Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಮಗ್ರ ಥಲಸ್ಸೆಮಿಯಾ ಕ್ಲಿನಿಕ್ ಅನ್ನು ಪ್ರಾರಂಭಿಸುವುದರೊಂದಿಗೆ ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನದ ಆಚರಣೆ…!!

Dhrishya News by Dhrishya News
08/05/2024
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಮಣಿಪಾಲ, 8 ಮೇ 2024: ಥಲಸ್ಸೆಮಿಯಾ ಒಂದು ಆನುವಂಶಿಕ ರಕ್ತದ ಕಾಯಿಲೆಯಾಗಿದೆ. ಈ ಅಸ್ವಸ್ಥತೆಯಲ್ಲಿ ರೋಗಿಯು ಸಾಕಷ್ಟು ಕೆಂಪು ರಕ್ತ ಕಣಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆದ್ದರಿಂದ, ಈ ಖಾಯಿಲೆ ಇರುವವರು ರಕ್ತ ಹೀನತೆಯಿಂದ ಬಳಳುತ್ತಾರೆ ಮತ್ತು ಜೀವನಪರ್ಯಂತ ನಿಯಮಿತ ರಕ್ತ ವರ್ಗಾವಣೆಯ ಮೇಲೆ ಅವಲಂಬಿತರಾಗಿರುತ್ತಾರೆ. ಥಲಸ್ಸೆಮಿಯಾ ರೋಗವನ್ನು ತಡೆಗಟ್ಟುವಿಕೆ, ಗುಣಪಡಿಸುವ ಆಯ್ಕೆಗಳು ಮತ್ತು ಥಲಸ್ಸೆಮಿಯಾ ರೋಗಿಗಳ ಆರೈಕೆಯ ಬಗ್ಗೆ ಜಾಗೃತಿ ಮೂಡಿಸಲು ಅಂತರರಾಷ್ಟ್ರೀಯ ಥಲಸ್ಸೆಮಿಯಾ ದಿನವನ್ನು ಪ್ರತಿವರುಷ ಮೇ 8 ರಂದು ಆಚರಿಸಲಾಗುತ್ತದೆ. ಈ ವರುಷ ಥಲಸ್ಸೆಮಿಯಾ ದಿನದ ಧ್ಯೇಯವೇನೆಂದರೆ “ಅಸ್ತಿತ್ವದಲ್ಲಿರುವ ಮತ್ತು ಭವಿಷ್ಯದ ಚಿಕಿತ್ಸೆಯ ಆಯ್ಕೆಗಳು ಥಲಸ್ಸೆಮಿಯಾ ರೋಗಿಗಳಿಗೆ ಸಿಗಬೇಕು ಮತ್ತು ಉತ್ತಮವಾದ ರೋಗ ಆರೈಕೆಗೆ ಸಮಾನ ಹಕ್ಕು ದೊರೆಯಬೇಕು ಎಂಬುದಾಗಿದೆ”

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಅಧಿಕಾರಿ ಡಾ.ವೀಣಾ ಕುಮಾರಿ ಅವರು ಕ್ಲಿನಿಕ್ ಉದ್ಘಾಟಿಸಿ ಮಾತನಾಡಿ “ಥಲಸ್ಸೆಮಿಯಾ ರೋಗಿಗಳಿಗೆ ಸಾಧ್ಯವಾದಷ್ಟು ಉತ್ತಮವಾದ ಆರೈಕೆ ಮತ್ತು ಚಿಕಿತ್ಸೆ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಮತ್ತು ಅದನ್ನು ಪಡೆಯಲು ಅವರು ಅರ್ಹರು ” ಎಂದು ತಿಳಿಸಿದರು. ಥಲಸ್ಸೆಮಿಯಾದಂತಹ ಕಾಯಿಲೆಗಳಿಗೆ ಸಾರ್ವಜನಿಕ ( ಸರ್ಕಾರಿ) ಖಾಸಗಿ ಸಹಭಾಗಿತ್ವದ ಮಾದರಿಯ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಡಾ.ಪದ್ಮರಾಜ್ ಹೆಗ್ಡೆ, ಡೀನ್ ಕೆಎಂಸಿ, ಮಣಿಪಾಲ ಇವರು ಈ ಸಮಗ್ರ ಚಿಕಿತ್ಸಾಲಯವನ್ನು ಆರಂಭಿಸಿದ್ದಕ್ಕಾಗಿ ವಿಭಾಗವನ್ನು ಅಭಿನಂದಿಸಿದರು. ಅವರು ಮಾತನಾಡುತ್ತಾ “ಬಹಳಷ್ಟು ಸಂಘ ಸಂಸ್ಥೆಗಳ ಬೆಂಬಲವು ಕೆಎಂಸಿಯಲ್ಲಿ ಬಡ ಮಕ್ಕಳಿಗೆ ಮೂಳೆ ಮಜ್ಜೆಯ ಕಸಿ ಮಾಡಲು ಅನುವು ಮಾಡಿಕೊಟ್ಟಿದೆ” ಎಂದು ಉಲ್ಲೇಖಿಸಿದರು . ಥಲಸ್ಸೆಮಿಯಾ ಕುರಿತು ಮಾಹಿತಿ ಪುಸ್ತಕವನ್ನು ಬಿಡುಗಡೆ ಮಾಡಿದ ಅವರು “ರೋಗದ ವಿವರವಾದ ಮಾಹಿತಿಯನ್ನು ಆರೈಕೆ ಮಾಡುವವರಿಗೆ ಅವರಿಗೆ ಉತ್ತಮವಾಗಿ ಅರ್ಥವಾಗುವ ಭಾಷೆಯಲ್ಲಿ ನೀಡಬೇಕು” ಎಂದು ಹೇಳಿದರು.

ಮಣಿಪಾಲದ ಕೆಎಂಸಿಯ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ವಾಸುದೇವ ಭಟ್ ಕೆ ಸ್ವಾಗತಿಸಿ, “ಈ ಕ್ಲಿನಿಕ್ ಅನ್ನು ಪ್ರಾರಂಭಿಸಲು ಅಂತರರಾಷ್ಟ್ರೀಯ ಥಲಸ್ಸೆಮಿಯಾ ದಿನಕ್ಕಿಂತ ಉತ್ತಮ ದಿನ ಬೇರೊಂದಿಲ್ಲ ಮತ್ತು ನಮ್ಮ ದೃಷ್ಟಿ ಈ ವರ್ಷದ ಥೀಮ್‌ಗೆ ಹೊಂದಿಕೆಯಾಗುತ್ತದೆ” ಎಂದು ಹೇಳಿದರು. ಇದೇ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಅರ್ಚನಾ ಎಂ.ವಿ ಸಮಗ್ರ ಥಲಸ್ಸೆಮಿಯಾ ಚಿಕಿತ್ಸಾಲಯ ಮತ್ತು ಅದರ ಕಾರ್ಯನಿರ್ವಹಣೆಯ ಅವಲೋಕನವನ್ನು ನೀಡಿದರು. ಈ ಚಿಕಿತ್ಸಾಲಯವು ಪ್ರತಿ ತಿಂಗಳ 2ನೇ ಶನಿವಾರದಂದು ಕಾರ್ಯನಿರ್ವಹಿಸಲಿದ್ದು, ಉಡುಪಿ ಮತ್ತು ನೆರೆಯ ಜಿಲ್ಲೆಗಳ ರೋಗಿಗಳಿಗೆ ಸೇವೆ ಒದಗಿಸಲಿದೆ ಎಂದು ಹೇಳಿದರು.

ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡ ರೋಗಿಗಳಿಗೆ ಸಹಾಯ ಧನ ಈ ಸಂದರ್ಭದಲ್ಲಿ ವಿತರಿಸಲಾಯಿತು. ಉಪ ವೈದ್ಯಕೀಯ ಅಧೀಕ್ಷಕ ಡಾ.ಶಿರನ್ ಶೆಟ್ಟಿ ವಂದಿಸಿದರು. ಔಪಚಾರಿಕ ಕಾರ್ಯಕ್ರಮದ ನಂತರ ಆರೈಕೆದಾರರು ಮತ್ತು ದಾದಿಯರಿಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ಡಾ.ಸ್ವಾತಿ ಪಿ.ಎಂ ಕಾರ್ಯಕ್ರಮ ನಿರ್ವಹಿಸಿದರು.

Previous Post

ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ‌ ನೀರಿಗೆ ಅಹಾಕಾರ‌ ಆದರೆ ಅಕ್ರಮ ಕಾಮಗಾರಿಗೆ ಯಥೇಚ್ಛ ನೀರು ಬಳಕೆ : ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಯವರಿಗೆ ಮನವಿ – ಶುಭದರಾವ್..!!

Next Post

SSLC ಪರೀಕ್ಷೆ ಫಲಿತಾಂಶ ಪ್ರಕಟ, ಉಡುಪಿ ಜಿಲ್ಲೆಗೆ ಮೊದಲ ಸ್ಥಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

SSLC ಪರೀಕ್ಷೆ ಫಲಿತಾಂಶ ಪ್ರಕಟ, ಉಡುಪಿ ಜಿಲ್ಲೆಗೆ ಮೊದಲ ಸ್ಥಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026

Recent News

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved