ಉಡುಪಿ : ಮೇ 15 :ಬೆಂಗಳೂರು, ಮೇ 15: ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಸಂಜೆ, ರಾತ್ರಿಯೂ ಮಳೆಯಾಗಿದೆ.
ಉಡುಪಿ ನಗರ, ಮಣಿಪಾಲ,ಬ್ರಹ್ಮಾವರ ಮಲ್ಪೆ, ಸಂತೆಕಟ್ಟೆ ಸುತ್ತುಮುತ್ತ ಉತ್ತಮ ಮಳೆಯಾಗಿದೆ.
ಈ ನಡುವೆ ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಸಿಡಿಲು ಬಡಿದು 38 ವರ್ಷದ ಸುರೇಶ್ ಶೆಟ್ಟಿ ಸಾವನಪ್ಪಿದ್ದಾರೆ.
ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ