ಬೆಂಗಳೂರು : ಮೇ 15 :ರಾಜ್ಯದ ಪ್ರೌಢಶಾಲೆ ಶಿಕ್ಷಕರ 15 ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಲಾಗಿದೆ.
ಜೂನ್-ಜುಲೈನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಗೆ ನೋಂದಾಯಿಸಿರುವ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 5ರವರೆಗೆ ಆಯಾ ಪ್ರೌಢಶಾಲೆ ಗಳಲ್ಲಿ ವಿಶೇಷ ತರಗತಿಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನ ನೀಡಿದೆ.
ಮಂಗಳವಾರ ಸಂಜೆಯೇ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆಯಾ ವಿಷಯದ ಶಿಕ್ಷಕರುಗಳೇ ಶಾಲೆಗಳಿಗೆ ಹಾಜರಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ 1ರಲ್ಲಿ ಫೇಲಾಗಿರುವ, ಫಲಿತಾಂಶ ಇನ್ನಷ್ಟು ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಬೇಕೆಂದು ಸೂಚಿಸಲಾಗಿದೆ.