ಬಾಗಲಕೋಟೆ: ಗುರುವಾರ ಪ್ರಕಟಗೊಂಡಿರುವ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರು 625ಕ್ಕೆ 625 ಅಂಕ ಪಡೆದಿದ್ದಾರೆ. ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ರೈತ ಕುಟುಂಬದಲ್ಲಿ ಜನಿಸಿರುವ ಅಂಕಿತಾ ಸಾಧನೆಗೆ ಮುಧೋಳ ತಾಲೂಕು ಆಡಳಿತ ಹರ್ಷ ವ್ಯಕ್ತಪಡಿಸಿದೆ