Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪ್ರಧಾನ ಮಂತ್ರಿಯಾಗಿ ಮೋದಿ ಪ್ರಮಾಣವಚನ : ಪೇಜಾವರ ಶ್ರೀ ಗಳಿಗೆ ಅಹ್ವಾನ..!!

Dhrishya News by Dhrishya News
09/06/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ನವದೆಹಲಿ : ಜೂನ್ 09:ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮುರವರು ಪ್ರಮಾಣ ವಚನ ಭೋಧಿಸಲಿದ್ದಾರೆ.

ಇದೀಗ ಈ ಕಾರ್ಯಕ್ರಮಕ್ಕೆ ಉಡುಪಿ ಮಠದ ಪೇಜಾವರ ಶ್ರೀಗಳಿಗೆ ಪ್ರಧಾನಿ ಕಛೇರಿಯಿಂದ ಆಹ್ವಾನ ನೀಡಲಾಗಿದೆ. ನಿನ್ನೆ(ಜೂ.08) ಸಂಜೆ ಪಿಎಂಒ ನಿಂದ ಉಡುಪಿ ಪೇಜಾವರ ಸ್ವಾಮೀಜಿಗಳಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಕರೆ ಬಂದಿದೆ ಎನ್ನಲಾಗಿದೆ

ತಡರಾತ್ರಿ ಪ್ರಧಾನಮಂತ್ರಿ ಕಚೇರಿಯಿಂದ ಕರೆ ಮಾಡಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗೆ ಆಹ್ವಾನ ಮಾಡಲಾಗಿದೆ. ಕೆಂಪೇಗೌಡ ಏರ್​ಪೋರ್ಟ್​ನಿಂದ ದೆಹಲಿಗೆ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೆರಳಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಪೂರ್ಣಗೊಂಡಿದೆ. ಏಳು ವಿದೇಶಿ ನಾಯಕರು ಸೇರಿದಂತೆ ಒಟ್ಟು 8,000 ಗಣ್ಯರು ಉಪಸ್ಥಿತರಿರಲಿದ್ದಾರೆ. ಇನ್ನು ಗಣ್ಯರಲ್ಲಿ ವಿವಿಧ ವೃತ್ತಿಪರರು, ಸಾಂಸ್ಕೃತಿಕ ಕಲಾವಿದರು ಸೇರಿದ್ದಾರೆ. ಸಂಜೆ 7:31ರ ಹೊತ್ತಿಗೆ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಮೊದಲು ಮಹಾತ್ಮ ಗಾಂಧೀಜಿ ಅವರ ಸಮಾಧಿಸ್ಥಳವಾದ ರಾಜ್‌ಘಾಟ್‌ಗೆ ತೆರಳಿ ನಮನ ಸಲ್ಲಿಸಲಿದ್ದಾರೆ. ಇದಾದ ನಂತರ ತಮ್ಮ ರಾಜಕೀಯ ಗುರುವಾದ ಅಟಲ್‌ ಬಿಹಾರಿ ವಾಜಪೇಯಿ ಅವರ ಸಮಾಧಿ ಸ್ಥಳವಾದ ಸದೈವ ಅಟಲ್‌ಗೆ ಭೇಟಿ ನೀಡಿ, ಅವರಿಗೆ ಪುಷ್ಪನಮನ ಸಲ್ಲಿಸಲಿದ್ದಾರೆ.

7 ವಿದೇಶಿ ನಾಯಕರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ

Previous Post

ಕಾರ್ಕಳ : ಉದಯ ಶೆಟ್ಟಿ ಮುನಿಯಾಲು  ಹುಟ್ಟುಹಬ್ಬದ ಪ್ರಯುಕ್ತ  ಬೃಹತ್ ರಕ್ತದಾನ ಶಿಬಿರ, ಉಚಿತ ಹೃದಯ ರೋಗ, ಸಾಮಾನ್ಯ ಆರೋಗ್ಯ ಮತ್ತು ಕಣ್ಣಿನ ಪಾಸಣಾ ಶಿಬಿರ ಆಯೋಜನೆ..!!

Next Post

ತೆಕ್ಕಟ್ಟೆ : ಅಟೋ ರಿಕ್ಷಾದ ಮೇಲೆ ಮರ ಬಿದ್ದು ರಿಕ್ಷಾ ಜಖಂ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತೆಕ್ಕಟ್ಟೆ : ಅಟೋ ರಿಕ್ಷಾದ ಮೇಲೆ ಮರ ಬಿದ್ದು ರಿಕ್ಷಾ ಜಖಂ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved