನು ಮುದ್ರಿಸಿದ್ದು, ಅದರಲ್ಲಿ ಹತ್ತು ಆಮಂತ್ರಣ ಪತ್ರ ಹೊರತುಪಡಿಸಿ ಎಲ್ಲವನ್ನೂ ಹಂಚಲಾಗಿದೆ. ಚುನಾವಣ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಆಮಂತ್ರಣ ಪತ್ರವನ್ನು ಮುದ್ರಿಸಿ, ವಿತರಿಸಲಾಗಿದ್ದು ಇದು ಚುನಾವಣ ನೀತಿ ಸಂಹಿತೆಯ ಉಲ್ಲಂಘನೆಯಾಗಿರುವುದಿಲ್ಲ. ಪ್ರಧಾನಿ ಮೋದಿಯ ಮೇಲಿನ ಪ್ರೀತಿ ಹಾಗೂ ರಾಷ್ಟ್ರದ ಮೇಲಿನ ಕಾಳಜಿಯಿಂದ ಇದನ್ನು ಉಲ್ಲೇಖೀಸಲಾಗಿದೆಯೇ ವಿನಃ ಕಾನೂನನ್ನು ಉಲ್ಲಂ ಸುವ ಬೇರಾವುದೇ ಉದ್ದೇಶವನ್ನು ಹೊಂದಿರುವುದಿಲ್ಲ ಎಂದು ಲಿಖಿತವಾಗಿ ಮನವಿ ಸಲ್ಲಿಸಿದ್ದರು. ಬಳಿಕ ಎ.18ರಂದು ವಿವಾಹ ಸಾಂಗವಾಗಿ ನೆರವೇರಿದ್ದು, ಎ.26ರ ಚುನಾವಣೆಯೂ ಮುಗಿದ ಬಳಿಕ ಅಧಿಕಾರಿಗಳು ಪೊಲೀಸ್‌ ಇಲಾಖೆಗೆ ದೂರು ಸಲ್ಲಿಸಿದ್ದು, ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರದಂದು ಆಮಂತ್ರಣ ಪತ್ರಿಕೆ ಮುದ್ರಣ ಮಾಡಿದ ಸಂಸ್ಥೆಯ ಮಾಲಕರನ್ನು ಕರೆಯಿಸಿ ಮಹಜರು ಪ್ರಕ್ರಿಯೆಯನ್ನು ನಡೆಸಲಾಯಿತು.

Previous Post

ಬೈಕಂಪಾಡಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತ : ಚಾಲಕನ ಸ್ಥಿತಿ ಗಂಭೀರ..!

Next Post

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಮೊಬೈಲ್ ಖರೀದಿಸಿ ವಾಲ್’ಪೇಪರ್’ನಲ್ಲಿ ಸಿಎಂ ಫೋಟೋ ಹಾಕಿದ ಮಹಿಳೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಮೊಬೈಲ್ ಖರೀದಿಸಿ ವಾಲ್’ಪೇಪರ್’ನಲ್ಲಿ ಸಿಎಂ ಫೋಟೋ ಹಾಕಿದ ಮಹಿಳೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved