Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭೀಕರ ರಸ್ತೆ ಅಪಘಾತದಲ್ಲಿ​ ಕಿರುತೆರೆ ನಟಿ ಪವಿತ್ರಾ ಜಯರಾಮ್ ದುರ್ಮರಣ..!!

Dhrishya News by Dhrishya News
12/05/2024
in ಸುದ್ದಿಗಳು
0
0
SHARES
252
VIEWS
Share on FacebookShare on Twitter

ಮೇ 12 :ತೆಲಂಗಾಣದ ಮಹಬೂಬ್‌ನಗರದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನ್ನಡದ ಕಿರುತೆರೆ ನಟಿ ಪವಿತ್ರಾ ಜಯರಾಮ್​​​ ಮೃತಪಟ್ಟಿದ್ದಾರೆ.

ಧಾರಾವಾಹಿಯೊಂದರ ಚಿತ್ರೀಕರಣ ಮುಗಿಸಿ ಬೆಂಗಳೂರಿನಿಂದ ಬರುತ್ತಿದ್ದಾಗ ಪವಿತ್ರಾ ಅವರಿದ್ದ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಆ ಬಳಿಕ ಬಸ್‌ಗೂ ಗುದ್ದಿದೆ. ಮಹಬೂಬ್‌ನಗರ ಜಿಲ್ಲೆಯ ಭೂತ್‌ಪುರ ತಾಲೂಕಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ತೆಲುಗು ಧಾರಾವಾಹಿಗಳಲ್ಲೂ ಜನಪ್ರಿಯರಾಗಿದ್ದ ಪವಿತ್ರಾ ಮೂರು ದಿನಗಳ ಹಿಂದೆ ಶೂಟಿಂಗ್‌ಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಶನಿವಾರ ರಾತ್ರಿ ತಮ್ಮ ಇಬ್ಬರು ಕುಟುಂಬ ಸದಸ್ಯರು ಹಾಗೂ ಚಾಲಕನ ಜತೆ ಹೈದರಾಬಾದ್‌ಗೆ ವಾಪಸ್​ ಹೊರಟಿದ್ದರು. ಆದ್ರೆ ಮಹಬೂಬ್‌ನಗರದಲ್ಲಿ ಅಪಘಾತವಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಆ ಕೂಡಲೇ ಚಿಕಿತ್ಸೆಗಾಗಿ ಮಹಬೂಬ್‌ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯ್ತು. ಆದ್ರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಕುಟುಂಬಸ್ಥರು ಹಾಗೂ ಚಾಲಕ ಗಾಯಗೊಂಡಿದ್ದಾರೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲಾಗಿದೆ.

ತೆಲುಗಿನಲ್ಲಿ ‘ತ್ರಿನಯನಿ’ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ಇದರಲ್ಲಿ ಖಳನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು 

ಮೂಲತಃ ಕರ್ನಾಟಕದ ಮಂಡ್ಯದವರಾದ ಪವಿತ್ರಾ ಜಯರಾಮ್ ಕನ್ನಡ ಕಿರುತೆರೆ ಮೂಲಕ ಪ್ರೇಕ್ಷಕರಿಗೆ ಪರಿಚಯವಾದರು. ಜೋಕಾಲಿ ಧಾರಾವಾಹಿಯಿಂದ ತಮ್ಮ ನಟನಾ ವೃತ್ತಿಜೀವನ ಆರಂಭಿಸಿದರು. ಆ ನಂತರ ಕನ್ನಡದಲ್ಲಿ ‘ರೋಬೋ ಫ್ಯಾಮಿಲಿ’, ‘ಗಾಳಿಪಟ’, ‘ರಾಧಾ ರಮಣ’, ‘ವಿದ್ಯಾ ವಿನಾಯಕ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ತ್ರಿನಯನಿ’ ಮತ್ತು ‘ನಿನ್ನೆ ಪೆಲ್ಲಡುತಾ’ ಧಾರಾವಾಹಿಗಳ ಮೂಲಕ ತೆಲುಗು ಪ್ರೇಕ್ಷಕರಿಗೆ ಅಚ್ಚುಮೆಚ್ಚಾಗಿದ್ದರು.

ಇವರ ನಟನೆ ಅಷ್ಟರ ಮಟ್ಟಿಗೆ ಜನಪ್ರಿಯವಾಗಿತ್ತು. ಆದ್ರೆ ವಿಧಿಯಾಟಕ್ಕೆ ಅವರಿಂದು ನಮ್ಮೊಂದಿಗಿಲ್ಲ. ಪವಿತ್ರಾ ಇನ್ನು ನೆನಪು ಮಾತ್ರ. ನಟಿ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿ, ಸಹನಟರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಶೇರ್ ಮಾಡುತ್ತಿದ್ದಾರೆ.

ಪವಿತ್ರಾ ಅವರ ನಿಧನದಿಂದ ಕನ್ನಡ ಮತ್ತು ತೆಲುಗು ಕಿರುತೆರೆ ಕಣ್ಣೀರಿಟ್ಟಿದೆ. ಪವಿತ್ರಾ ತಮ್ಮದೇ ಆದ ಅಭಿಮಾನಿ ಬಳಗವನ್ನೂ ಸಂಪಾದಿಸಿದ್ದರು. 

Previous Post

ಮಂಗಳೂರು : SSLC ಯಲ್ಲಿ ಜಸ್ಟ್ ಪಾಸ್ ಆದ ವಿದ್ಯಾರ್ಥಿಗೆ ಬ್ಯಾನರ್ ಹಾಕಿ ವಿಭಿನ್ನ ರೀತಿಯಲ್ಲಿ ಅಭಿನಂದನೆ ಸಲ್ಲಿಸಿದ ಸ್ನೇಹಿತರು..!

Next Post

HSRP ನಂಬರ್ ಪ್ಲೇಟ್ ಅಳವಡಿಕೆಗೆ ಮೇ 31 ಲಾಸ್ಟ್ ಡೇಟ್ : ಜೂನ್‌ 1ರಿಂದ ದಂಡ ವಸೂಲಿಗೆ ನಿರ್ಧಾರ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

HSRP ನಂಬರ್ ಪ್ಲೇಟ್ ಅಳವಡಿಕೆಗೆ ಮೇ 31 ಲಾಸ್ಟ್ ಡೇಟ್ : ಜೂನ್‌ 1ರಿಂದ ದಂಡ ವಸೂಲಿಗೆ ನಿರ್ಧಾರ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News