ಉಡುಪಿ:ಮೇ 04:ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನೀರಿನ ಮೂಲಗಳಾದ ಸ್ವರ್ಣಾ ನದಿ, ಬಜೆ ಹಾಗೂ ಶೀರೂರು ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹಣೆ ಅತೀ ಕಡಿಮೆಯಾಗುತ್ತಿದ್ದು ಪ್ರಸ್ತುತ ಹೊಂಡಗಳಿಂದ ನೀರನ್ನು ಪಂಪಿಂಗ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ನೀರು ಕುಡಿಯಲು ಯೋಗ್ಯವಾಗಿದ್ದರೂ ಸಹ ಆರೋಗ್ಯದ ಹಿತದೃಷ್ಟಿ ಯಿಂದ ನೀರನ್ನು ಚೆನ್ನಾಗಿ ಕುದಿಸಿ ಕುಡಿಯುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ