Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಹೆಬ್ರಿಯಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾಹಿತಿ ಕೇಂದ್ರ ಉದ್ಘಾಟನೆ :ಗ್ರಾಮೀಣ ಜನರಿಗೆ ಅನುಕೂಲ- ಮೋಹನ್ ಶೆಟ್ಟಿ..!!

Dhrishya News by Dhrishya News
13/06/2024
in ಆರೋಗ್ಯ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಹೆಬ್ರಿ, ಜೂ.13: ಬೇರೆ ಬೇರೆ ಪ್ರದೇಶಗಳಲ್ಲಿ ಸುಮಾರು 150ಕ್ಕೂ ಮಿಕ್ಕಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾಹಿತಿ ಕೇಂದ್ರವನ್ನು ತೆರೆಯಲಾಗಿದ್ದು ಇದೀಗ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಬ್ರಿಯ ಚಾಣಕ್ಯ ಸಂಸ್ಥೆಯಲ್ಲಿ ಮಣಿಪಾಲ ಆಸ್ಪತ್ರೆಯ ಮಾಹಿತಿ ಕೇಂದ್ರವನ್ನ ತೆರೆಯಲಾಗಿದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಅಧಿಕಾರಿ ಮೋಹನ್ ಶೆಟ್ಟಿ ಹೇಳಿದರು.

ಅವರು ಜೂ.12 : ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ ಚಾಣಕ್ಯ ಟುಟೋರಿಯಲ್ ಕಾಲೇಜಿನಲ್ಲಿ ಆರಂಭಗೊಂಡ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಇದರ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

  •  ಸರತಿ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ

 ಗ್ರಾಮೀಣ ಪ್ರದೇಶ ಜನರು ಮಣಿಪಾಲ ಆಸ್ಪತ್ರೆಗೆ ಬಂದರೆ ಗಂಟೆ ಕಟ್ಟಲೆ ಸರತಿ ಸಾಲಿನಲ್ಲಿ ನಿಂತು ಕಾಯುವ ಪರಿಸ್ಥಿತಿಯನ್ನು ತಪ್ಪಿಸಲು ಈ ಮಾಹಿತಿ ಕೇಂದ್ರವನ್ನು ತೆರೆಯಲಾಗಿದ್ದು ಇಲ್ಲಿ ವಿವಿಧ ವಿಭಾಗದಲ್ಲಿ ವೈದ್ಯರ ಲಭ್ಯತೆ ಬಗ್ಗೆ ಮಾಹಿತಿ , ನೋಂದಣಿ, ಮಣಿಪಾಲ ಆರೋಗ್ಯ ಕಾರ್ಡ್ ಸೇವೆ ಲಭ್ಯವಿದೆ. ಮೊದಲ ದಿನವೇ ತಾವು ಭೇಟಿ ಮಾಡುವ ವೈದ್ಯರಿಗೆ ಫೈಲ್ ನ್ನು ನೋಂದಣಿ ಮಾಡುವುದರ ಮೂಲಕ ಶೀಘ್ರ ಸಂದರ್ಶನ ಪಡೆಯಬಹುದಾಗಿದೆ. ಅಲ್ಲದೆ ಆಸ್ಪತ್ರೆಯಲ್ಲಿ ರೆಫರೆಲ್ ಡೆಸ್ಕ್ ಮೂಲಕ ರೋಗಿಗಳಿಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತಿದೆ ಎಂದರು.

  •  ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ 

 ಹೆಬ್ರಿಯ ಮಾಹಿತಿ ಕೇಂದ್ರದಲ್ಲಿ ಮಣಿಪಾಲ್ ಆರೋಗ್ಯ ಕಾರ್ಡ್ ನೊಂದಣಿಗೆ ಅವಕಾಶವಿದೆ. ಒಂದು ವರ್ಷ ಹಾಗೂ ಎರಡು ವರ್ಷ ಅವಧಿಯ ವೈಯಕ್ತಿಕ ಮತ್ತು ಕೌಟುಂಬಿಕ ಕಾರ್ಡ್ ಮಾಡಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ಹೆಬ್ರಿ ಮಾಹಿತಿ ಕೇಂದ್ರವನ್ನ ಸಂಪರ್ಕಿಸಬಹುದು ಎಂದರು.

 *ಜನರಿಗೆ ಅನುಕೂಲವಾಗಿದೆ:* 

 ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾರನಾಥ್ ಬಂಗೇರ ಮಾತನಾಡಿ ಇಂತಹ ಸೌಲಭ್ಯವನ್ನು ತಾಲೂಕು ಕೇಂದ್ರವಾದ ಹೆಬ್ರಿಯಲ್ಲಿ ಕಲ್ಪಿಸುವುದರಿಂದ ಜನರಿಗೆ ತುಂಬಾ ಅನುಕೂಲವಾಗಲಿದೆ ಎಂದರು. 

  •  ನಿರಂತರ ಆರೋಗ್ಯ ತಪಾಸಣೆ ಮಾಡಿಸಿ

ಆರೋಗ್ಯದ ಬಗ್ಗೆ ನಿರ್ಲಕ್ಷದಿಂದ ಕಾಯಿಲೆ ದೊಡ್ಡದಾಗಿ ಜೀವಕ್ಕೆ ಆಪತ್ ಆಗಬಹುದು. ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಆಗಾಗ ಆರೋಗ್ಯ ತಪಾಸಣೆಯನ್ನು ಮಾಡಿಕೊಳ್ಳಬೇಕು. ಮಣಿಪಾಲ್ ಆರೋಗ್ಯ ಕಾರ್ಡ್ ಇದ್ದಲ್ಲಿ ಕಡಿಮೆ ವೆಚ್ಚದಲ್ಲಿ ಆರೋಗ್ಯ ತಪಾಸಣೆಯನ್ನು ಮಾಡಿಕೊಳ್ಳಲು ಸಾಧ್ಯ ಈ ನಿಟ್ಟಿನಲ್ಲಿ ಹೆಬ್ರಿಯಲ್ಲಿ ಇಂತಹ ಒಂದು ವ್ಯವಸ್ಥೆ ಸಿಕ್ಕಿರುವುದು ಜನಸಾಮಾನ್ಯರಿಗೆ ಅನುಕೂಲವಾಗಿದೆ ಎಂದು ಚಾರ ಗ್ರಾ. ಪಂ. ಅಧ್ಯಕ್ಷ ದಿನೇಶ್ ಶೆಟ್ಟಿ ಹೇಳಿದರು.

ಈ ಸಂದರ್ಭದಲ್ಲಿ ಹೆಬ್ರಿ ಜೆಸಿಐ ಅಧ್ಯಕ್ಷೆ ರಕ್ಷಿತಾ ಪಿ. ಭಟ್, ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ ರಘುರಾಮ್ ಶೆಟ್ಟಿ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಅನಿಲ್, ಸಂದೀಪ್ , ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲೆ ವೀಣಾ ಯು.ಶೆಟ್ಟಿ, ಚಾಣಕ್ಯ ಸಂಸ್ಥೆಯ ಗೌರವ ಸಲಹೆಗಾರ ನಿತ್ಯಾನಂದ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಹೆಬ್ರಿಯ ಚಾಣಕ್ಯ ಎಜುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರುಪಿಸಿ,ವಂದಿಸಿದರು.

Previous Post

ಜೇಸೀಸ್ ಶಾಲೆಯಲ್ಲಿ ಬಾಲಕಾರ್ಮಿಕ ವಿರೋಧಿ ದಿನಾಚರಣೆ..!!

Next Post

ಸೂರಾಲು: ಶಾಲಾ ಮಕ್ಕಳಿಗೆ ಉಚಿತ ಬರವಣಿಗೆ ಸಾಮಗ್ರಿ ಮತ್ತು ಸಮವಸ್ತ್ರ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸೂರಾಲು: ಶಾಲಾ ಮಕ್ಕಳಿಗೆ ಉಚಿತ ಬರವಣಿಗೆ ಸಾಮಗ್ರಿ ಮತ್ತು ಸಮವಸ್ತ್ರ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

20/03/2026
ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

20/03/2026

Recent News

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

20/03/2026
ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved